ಉಡುಪಿ:ನವೆಂಬರ್ 19 ರಿಂದ ಡಿಸೆಂಬರ್ 10 ರ ವರೆಗೆ ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನ – ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ

ಉಡುಪಿ: ನವೆಂಬರ್ 19 ರಿಂದ ಡಿಸೆಂಬರ್ 10 ರ ವರೆಗೆ ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನ ಹಮ್ಮಿಕೊಳ್ಳಲಾಗಿದೆ. ಸದರಿ ದಿನಾಚರಣೆ ಬಯಲು ಬಹಿರ್ದೆಸೆ ಮುಕ್ತ ಸ್ಥಿತಿಯ ಸ್ಥಾನಮಾನವನ್ನು ಉಳಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ವಿಶ್ವ ಶೌಚಾಲಯ ದಿನಾಚರಣೆ ಪ್ರಯುಕ್ತ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ […]

ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ: ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ.

ಉಡುಪಿ, ನ.19: ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ನಿಮಿತ್ತ ನಡೆಯುವ ಕಾರ್ಯಕ್ರಮದ ಪ್ರಯುಕ್ತ ನವೆಂಬರ್ 19 ರಿಂದ 21 ರ ವರೆಗೆ ಮೂರು ಮಾರ್ಗದಿಂದ ಸ್ಟೇಟ್ ಬ್ಯಾಂಕ್ ಜಂಕ್ಷನ್‌ವರೆಗೆ ಈ ಕೆಳಗಿನಂತೆ ತಾತ್ಕಾಲಿಕ ಪರ್ಯಾಯ ಸಂಚಾರ ವ್ಯವಸ್ಥೆ ಕಲ್ಪಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಹೊರಡಿಸಿರುತ್ತಾರೆ. ನ.19 ರಂದು ಬಂಡಿಯಲ್ಲಿ ಗರುಡ ವಾಹನ ಉತ್ಸವ, ಕೆರೆದೀಪ ಪ್ರಯುಕ್ತ ಅಂದು ರಾತ್ರಿ 8 ಗಂಟೆಯಿ೦ದ 12 ರ ವರೆಗೆ ಘನವಾಹನಗಳು ಬಂಗ್ಲೆಗುಡ್ಡೆಯಿ೦ದ […]

ಉಡುಪಿ: ಯುವತಿ ನಾಪತ್ತೆ.

ಉಡುಪಿ, ನವೆಂಬರ್ 19: ನಗರದ ಗುಂಡಿಬೈಲಿನ ಫ್ಲ್ಯಾಟ್ ಒಂದರಲ್ಲಿ ವಾಸವಿದ್ದ ಮೋನಿಕಾ ಬಿ.ಎಸ್ (24) ಎಂಬ ಯುವತಿಯು ನವೆಂಬರ್ 14 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಉಡುಪಿ: ಉದ್ಘಾಟನೆ ಭಾಗ್ಯ ಕಾಣದೆ, ಅನಾಥ ಸ್ಥಿತಿಯಲ್ಲಿ ಸರಕಾರಿ ಭವ್ಯ ಕಟ್ಟಡ…!!

ಉಡುಪಿ: ದೊಡ್ಡಣಗುಡ್ಡೆಯ ಚಕ್ರತಿರ್ಥದ ಬಳಿ, ಕೊಟ್ಯಾಂತರ ರೂಪಾಯಿ ಹಣ ಸುರಿದು, ನಿರ್ಮಿಸಿರುವ ಸರಕಾರಿ ಕಟ್ಟಡವೊಂದು ಉದ್ಘಾಟನೆ ಭಾಗ್ಯ ಕಾಣದೆ ಅನಾಥ ಸ್ಥಿತಿಯಲ್ಲಿದ್ದು, ಸಾರ್ವಜನಿಕರ ಹಣವು ವ್ಯರ್ಥವಾಗಿರುವುದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ‌ಈ ಕಟ್ಟಡದ ಸುತ್ತಲು ಗಿಡಗಂಟಿಗಳು‌ ಬೆಳೆದು ನಿಂತಿದ್ದು.‌ ಕಳ್ಳಕಾಕರಿಗೂ ಅಡಗುತಾಣ ಆದಂತಾಗಿದೆ.‌‌ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿ ಬಂದಿವೆ. ಈ ಸುಸಜ್ಜಿತ ಕಟ್ಟಡವು ಯಾವ ಇಲಾಖೆಯ ಕಛೇರಿಗೆ ನಿರ್ಮಿಸಿದೆಂದು ತಿಳಿದುಬಂದಿಲ್ಲ. ಈ ಬಂಗಲೆ ಹಲವು ವರ್ಷಗಳಿಂದ ಅನಾಥವಾಗಿರುವುದು ವಿಪರ್ಯಾಸದ ಸಂಗತಿ. ಉಡುಪಿಯಲ್ಲಿ […]

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಹೈಕೋರ್ಟ್ ಜಡ್ಜ್ ವಿಶ್ವಜಿತ್ ಶೆಟ್ಟಿ ಭೇಟಿ

ಉಡುಪಿ: ಹೈಕೋರ್ಟ್ ಜಡ್ಜ್ ಶ್ರೀ ವಿಶ್ವಜಿತ್ ಶೆಟ್ಟಿ ಇಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿದರು. ದೇವಳದ ವತಿಯಿಂದ ಪೂರ್ಣ ಕುಂಭದೊಂದಿಗೆ ಬರಮಾಡಿಕೊಂಡು ನಾಡೋಜ ಡಾ. ಜಿ. ಶಂಕರ್ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಅಧ್ಯಕ್ಷರಾದ ಶ್ರೀ ಗಿರಿಧರ್ ಸುವರ್ಣ, ಶ್ರೀ ಮನೋಹರ್ ಶೆಟ್ಟಿ ‘ ಸಾಯಿರಾಧ’, ಸಂತೋಷ್ ಶೆಟ್ಟಿ ತೆಂಕರಗುತ್ತು, ಯೋಗೀಶ್ ಶೆಟ್ಟಿ ಕಾಪು, ಶೋಭಿತ್ ಶೆಟ್ಟಿ, ಉಮೇಶ್ ಶೆಟ್ಟಿ, ಮೋಹನ್ ಬಂಗೇರ ಕಾಪು, ದಿನೇಶ್ ಎರ್ಮಾಳ್, ಪ್ರಧಾನ […]