ಉಡುಪಿ:ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟುವುದರ ಮೂಲಕ ರೇಬಿಸ್ ರೋಗ ನಿಯಂತ್ರಣಕ್ಕೆ ಸ್ಥಳೀಯ ಸಂಸ್ಥೆಯವರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿ ಸಂತಾನ ನಿಯಂತ್ರಣ, ಅನುಷ್ಠಾನ ಮೇಲ್ವಿಚಾರಣೆ ಸಮಿತಿ ರಚನೆ ಮತ್ತು ಸ್ಥಳೀಯ ಮಟ್ಟದ ಸಮಿತಿ ರಚನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ನಾಯಿ ಕಡಿತದ […]
ಮಣಿಪಾಲ MSDCಯಲ್ಲಿ “ಮರದ ಕೆಲಸ” ಕುರಿತು ಮೂರು ತಿಂಗಳ ಕೌಶಲ್ಯ ತರಬೇತಿ.

ಮಣಿಪಾಲ: ಮಣಿಪಾಲ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮರದ ಕೆಲಸ(Wood Working) ಕುರಿತು ಮೂರು ತಿಂಗಳ ಕೌಶಲ್ಯ ತರಬೇತಿ ನಡೆಯಲಿದೆ. ಮಣಿಪಾಲ ಕೌಶಲ್ಯ ತರಬೇತಿ ಕೇಂದ್ರ ಮಣಿಪಾಲದಲ್ಲಿ ತರಬೇತಿ ಪಡೆದು ಸ್ವಂತ ಉದ್ಯೋಗ ಪ್ರಾರಂಭಿಸಬಹುದು. ತರಬೇತಿ ಅವಧಿ: 12 ವಾರಗಳುಕಾಲಾವಧಿ: 10.00 ರಿಂದ 4.00ರ ತನಕ. ಸೋಮವಾರದಿಂದ ಶುಕ್ರವಾರದವರೆಗೆ ತರಬೇತಿಗಳು ಇರಲಿವೆ. ತರಬೇತಿ ಶುಲ್ಕ: 25000 ರೂ., ಈ ಕೌಶಲ್ಯ ತರಬೇತಿಯ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತರು ಸಂಪರ್ಕಿಸಬಹುದು.ಮೊ: 8123163934, 8123163935
ಕುಂದಾಪುರ: ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರುತಿಕಾ ಶೆಟ್ಟಿ ಜಿಲ್ಲಾ ಮಟ್ಟದ ಕನ್ನಡ ಭಾಷಣ ಸ್ಪರ್ಧೆಗೆ ಆಯ್ಕೆ.

ಕುಂದಾಪುರ: ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲೆಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ ತಾಲೂಕು ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರುತಿಕಾ ಶೆಟ್ಟಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಬೈಂದೂರಿನ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

ಉಡುಪಿ: ಬೈಂದೂರಿನ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ (85) ಅವರು ಶುಕ್ರವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನ ಹೊಂದಿದರು.ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರು ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಪತ್ನಿ ಕೆಲ ವರ್ಷಗಳ ಹಿಂದೆ ನಿಧನರಾಗಿದ್ದರು. ಇವರು 2008ರಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು. ಅದಕ್ಕೂ ಮೊದಲು ಎರಡು ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು. ಸ್ನಾತಕೋತ್ತರ ಪದವಿಧದರಾಗಿರುವ ಇವರು ಉದ್ಯಮಿಯಾಗಿ ಹೆಸರು ಗಳಿಸಿದ್ದರು.
ಉಡುಪಿ:ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ:ಜಿಲ್ಲೆಯಲ್ಲಿ ಸಪ್ಟೆಂಬರ್ 29 ರಂದು ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷೆ ಪರೀಕ್ಷೆ ಜರುಗಲಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ಯಾವುದೇ ಅವ್ಯವಹಾರಗಳಿಗೆ ಆಸ್ಪದ ನೀಡದೇ ಸುವ್ಯವಸ್ಥಿತವಾಗಿ ಜರುಗಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚಿಸಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿಗೆ ನಡೆಸುವ ಕನ್ನಡ ಭಾಷೆ ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲಾ ಕೇಂದ್ರದಲ್ಲಿ ಮೇಲ್ವಿಚಾರಣೆ ನಡೆಸಲು ನೇಮಕ ಮಾಡಲಾದ […]