ಬೈಂದೂರಿನಲ್ಲಿ ವಸ್ತು ಮರು ಪಡೆಯುವ ಸೌಲಭ್ಯ ಕೇಂದ್ರ ಸ್ಥಾಪನೆ

ಉಡುಪಿ: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ವತಿಯಿಂದ ಸ್ವಚ್ಛ ಭಾರತ್ ಮಿಷನ್ ನಗರ 2.0 ಯೋಜನೆಯಡಿ ನವೀಕರಿಸಿ ಮರು ಬಳಸಬಹುದಾದ ವಸ್ತುಗಳ ಸಂಗ್ರಹ ಮಾಡಲು ಮೇ 20 ರಿಂದ ಜೂನ್ 5 ರ ವರೆಗೆ ಬೈಂದೂರು ಪಟ್ಟಣ ಪಂಚಾಯತ್ ಕಚೇರಿ ಬಳಿ ವಸ್ತು ಮರು ಪಡೆಯುವ ಸೌಲಭ್ಯ ಕೇಂದ್ರವನ್ನು ಸ್ಥಾಪಿಸಲಾಗುವುದು. ಸಾರ್ವಜನಿಕರು ಮೇಲ್ಕಂಡ ಕೇಂದ್ರದಲ್ಲಿ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಸೇರಿದಂತೆ ಆಟಿಕೆ ವಸ್ತುಗಳನ್ನು, ಬಳಸಿದ ಬಟ್ಟೆ, ದಿನ ಪತ್ರಿಕೆಗಳು, ಹಳೆಯ ಪುಸ್ತಕಗಳು ಹಾಗೂ ಎಲೆಕ್ಟ್ರಾನಿಕ್ […]

ಉಡುಪಿ ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘದ ಸ್ಥಳಾಂತರಗೊಂಡ ಕಚೇರಿಯ ಉದ್ಘಾಟನೆ 

ಉಡುಪಿ: ನಗರದ ರಾಜ್ ಟವರ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರಿ ಸಂಘದ ಕಚೇರಿಯು ರವಿವಾರ ಪಿಪಿಪಿ ಕ್ರಾಸ್ ರಸ್ತೆಯ ಆಶಾ ಚಂದ್ರ ಟ್ರೇಡ್ ಸೆಂಟರ್ ಗೆ ಸ್ಥಳಾಂತರಗೊಂಡು ಉದ್ಘಾಟನೆಗೊಂಡಿತು. ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ನೂತನ ಕಚೇರಿಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿ ಸಂಸ್ಥೆಯ ಉತ್ತರೋತ್ತರ ಅಭಿವೃದ್ಧಿಗೆ ಹಾರೈಸಿದರು. ಶಾಸಕ ಯಶ್ ಪಾಲ್ ಎ. ಸುವರ್ಣ ಮಾತನಾಡಿ, ಹೋಟೆಲ್ ಉದ್ಯಮಕ್ಕೆ ಉಡುಪಿಯು ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿದ್ದು, ಸಹಕಾರ ಕ್ಷೇತ್ರದಲ್ಲಿಯೂ […]

ಕಾಪು: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ವಿಜಯಯಾತ್ರೆ

ಕಾಪು: ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರದ ವತಿಯಿಂದ ನೂತನ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ವಿಜಯೋತ್ಸವ ಶನಿವಾರ ಕ್ಷೇತ್ರದ ದಕ್ಷಿಣ ಬ್ಲಾಕ್ ನಲ್ಲಿ ಜರುಗಿತು. ಶನಿವಾರ ಬೆಳಗ್ಗೆ ಮಟ್ಟು ಬೀಚ್ ನಿಂದು ಆರಂಭಗೊಂಡ ರೋಡ್ ಶೋ ಕೋಟೆ, ಕಟಪಾಡಿ, ಉದ್ಯಾವರ, ಸಂಪಿಗೆ ನಗರ, ಕಟಪಾಡಿ, ಕುರ್ಕಾಲು, ಬಂಟಕಲ್ಲು, ಶಿರ್ವ, ಕುತ್ಯಾರು, ಪಲಿಮಾರು, ಪಡುಬಿದ್ರಿ, ಹೆಜಮಾಡಿ, ಪಡುಬಿದ್ರಿ ತೆಂಕ, ಅದಮಾರು, ಎಲ್ಲೂರು, ಪಣಿಯೂರು, ಉಚ್ಚಿನ, ಮೂಳೂರು, ದೀಪ ಸ್ತಂಭ, ಕೈಪುಂ ಜಾಲು, ಕೋತಲ್ ಕಟ್ಟೆ ಕಾಪು ಪೇಟೆ […]

ಉಪ ಯೋಜನಾ ನಿರ್ದೇಶಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಆತ್ಮ ಯೋಜನೆಯಡಿ ಉಪ ಯೋಜನಾ ನಿರ್ದೇಶಕರು – 1 ಹುದ್ದೆಯನ್ನು ನೇರ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು, ಕೃಷಿ ಹಾಗೂ ಕೃಷಿ ಸಂಬಂಧಿತ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಸಿ ಬ್ಲಾಕ್, 2ನೇ ಮಹಡಿ, […]

ಮೇ 23 ರಂದು ಮೆಸ್ಕಾಂ ಜನ ಸಂಪರ್ಕ ಸಭೆ

ಉಡುಪಿ: ಮೆಸ್ಕಾಂ ಮಣಿಪಾಲ ಉಪವಿಭಾಗ ಕಚೇರಿಯಲ್ಲಿ ಮೇ 23 ರಂದು ಬೆಳಗ್ಗೆ 10.30 ಕ್ಕೆ ಜನ ಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿರುವರು. ಗ್ರಾಹಕರು ದೂರವಾಣಿ ಸಂಖ್ಯೆ: 0820-2573699 ಅನ್ನು ಸಂಪರ್ಕಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.