ಉಡುಪಿ: ಡಿ.21 ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ

ಉಡುಪಿ: ಪಲ್ಸ್ ಪೋಲಿಯೊ ಕಾರ್ಯಕ್ರಮವು ಡಿ. 21ರಂದು ಜಿಲ್ಲೆಯಾದ್ಯಂತ ನಡೆಯಲಿದ್ದು, ಲಸಿಕಾ ಕೇಂದ್ರಗಳಲ್ಲಿ ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ 5 ವರ್ಷ ವಯಸ್ಸಿನೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ನೀಡುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ತಪ್ಪದೇ ಲಸಿಕಾ ಕೇಂದ್ರಗಳಿಗೆ ಕರೆದೊಯ್ದು ಲಸಿಕೆ ಹಾಕಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು. ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರೀಯ ಪಲ್ಸ್ ಪೋಲಿಯೊ […]
ಹೆತ್ತ ಮಗಳನ್ನೇ ನಾಲ್ಕನೇ ಮಹಡಿಯಿಂದ ದೂಡಿ ಕೊಂದ ಮಹಾತಾಯಿ!

ಹೈದರಾಬಾದ್: ತಾಯಿಯೊಬ್ಬಳು ತಾನೇ ಹೆತ್ತು, ಬೆಳೆಸಿದ ಮಗಳನ್ನು ನಾಲ್ಕನೇ ಮಹಡಿಯಿಂದ ಎಸೆದು ಕೊಂದಿರುವ ಘಟನೆ ಹೈದರಾಬಾದದಿನಲ್ಲಿ ನಡೆದಿದೆ. ಕುಟುಂಬ ಸದಸ್ಯರೊಂದಿಗೆ ಜಗಳವಾದ ಬಳಿಕ 37 ವರ್ಷದ ಮಹಿಳೆಯೊಬ್ಬರು ಹೈದರಾಬಾದ್‌ನ ವಸತಿ ಕಟ್ಟಡದ ನಾಲ್ಕನೇ ಮಹಡಿಯಿಂದ ಎಂಟು ವರ್ಷದ ಮಗಳನ್ನು ಎಸೆದು ಕೊಂದಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಬಾಲಕಿ ಸಾವಿಗೀಡಾಗಿದ್ದಾಳೆ ಎಂದು ಮಲ್ಕಾಜ್‌ಗಿರಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಖಾಸಗಿ ಉದ್ಯೋಗಿಯಾಗಿರುವ ಮಹಿಳೆ ಭಾನುವಾರ ರಾತ್ರಿಯಿಂದ ತನ್ನ ಕುಟುಂಬ […]
ರಾಜೇಂದ್ರ ಭಟ್ ಕೆ ಅವರಿಗೆ ಜಯಂಟ್ಸ್ ಫೆಡರೇಶನ್ ರಾಜ್ಯ ಪ್ರಶಸ್ತಿ.

ಕಾರ್ಕಳ: ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಆಯುರ್ವೇದ ಭೂಷಣ ಎಂ ವಿ ಶಾಸ್ತ್ರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ರಾಜೇಂದ್ರ ಭಟ್ ಕೆ ಅವರಿಗೆ ಈ ವರ್ಷದ ರಾಜ್ಯಮಟ್ಟದ ಜಯಂಟ್ಸ್ ಫೆಡರೇಶನ್ ಅವಾರ್ಡ್ ದೊರೆತಿದೆ. ಅವರ ಶಿಕ್ಷಣರಂಗದ ಸೇವೆಯನ್ನು ಗುರುತಿಸಿ ಜಯಂಟ್ಸ್ ಫೆಡರೇಶನ್ ಈ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು ಉಡುಪಿಯಲ್ಲಿ ನಡೆದ ಜಯಂಟ್ಸ್ ಸಂಸ್ಥೆಯ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿ ಅವರನ್ನು ಗೌರವಿಸಲಾಗಿದೆ. ಅವರು ಕಳೆದ 37 ವರ್ಷಗಳಿಂದ ಇನ್ನಾ ಪ್ರೌಢಶಾಲೆಯಲ್ಲಿ ಗಣಿತ ಮತ್ತು ವಿಜ್ಞಾನ […]
ಕಾರ್ಕಳ:ಪ್ರಬಂಧ ಸ್ಪರ್ಧೆಯಲ್ಲಿ ಜ್ಞಾನಸುಧಾದ ಇಬ್ಬನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ತುಮಕೂರು:ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಸರಕಾರಿ ಪದವಿ ಪೂರ್ವ ಕಾಲೇಜು ಬಜಗೋಳಿಯಲ್ಲಿ ಕಾರ್ಕಳ ತಾಲೂಕು ಮಟ್ಟದ ಕನ್ನಡ ಪ್ರಬಂಧ ಸ್ಪರ್ದೆಯಲ್ಲಿ ಕಾರ್ಕಳಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನವಿಭಾಗದ ಇಬ್ಬನಿ ದ್ವಿತೀಯ ಸ್ಥಾನಿಯಾಗಿ ಉಡುಪಿ ಜಿಲ್ಲಾಮಟ್ಟಕ್ಕೆಆಯ್ಕೆ ಗೊಂಡಿರುತ್ತಾರೆ.
ತೀರ್ಥಹಳ್ಳಿ: ಬಿಕಾಂ ವಿದ್ಯಾರ್ಥಿನಿ ಹೃದಯಘಾತದಿಂದ ಮೃತ್ಯು.

ಚಿಕ್ಕಮಗಳೂರು: ರಾಜ್ಯದಲ್ಲಿ ಹೃದಯಾಘಾತದಿಂದ ಎಳೆಯ ಪ್ರಾಯದವರ ಸಾವಿನ ಪ್ರಮಾಣ ಮುಂದುವರಿದಿದೆ. 22 ವರ್ಷದ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಚಿಕ್ಕಮಗಳೂರಿನ ಶೃಂಗೇರಿ ತಾಲ್ಲೂಕಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ದಿಶಾ (22) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ದಿಶಾ, ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಜೆಸಿಬಿಎಂ ಕಾಲೇಜಿನಲ್ಲಿ ಬಿಕಾಂ (ಅಂತಿಮ ವರ್ಷ) ವ್ಯಾಸಂಗ ಮಾಡುತ್ತಿದ್ದಳು. ಇಂದು ಬೆಳಗ್ಗೆ ಶೃಂಗೇರಿ ಪಟ್ಟಣದ ಬಿಸಿಎಂ ಹಾಸ್ಟೆಲ್‌ನಲ್ಲಿದ್ದಾಗ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡು, ಕುಸಿದು ಬಿದ್ದು, ಸಾವನ್ನಪ್ಪಿದ್ದಾಳೆ.