ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ನೇಮಕ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ನೇಮಿಸಿ ಅಖಿಲ ಭಾರತ ಕಾಂಗ್ರೆಸ್ ಪಕ್ಷ ಆದೇಶ ಹೊರಡಿಸಿದೆ. ಪಕ್ಷದ ಉಪಾಧ್ಯಕ್ಷರಾಗಿ ಸೇವೆಸಲ್ಲಿಸುತ್ತಿದ್ದ ಕಿಶನ್ ಹೆಗ್ಡೆ ಕಳೆದ ಒಂದು ವರ್ಷದ ಹಿಂದೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದರು. ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿರುವ ಸಮಯದಲ್ಲಿ ಕಾಂಗ್ರೆಸ್ ಪಕ್ಷವು ಹೊಸ ಅಧ್ಯಕ್ಷರನ್ನು ಘೋಷಣೆ ಮಾಡಿದ್ದು, ನೂತನ ಅಧ್ಯಕ್ಷರು ಪಕ್ಷವನ್ನು ಸಂಘಟಿಸಿ ಮುನ್ನಡೆಸುವ ಜವಾಬ್ದಾರಿ ಹೊತ್ತಿದ್ದಾರೆ.
ಹೆಬ್ರಿ: ಬರೋಬ್ಬರಿ 15 ಅಡಿ ಉದ್ದ 12.50 ಕೆಜಿ ತೂಕದ ಕಾಳಿಂಗ ಸರ್ಪ ಪತ್ತೆ; ಇದು ಕಾಳಿಂಗ ಸರ್ಪಗಳ ಸಂತಾನೋತ್ಪತ್ತಿ ಸಮಯ

ಹೆಬ್ರಿ: ಬರೋಬ್ಬರಿ 15 ಅಡಿ ಉದ್ದದ 12.5 ಕೆಜಿ ತೂಕದ ಕಾಳಿಗ ಸರ್ಪವೊಂದು ಹೆಬ್ರಿ ತಾಲೂಕಿನ ನಾಡ್ಪಾಲ್ ಗ್ರಾಮದಲ್ಲಿ ಕಾಣಸಿಕ್ಕಿದೆ. ಹೆಬ್ರಿಯ ಸೀತಾ ನದಿ ತೀರದಲ್ಲಿರುವ ಭಾಸ್ಕರ್ ಶೆಟ್ಟಿ ಎಂಬವರ ಮನೆಯ ಸಮೀಪ ಕಾಳಿಂಗವೊಂದು ಪ್ರತ್ಯಕ್ಷವಾಗಿದೆ. ಇದರ ಬಗ್ಗೆ ಮಾಹಿತಿ ಪಡೆದ ಉರಗತಜ್ಞ ಡಾ.ಗೌರಿ ಶಂಕರ್ ತಮ್ಮ ಸಹೋದ್ಯೋಗಿಗಳ ಜೊತೆಗೆ ಸ್ಥಳಕ್ಕೆ ತೆರಳಿದ್ದಾರೆ. ತೋಡಿಗೆ ಹಾಕುವ ದೊಡ್ಡ ಪೈಪ್ನಡಿಯಲ್ಲಿ ಕಾಳಿಂಗ ಪತ್ತೆಯಾಗಿದೆ. ಡಾ. ಗೌರಿ ಶಂಕರ್ ಆಗುಂಬೆಯ ಕಾಳಿಂಗ ಮನೆಯಲ್ಲಿ ಸಂಶೋಧನೆ ನಡೆಸುತ್ತಿದ್ದಾರೆ. ಕಾಳಿಂಗ ಸರ್ಪಗಳ ವಂಶಾವಳಿಯ […]
ಮಂಗಳೂರು: ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಆತ್ಮಹತ್ಯೆಗೆ ಯತ್ನ

ಮಂಗಳೂರು: ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿಯೋರ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು (ಎ. 2) ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಂಭವಿಸಿದೆ. ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿಯನ್ನು ಶ್ರೀಧರ್ ಹೆಗಡೆ ಎನ್ನಲಾಗಿದ್ದು. ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ದತಿ ತಂಡದ ಸದಸ್ಯರಾಗಿದ್ದರು. 2019ರಿಂದ ಬೆಳ್ತಂಗಡಿಯ ಕಡಿರುದ್ಯಾವರ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಇವರ ಜಾಗಕ್ಕೆ ಮತ್ತೊಬ್ಬರು ವರ್ಗಾವಣೆಯಾದ ಹಿನ್ನಲೆಯಲ್ಲಿ ಕಳೆದ ಫೆಬ್ರವರಿಯಿಂದ ಸ್ಥಳ ನಿರೀಕ್ಷಣೆಯಲ್ಲಿದ್ದರು. ವೈಯಕ್ತಿಕ ಕಾರಣಗಳಿಂದ ಇಂದು ಆತ್ಮಹತ್ಯೆಗೆ ಯತ್ನಿಸಿದ ಇವರನ್ನು ಕೂಡಲೇ ವೆನ್ […]
ಮಧ್ವ ವಾದಿರಾಜ ಮಹಾವಿದ್ಯಾಲಯದಲ್ಲಿ ಮಾದಕ ವ್ಯಸನ ಮತ್ತು ಆ್ಯಂಟಿ ರ‍್ಯಾಗಿಂಗ್ ಕುರಿತು ಜಾಗೃತಿ ಕಾರ್ಯಾಗಾರ

ಉಡುಪಿ: ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕೌನ್ಸೆಲಿಂಗ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯು ಜಂಟಿಯಾಗಿ “ಮಾದಕ ವ್ಯಸನ ಮತ್ತು ಆ್ಯಂಟಿ ರ‍್ಯಾಗಿಂಗ್” ಕುರಿತು ಜಾಗೃತಿ ಕಾರ್ಯಾಗಾರವನ್ನು ಇತ್ತೀಚಿಗೆ ಕಾಲೇಜಿನ ಆವರಣದಲ್ಲಿ ಆಯೋಜಿಸಿತ್ತು. ಮಲ್ಪೆ ಅಪರಾಧ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ ಪ್ರಮೋದ್ ಕುಮಾರ್, ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ಮಾದಕ ವ್ಯಸನವು ವ್ಯಕ್ತಿಯ ಜೀವನವನ್ನು ಹೇಗೆ ನಾಶಪಡಿಸುತ್ತದೆ ಮತ್ತು ಮಾದಕ ವ್ಯಸನದಿಂದಾಗಿ ವ್ಯಕ್ತಿಗೆ ಮಾತ್ರವಲ್ಲದೆ ಸಮಾಜಕ್ಕೆ ಉಂಟಾಗಬಹುದಾದಂತ ದುಷ್ಪರಿಣಾಮದ ಬಗ್ಗೆ ಮಾಹಿತಿ ನೀಡಿದರು ಮತ್ತು […]
ಕರ್ನಾಟಕ ಜಲಸಾರಿಗೆ ಮಂಡಳಿ ವತಿಯಿಂದ ನಾಗರಾಜ ಆರ್ ಅವರಿಗೆ ಬಿಳ್ಕೋಡುಗೆ ಕಾರ್ಯಕ್ರಮ

ಉಡುಪಿ: ಕರ್ನಾಟಕ ಸರಕಾರ ಮೂಲ ಸೌಲಭ್ಯ ಅಭಿವೃದ್ಧಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ, ಕರ್ನಾಟಕ ಜಲಸಾರಿಗೆ ಮಂಡಳಿ ಉಪ ವಿಭಾಗ ಉಡುಪಿ ಇದರ ವತಿಯಿಂದ ಕಾರ್ಯನಿರ್ವಾಹಕ ಇಂಜಿನಿಯರ್ ನಾಗರಾಜ ಆರ್ ಇವರ ಬಿಳ್ಕೋಡುಗೆ ಸಮಾರಂಭ ಶನಿವಾರ ಹೋಟೆಲ್ ಕಾರ್ತಿಕ್ ಎಸ್ಟೇಟ್ ಸಭಾಂಗಣದಲ್ಲಿ ಜರಗಿತು. ಮಂಗಳೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಜೇಶ್, ಗುತ್ತಿಗೆದಾರ ಸಂಘದ ಶ್ರೀನಾಥ್ , ಸಹಾಯಕ ಇಂಜಿನಿಯರ್ ಭಾನುಪ್ರಕಾಶ್, ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು, ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು. ನಿಧಿ ಪೈ ನಿರೂಪಿಸಿದರು.