ಉಡುಪಿ: ಡಾ.ಕಾತ್ಯಾಯಿನಿ ಕುಂಜಿಬೆಟ್ಟು, ರಾಜಾರಾಮ್ ತಲ್ಲೂರಿಗೆ ಪ್ರಶಸ್ತಿ ಪ್ರದಾನ.

ಉಡುಪಿ: ಕ್ರಿ.ಶ 1930 ರಲ್ಲಿ ಸ್ಥಾಪನೆಗೊಂಡಿರುವ ಹಿರಿಯ ಸಂಸ್ಥೆಯಾದ ಶಿವಮೊಗ್ಗದ ಕರ್ನಾಟಕ ಸಂಘದ ಈ ಬಾರಿಯ ‘ಎಸ್‌. ವಿ. ಪರಮೇಶ್ವರ ಭಟ್ಟ ‘ ಪುಸ್ತಕ ಪ್ರಶಸ್ತಿಗೆ ಉಡುಪಿಯ ರಾಜಾರಾಮ್ ತಲ್ಲೂರು ಅವರ ಡಾಕ್ಯುಮೆಂಟ್ ಎಂಬ ಅನುವಾದಿತ ಕೃತಿ ಹಾಗೂ ‘ಎಂ. ಕೆ. ಇಂದಿರಾ ‘ ಪುಸ್ತಕ ಪ್ರಶಸ್ತಿಗೆ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅವರ ‘ಇರವಿನ ಅರಿವು’ ವಿಮರ್ಶಾಕೃತಿ ಪಾತ್ರವಾಗಿದ್ದು, ಸೆ.28 ರಂದು ಶಿವಮೊಗ್ಗದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ಕುವೆಂಪು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ.ಶರತ್ ಅನಂತಮೂರ್ತಿಯವರು […]

ಉಡುಪಿ: ಅ.2ರಂದು ಬೃಹತ್ ಜಾಥಾ ಮತ್ತು ಜನಜಾಗೃತಿ ಸಮಾವೇಶ

ಉಡುಪಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲೆ ಇದರ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಅಕ್ಟೋಬರ್ 2ರಂದು ಬೆಳಿಗ್ಗೆ ಗಂಟೆ 9ಕ್ಕೆ ಉಡುಪಿಯ ಜೋಡುಕಟ್ಟೆಯಿಂದ ರಾಜಾಂಗಣದವರೆಗೆ ‘ಬೃಹತ್ ಜನಜಾಗೃತಿ ಜಾಥಾ’ ಹಾಗೂ 11ಗಂಟೆಗೆ ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ‘ಬೃಹತ್ ಜನಜಾಗೃತಿ ಸಮಾವೇಶ’ ವನ್ನು ಆಯೋಜಿಸಲಾಗಿದೆ ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಹೇಳಿದರು. ಉಡುಪಿ ಜಿಲ್ಲಾ ಪತ್ರಿಕಾ ಭವನದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, […]

ಕಸ್ತೂರಿ ರಂಗನ್ ವರದಿ ಜಾರಿಗೆ ಮುಂಚೆ ಗೊಂದಲ ನಿವಾರಿಸಿ: ಹಳ್ಳಿಹೊಳೆ ಗ್ರಾಮ ಹಿತರಕ್ಷಣಾ ಸಮಿತಿ ಆಗ್ರಹ

ಉಡುಪಿ: ಕಸ್ತೂರಿ ರಂಗನ್ ವರದಿ ಜಾರಿಗೆ ಮುಂಚೆ ಜನರ ವಿಶ್ವಾಸ ಪಡೆದು ಗೊಂದಲ ನಿವಾರಿಸಬೇಕು ಎಂದು ಹಳ್ಳಿಹೊಳೆ ಗ್ರಾ.ಪಂ ಅಧ್ಯಕ್ಷ ಮಂಜುನಾಥ್ ಶೆಟ್ಟಿ ಹೇಳಿದರು.ಈ ಕುರಿತು ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲೆಯ ಬೈಂದೂರು ತಾಲೂಕಿನ ಹಳ್ಳಿಹೊಳೆ ಗ್ರಾಮದ ಸುಮಾರು 4,358 ಎಕರೆ ಭೂಮಿ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿ, ಕೇಂದ್ರ ಪರಿಸರ, ಅರಣ್ಯ ಸಚಿವಾಲಯ ಮತ್ತೊಮ್ಮೆ ಕರಡು ಅಧಿಸೂಚನೆ ಹೊರಡಿಸಿದೆ. ಈ ಪ್ರಕಾರ ಹಳ್ಳಿಹೊಳೆ ಗ್ರಾಮದ 7,240.50 […]

ಕಾರ್ಕಳ: ಮಿನಿ‌ ಲಾರಿ- ದ್ವಿಚಕ್ರ ವಾಹನ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಮೃತ್ಯು

ಉಡುಪಿ: ಮಿನಿ‌ ಲಾರಿ ಹಾಗೂ ದ್ವಿಚಕ್ರ ವಾಹನ ಮಧ್ಯೆ ಭೀಕರ ಅಪಘಾತ ನಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾರ್ಕಳ- ಧರ್ಮಸ್ಥಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.ಬೈಕ್ ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳು ಪ್ರಯಾಣಿಸುತ್ತಿದ್ದು, ಅಪಘಾತದ ರಭಸಕ್ಕೆ ನಾಲ್ವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕುಂದಾಪುರ:ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 4 ವಿದ್ಯಾರ್ಥಿಗಳು ಕುಸ್ತಿ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.

ಕುಂದಾಪುರ : ಸೆಪ್ಟೆಂಬರ್ 28 ರಂದು ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪ್ರತೀಕ್ ಕುಂದರ್, ಸ್ಕಂದ, ಕೆ. ಶ್ರೀನಿತಾ ಎಸ್. ಕಾಮತ್, ವನಿಷಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಶುಭ ಹಾರೈಸಿದ್ದಾರೆ.