ನೆರೆ ಹಾಗೂ ಪ್ರಾಕೃತಿಕ ವಿಕೋಪ ಸಂದರ್ಭಗಳಲ್ಲಿ ಉಚಿತ ಸಹಾಯವಾಣಿಯನ್ನು ಸಂಪರ್ಕಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

ಉಡುಪಿ : ಮಳೆಯಿಂದ ಉಂಟಾಗುವ ನೆರೆ ಸೇರಿದಂತೆ ಪ್ರಕೃತಿ ವಿಕೋಪಗಳಲ್ಲಿ ಮಾನವ ಹಾನಿ ಹಾಗೂ ಹೆಚ್ಚಿನ ಆಸ್ತಿ ಹಾನಿ ಉಂಟಾಗದಂತೆ ತಪ್ಪಿಸಲು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ವಿಕೋಪಗಳಿಂದ ತೊಂದರೆಗೊಳಗಾದವರು ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಉಚಿತ ಸಹಾಯವಾಣಿ ಸಂಖ್ಯೆ 1077 ಅಥವಾ 0820-2574802, ಜಿಲ್ಲಾ ತುರ್ತು ಕಾರ್ಯಾಚರಣಾ ಕೇಂದ್ರಗಳನ್ನು 25 ಮೆಸ್ಕಾಂ ಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಸಹಾಯವಾಣಿ ಸಂಖ್ಯೆ 1912 […]

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ, ಧಾರ್ಮಿಕಸಭೆ

ಕುಲಶೇಖರ: ಮಣ್ಣಿನ ಮೂಲಕ ಕಲಶ ನಿರ್ಮಾಣ ಮಾಡುವ ಪ್ರಬುದ್ದ ಸಮುದಾಯ ಕುಲಾಲರದ್ದು. ಇದೊಂದು ಆದರ್ಶ ಸಮುದಾಯ. ಸಂಘಟನೆ ಅನ್ನುವುದು ಹಿಂದೂ ಸಮಾಜದ ಒಗ್ಗಟ್ಟಿನ ವೈಜ್ಞಾನಿಕ ವಿಧಾನ. ಹಿಂದೂ ಸಮಾಜದ ಒಗ್ಗಟ್ಟಿಗೆ ಜಾತಿ ಸಮುದಾಯದ ಸಂಘಟನೆ ಅಡಿಪಾಯ ಆಗಿದೆ. ದೇವರ ತಳಹದಿಯಲ್ಲಿ ಒಗ್ಗಟ್ಟಾಗಿ ಯಾವುದೇ ಕಾರ್ಯದಲ್ಲಿ ಮುಂದುವರಿದರೆ ಯಶಸ್ಸು ದೊರೆಯುತ್ತದೆ. ಕುಲದೇವರ ದೇಗುಲ ನಿರ್ಮಾಣಕ್ಕೆ ದಾನಿಗಳಿಂದ ದೊರೆತ ಸಹಕಾರವೇ ಸಾಕ್ಷಿಯಾಗಿದೆ, ಕುಲದೇವರು ಮತ್ತು ಕುಲಗುರುಗಳ ಆಶೀರ್ವಾದ ಸಮುದಾಯದ ಎಲ್ಲರ ಮೇಲೆ ಇರಲಿ ಎಂದು ಉಡುಪಿ ಪುತ್ತಿಗೆ ಮಠದ ಶ್ರೀ […]

ಜೂನ್ 1 ರಿಂದ ಜುಲೈ 31ರ ವರೆಗೆ ಮೀನುಗಾರಿಕೆ ನಿಷೇಧ

ಮಂಗಳೂರು/ಉಡುಪಿ: ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31ರ ವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನ ನಿಷೇಧಿಸಲಾಗಿದೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟಾರೀಕೃತ ಎಂಜಿನ್ ಹಾಗೂ ಸಾಂಪ್ರದಾಯಿಕ ಮತ್ತು ನಾಡದೋಣಿಗಳಲ್ಲಿ ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ […]

ಮೇ 25 ರಂದು ಉಡುಪಿ ಜಿಲ್ಲೆಯ ನೂತನ ಶಾಸಕರ ಅಭಿನಂದನಾ ಕಾರ್ಯಕ್ರಮ

ಉಡುಪಿ: ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮಗದೊಮ್ಮೆ ಭರ್ಜರಿ ವಿಜಯ ದಾಖಲಿಸಿರುವುದು ಉಡುಪಿ ಜಿಲ್ಲಾ ಬಿಜೆಪಿಗೆ ಹೆಮ್ಮೆ ತಂದಿದೆ. ಈ ಪ್ರಯುಕ್ತ ಮೇ 25, ಗುರುವಾರ ಸಂಜೆ ಗಂಟೆ 5.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯ ಬಳಿ ನಿರ್ಮಿಸಿರುವ ವೇದಿಕೆಯಲ್ಲಿ ಉಡುಪಿ ಜಿಲ್ಲೆಯ ಐವರು ಶಾಸಕರುಗಳಾದ ಯಶ್ಪಾಲ್ ಎ. ಸುವರ್ಣ ಉಡುಪಿ, ಗುರ್ಮೆ ಸುರೇಶ್ ಶೆಟ್ಟಿ ಕಾಪು, ವಿ.ಸುನೀಲ್ ಕುಮಾರ್ ಕಾರ್ಕಳ, ಕಿರಣ್ ಕುಮಾರ್ […]

ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ‘ಬ್ರಹ್ಮಕಲಶೋತ್ಸ’ ಪ್ರಯುಕ್ತ ದೇಗುಲದಲ್ಲಿ ನಡೆದ ವಿವಿಧ ಹೋಮಗಳು

ಉಡುಪಿ: ಕಾರ್ಕಳ ತಾಲೂಕಿನ ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ, ಶ್ರೀ ಭದ್ರಕಾಳಿ ದೇವರಿಗೆ ಮೇ.25 ರ ವರೆಗೆ ಬ್ರಹ್ಮಕಲಶೋತ್ಸವ ನಡೆಯಲ್ಲಿದ್ದು, ಮೇ.24 ರಂದು ಬ್ರಹ್ಮಕುಂಭಾಭಿಷೇಕ ನಡೆಯಲಿದೆ. ಆ ಪ್ರಯುಕ್ತ ದೇಗುಲದಲ್ಲಿ ಮೇ 22ರ ಬೆಳಿಗ್ಗೆ ಗಂಟೆ 8.00ರಿಂದ ಗಣಪತಿ ಹೋಮ, ಶ್ರೀ ಭದ್ರಕಾಳಿ ದೇವಿಗೆ ಶಾಂತಿ ಪ್ರಾಯಶ್ಚಿತ್ತ ಹೋಮ, ಚಂಡಿಕಾ ಹೋಮ, 108 ಕಲಶ ಸಹಿತ ಮಹಾ ಮಂತ್ರ ಹೋಮ, ಕಲಶಾಭಿಷೇಕ, ಮಹಾಪೂಜೆ 9 ಆವರ್ತನ ಸಪ್ತಶತಿ ಪಾರಾಯಣ, 10,001 ಸಂಖ್ಯೆಯಲ್ಲಿ […]