ನೀಲಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಅ. 11ರಿಂದ ಶರನ್ನವರಾತ್ರಿ ಮಹೋತ್ಸವದ ಸಂಭ್ರಮ

ಉಡುಪಿ: ಶ್ರೀ ಕ್ಷೇತ್ರ ನೀಲಾವರದ ಮಹತೋಭಾರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಅಕ್ಟೋಬರ್ 11ರಿಂದ 20ರವರೆಗೆ ಶರನ್ನವರಾತ್ರಿ ಮಹೋತ್ಸವ ಹಾಗೂ ಅಕ್ಟೋಬರ್ 21ರಂದು ವಿಜಯದಶಮಿ ಮಹೋತ್ಸವ ನಡೆಯಲಿದೆ. ನವರಾತ್ರಿ ಮಹೋತ್ಸವದ ಅಂಗವಾಗಿ ಪ್ರತಿದಿನ ಶ್ರೀ ದೇವಿಯ ಸನ್ನಿಧಿಯಲ್ಲಿ ದುರ್ಗಾ ಹೋಮ ನಡೆಯಲಿದ್ದು, ವಿಜಯದಶಮಿ ದಿನದಂದು ಸಾಮೂಹಿಕ ಚಂಡಿಕಾಯಾಗ ಹಾಗೂ ಸಂಜೆ ಸಾಮೂಹಿಕ ದೀಪ ನಮಸ್ಕಾರ ನೆರವೇರಲಿದೆ. ನವರಾತ್ರಿಯ ಪ್ರತಿದಿನ ಮಧ್ಯಾಹ್ನ ಮತ್ತು ರಾತ್ರಿ ವಿಶೇಷ ಅನ್ನಸಂತರ್ಪಣೆಯ ವ್ಯವಸ್ಥೆ ಮಾಡಲಾಗಿದೆ. ನವರಾತ್ರಿಯ ಪರ್ವದಿನಗಳಲ್ಲಿ ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ಮಕ್ಕಳಿಗೆ […]
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ವೈಭವ: ಅ.11ರಿಂದ ಮಂಗಳೂರು ದಸರಾ ಮಹೋತ್ಸವ

ಮಂಗಳೂರು: ಮೈಸೂರು ದಸರಾ ಬಳಿಕ ಕರಾವಳಿಯಲ್ಲಿ ಹೆಚ್ಚಿನ ಜನಾಕರ್ಷಣೆ ಹೊಂದಿರುವ ಮಂಗಳೂರು ದಸರಾ ಮಹೋತ್ಸವ ಅಕ್ಟೋಬರ್ 11ರಿಂದ ಆರಂಭವಾಗಲಿದೆ. ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅಕ್ಟೋಬರ್ 11ರಿಂದ 22ರವರೆಗೆ ಮಂಗಳೂರು ದಸರಾ ಹಾಗೂ ಶರನ್ನವರಾತ್ರಿ ಮಹೋತ್ಸವ ವಿಜೃಂಭಣೆಯಿಂದ ನಡೆಯಲಿದೆ. ಕೇಂದ್ರದ ಮಾಜಿ ವಿತ್ತ ಸಚಿವ ಹಾಗೂ ಕ್ಷೇತ್ರದ ಜೀರ್ಣೋದ್ಧಾರದ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಉತ್ಸವದ ಸಿದ್ಧತೆಗಳು ನಡೆಯುತ್ತಿವೆ. ಅಕ್ಟೋಬರ್ 11ರಂದು ವೈದಿಕ ಕಾರ್ಯಕ್ರಮಗಳೊಂದಿಗೆ ಉತ್ಸವ ಆರಂಭವಾಗಲಿದ್ದು, ಮಧ್ಯಾಹ್ನ 12 ಗಂಟೆಗೆ ಶ್ರೀ […]
ಉಚ್ಚಿಲ ದಸರಾಗೆ ವಿದ್ಯುದ್ದೀಪಗಳ ಮೆರುಗು

ಉಡುಪಿ: ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅ. 11ರಿಂದ 21ರವರೆಗೆ ನಡೆಯಲಿರುವ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ–2026ರ ಅಂಗವಾಗಿ ನಿರ್ಮಿಸಲಾಗಿರುವ ಆಕರ್ಷಕ ವಿದ್ಯುದ್ದೀಪಾಲಂಕಾರವನ್ನು ದಸರಾ ರೂವಾರಿ ನಾಡೋಜ ಡಾ. ಜಿ. ಶಂಕರ್ ಅವರು ಶನಿವಾರ ಉದ್ಘಾಟಿಸಿದರು. ಕರ್ನಾಟಕ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಭಕ್ತಾಭಿಮಾನಿಗಳು ಹಾಗೂ ಮೊಗವೀರ ಸಮಾಜದ ಸಹಕಾರದಲ್ಲಿ ಈ ಬಾರಿಯ ದಸರಾ ಉತ್ಸವ ಆಯೋಜಿಸಲಾಗಿದೆ. ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಪರಿಸರದಿಂದ ಪಡುಬಿದ್ರಿ ಮೂಲಕ ಕಾಪು […]
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ತೃತೀಯ ಲಿಂಗಿಗಳು ತೊಂದರೆ ನೀಡುತ್ತಿರುವ ಕುರಿತು ದೂರು: ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಿಂತು ವಾಹನ ಸವಾರರಿಗೆ ತೊಂದರೆ ನೀಡುವ ಹಾಗೂ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವ ಬಗ್ಗೆ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ, ಅಗತ್ಯ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೊದಲು ಅರಿವು, ಬಳಿಕ ಕಾನೂನು ಕ್ರಮ ರಾಷ್ಟ್ರೀಯ […]
ನ.6ರಂದು ಡಾ.ಜಿ ಶಂಕರ್ ಅವರಿಗೆ ಪಂಚವರ್ಣ ರಾಜ್ಯೋತ್ಸವ ಗೌರವ

ಕೋಟ: ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿವರ್ಷ ನಡೆಸಲ್ಪಡುವ ಕನ್ನಡ ರಾಜ್ಯೋತ್ಸವ ಸದ್ಭಾವನಾ 2026ರ ನಾಡುನುಡಿಗೆ ಭಾವ ನಮನ ಕಾರ್ಯಕ್ರಮ ನ.6ರಂದು ಸಂಜೆ ಕೋಟದ ಮಾಂಗಲ್ಯ ಮಂದಿರದ ಎದುರಿನ ಮೈದಾನದಲ್ಲಿ ಜರಗಲಿದೆ. ಈ ಪ್ರಯುಕ್ತ ರಾಜ್ಯದ ಪ್ರಸಿದ್ಧ ಸಾಧಕರಿಗೆ ಪಂಚವರ್ಣ ರಾಜ್ಯೋತ್ಸವ ಗೌರವ ಪ್ರದಾನ ಕಾರ್ಯಕ್ರಮ ಜರಗಲಿದ್ದು ಸಮಾಜ ಸೇವಕ ಡಾ.ಜಿ ಶಂಕರ್ ಫ್ಯಾುಲಿ ಟ್ರಸ್ಟ್ ಪ್ರವರ್ತಕ ಜಿ ಶಂಕರ್ ಅವರಿಗೆ ಪಂಚವರ್ಣ ರಾಜ್ಯೋತ್ಸವ ಗೌರವ ಗಣ್ಯರ ಸಮ್ಮುಖದಲ್ಲಿ […]