ಅಂಬಾಗಿಲು: ಲಾರಿಯ ಚಕ್ರದಡಿಗೆ ಸಿಲುಕಿದ ಬೈಕ್: ಪವಾಡ ಸದೃಶವಾಗಿ ಬದುಕಿದ ಸವಾರ

ಉಡುಪಿ: ಕೆಲವು ತಿಂಗಳುಗಳ ಹಿಂದೆ ಅಂಬಾಗಿಲು ಪೆರಂಪಳ್ಳಿ ಕ್ರಾಸ್ ನಲ್ಲಿ ಅಪಘಾತ ಸಂಭವಿಸಿ ಜೀವ ಬಲಿಯಾಗಿತ್ತು. ಇಂದು ಅದೇ ಘಟನೆಯನ್ನು ನೆನಪಿಸುವ ಅಪಘಾತ ಅದೇ ಸ್ಥಳದಲ್ಲಿ ಸಂಭವಿಸಿದ್ದು ದ್ವಿಚಕ್ರ ಸವಾರ ಕೂದಲೆಳೆ ಅಂತರದಲ್ಲಿ ಬಚಾವಾಗಿದ್ದಾನೆ. ಲಾರಿಯೊಂದು ಅಂಬಾಗಿಲಿನಿಂದ ಪೆರಂಪಳ್ಳಿ ಕಡೆಗೆ ಟರ್ನ್ ತೆಗೆದುಕೊಳ್ಳುತ್ತಿರುವಾಗ ಬೈಕ್ ಸವಾರ ಲಾರಿಯಡಿಗೆ ಸಿಲುಕಿ ಪವಾಡ ಸದೃಶವಾಗಿ ಪಾರಾದ ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಇಂತಹ ಕ್ರಾಸ್ ಗಳು ಉಡುಪಿಯಲ್ಲಿ ಹಲವು ಕಡೆ ಇದ್ದು ದ್ವಿಚಕ್ರ ಸವಾರರು ಒಂಚೂರು ಮೈಮರೆತರೂ ಪ್ರಾಣಕ್ಕೇ […]

ರೈತರ ಆಧಾರ್ ಲಿಂಕ್ ಅನ್ಯ ಉದ್ದೇಶಕ್ಕೆ ಬಳಸಿಕೊಂಡರೆ ಉಗ್ರ ಹೋರಾಟ; ಕೃಷಿಕ ಸಂಘ ಎಚ್ಚರಿಕೆ

ಉಡುಪಿ: ಉಡುಪಿ ಜಿಲ್ಲಾ ಕೃಷಿಕ ಸಂಘ ಜಿಲ್ಲೆಯಲ್ಲಿರುವ ರೈತರ ಕೃಷಿ ಪಂಪ್‌ಸೆಟ್‌ಗಳ ಗಣತಿಗಾಗಿ ಮಾತ್ರವೇ ಆಧಾರ್ ಜೋಡಣಿಗೆ ಒಪ್ಪಿಗೆ ನೀಡುತ್ತಿದ್ದೇವೆಯೇ ಹೊರತು ಬೇರೆ ಯಾವುದೇ ಉದ್ದೇಶಕ್ಕೂ ಒಪ್ಪಿಗೆ ಇಲ್ಲ. ಮೆಸ್ಕಾಂ ಹಾಗೂ ಸರಕಾರ ರೈತರ ಆಧಾರ್ ಲಿಂಕ್ ಅನ್ಯ ಉದ್ದೇಶಕ್ಕೆ ಬಳಸಿಕೊಂಡರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕೃಷಿಕ ಸಂಘವು ಎಚ್ಚರಿಕೆ ನೀಡಿದೆ. ಉಡುಪಿ ಜಿಲ್ಲಾ ಕೃಷಿಕ ಸಂಘದ ವತಿಯಿಂದ ಕುಂಜಿಬೆಟ್ಟು ಮೆಸ್ಕಾಂ ಅಧೀಕ್ಷಕರ ಕಚೇರಿಯಲ್ಲಿ ರೈತರು ಮತ್ತು ಮೆಸ್ಕಾಂ ಅಧಿಕಾರಿಗಳೊಂದಿಗೆ ನಡೆದ ಸಂವಾದದಲ್ಲಿ ಮುಖಂಡರು ಎಚ್ಚರಿಕೆ […]

ಮಹಿಳಾ ವಿವಿಧೋದ್ದೇಶ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯಕಾರ್ಯನಿರ್ವಾಹಕರಿಗೆ ಜಿಲ್ಲಾಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟನೆ

ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯಕಾರ್ಯನಿರ್ವಾಹಕರಿಗೆ ಒಂದು ದಿನದ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮವನ್ನು‌ ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಂಗಣದಲ್ಲಿ ಇಂದು ಆಯೋಜಿಸಲಾಯಿತು‌. ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ […]

ಬಡ ಜನರ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಮುಂದಾದರೆ ರಾಜ್ಯವ್ಯಾಪಿ ಹೋರಾಟ: ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಕಾಂಗ್ರೆಸ್ ಸರ್ಕಾರ ಬಡ ಜನರ ಬಿಪಿಎಲ್ ಕಾರ್ಡ್ ರದ್ದುಪಡಿಸುವ 6ನೇ ಗ್ಯಾರಂಟಿ ಜಾರಿಗೆ ತಯಾರಿ ನಡೆಸುತ್ತಿದೆ. ಮುಡಾ, ವಾಲ್ಮೀಕಿ ಸಹಿತ ವಿವಿಧ ಹಗರಣಗಳ ಮೂಲಕ ಕೋಟಿಗಟ್ಟಲೆ ಭ್ರಷ್ಟಾಚಾರ ನಡೆಸಿರುವ ಕಾಂಗ್ರೆಸ್ ಸರ್ಕಾರ ಇದೀಗ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ನಡೆಸಲು ಹೊರಟಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆರೋಪಿಸಿದರು. ಉಡುಪಿ ಪತ್ರಿಕಾಭವನದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಗ್ಯಾರೆಂಟಿಗಳ ಘೋಷಣೆಯ ಮೂಲಕ ಅಧಿಕಾರಕ್ಕೆ ಬಂದು ತಾನು ಘೋಷಿಸಿದ ಐದು ಗ್ಯಾರಂಟಿಗಳು ಕೂಡ […]

ಮುಲ್ಕಿ: ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ ಈಗ ಕೆಪಿಸಿಇಎ ಎಸ್ ಸಿ ಯ ಅಧಿಕೃತ ಮೆಂಬರ್ ಒಷಿಯನ್ ಪರ್ಲ್ ಸಭಾಂಗಣದಲ್ಲಿ ಸಂಭ್ರಮಾಚರಣೆ

ಬೆಳ್ತಂಗಡಿ: ACCE(I) ಬೆಳ್ತಂಗಡಿ ಸೆಂಟರ್ ನ ವತಿಯಿಂದ ಭಾರತರತ್ನ ಸರ್ ಎಂ.ವಿ. ಯವರ 164 ನೇ ಹುಟ್ಟುಹಬ್ಬದ ಪ್ರಯುಕ್ತ ಇಂಜಿನಿಯರ್ಸ್ ಡೇ ಮತ್ತು ಕರ್ನಾಟಕ ಪ್ರೊಫೆಷನಲ್ ಸಿವಿಲ್ ಇಂಜಿನಿಯರ್ಸ್ ಆಕ್ಟ್ ಜಾರಿಯಾದ ಸಂತೋಷಕ್ಕೆ ಸಂಭ್ರಮಾಚರಣೆ ಸಂಭ್ರಮ 2024,ಉಜಿರೆಯ ಒಷಿಯನ್ ಪರ್ಲ್ ಸಭಾಂಗಣದಲ್ಲಿ ನಡೆಯಿತು. ಈ ಸಂಭ್ರಮದಲ್ಲಿ ಕರ್ನಾಟಕ ಪ್ರೊಫೆಷನಲ್ ಸಿವಿಲ್ ಇಂಜಿನಿಯರ್ಸ್ ಆಕ್ಟ್ ಜಾರಿಯಾಗಲು ನಿರಂತರ ಶ್ರಮವಹಿಸಿದ ಇಂಜಿನಿಯರುಗಳಾದ ಶ್ರೀಕಾಂತ್ ಚನಲ್, ಅಜಿತ್ ಕುಮಾರ್, ಡಾ.ಅಶ್ವತ್, ಡಾ.ಎಮ್ ಆರ್ ಕಲಗಲ್ ಮತ್ತು ವಿಧಾನ ಪರಿಷತ್ ಸದಸ್ಯರಾದ ಕೆ […]