ಮೇ.20 ರಿಂದ 25: ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಹಿರಿಯಡಕ: ಕಾರ್ಕಳ ತಾಲೂಕಿನ ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 20 ರಿಂದ 25ರ ವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದೆ ಇಂದು ಸಂಜೆ ಗಂಟೆ 3.30 ರಿಂದ ಗುಡ್ಡೆಯಂಗಡಿ, ಪುಪಾಡಿಕಲ್ಲು, ಜೋಡುಕಟ್ಟೆ ಮಾರ್ಗವಾಗಿ ಬೃಹತ್ ಹೊರೆ ಕಾಣಿಕೆ ಮೆರವಣಿಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪುತ್ತೂರು ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ ಪ್ರಕರಣ: ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟದ ಎಚ್ಚರಿಕೆ ನೀಡಿದ ಶಾಸಕ ಹರೀಶ್ ಪೂಂಜಾ

ಪುತ್ತೂರು: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯದಿಂದ ಗಂಭೀರ ಗಾಯಗೊಂಡಿರುವ ಹಿಂದೂ ಸಂಘಟನೆ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಈ ಸಂದರ್ಭ ಪೊಲೀಸರ ಈ ಅಮಾನವೀಯ ಕೃತ್ಯವನ್ನು ಖಂಡಿಸಿದ ಅವರು, ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಪೊಲೀಸರ ಮನಸ್ಥಿತಿ ಮತ್ತು ವರ್ತನೆಯ ದರ್ಶನವಾಗುತ್ತಿದೆ. ಹಿಂದೂ ಕಾರ್ಯಕರ್ತರ ಮೇಲೆ ಇಂತಹ ದೌರ್ಜನ್ಯ ನಡೆಯುವಾಗ ಓರ್ವ ಶಾಸಕನಾಗಿ ಅದರ ವಿರುದ್ಧ ಹೋರಾಟ ಮಾಡುತ್ತೇನೆ ಎಂದರು. ಈ ಬಗ್ಗೆ ದ.ಕ. ಜಿಲ್ಲಾ […]

ಹಿಂದುಜಾ ಸಮೂಹ ಸಂಸ್ಥೆಯ ಚೇರ್ಮನ್ ಎಸ್.ಪಿ. ಹಿಂದುಜಾ ನಿಧನ

ನವದೆಹಲಿ: ಹಿಂದೂಜಾ ಸಮೂಹ ಸಂಸ್ಥೆಗಳ ಚೇರ್ಮನ್​ ಶ್ರೀಚಂದ್​ ಪರ್ಮಾನಂದ ಹಿಂದುಜಾ(87) ಲಂಡನ್​ನಲ್ಲಿ ವಿಧಿವಶರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಭಾರತೀಯ ಮೂಲದ ಬ್ರಿಟನ್​ ಪ್ರಜೆಯಾಗಿದ್ದ ಎಸ್​ಪಿ ಹಿಂದುಜಾ ಅವರ ನಿಧನವನ್ನು ಸಹೋದರರು ಹಾಗೂ ಕುಟುಂಬದ ಆಪ್ತ ಮೂಲಗಳು ಖಚಿತಪಡಿಸಿವೆ.

ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ: ಅರ್ಜಿ ಆಹ್ವಾನ

ಕಾರ್ಕಳ: ತೋಟಗಾರಿಕೆ ಇಲಾಖೆಯ ವತಿಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ, 2023 ರ ಜೂನ್ 1ರಿಂದ 2024 ರ ಮಾರ್ಚ್ 30 ವರೆಗೆ, ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 22, ಹೆಚ್ಚಿನ ಮಾಹಿತಿಗಾಗಿ: http://horticulturedir.Karnataka.gov.in ತೋಟಗಾರಿಕೆ ಉಪ ನಿರ್ದೇಶಕರು ಉಡುಪಿ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಂಗಳೂರು: ಟ್ರಾಫಿಕ್ ಸಮಸ್ಯೆ ನಿವಾರಣೆಗಾಗಿ ರಸ್ತೆಗಿಳಿಯಲಿವೆ ‘ಕೋಬ್ರಾ’ಗಳು; ಮಂಗಳೂರು ನಗರ ಪೊಲೀಸರ ಉಪಕ್ರಮ

ಮಂಗಳೂರು: ಮಂಗಳೂರು ಪೊಲೀಸರು ನಾಲ್ಕು ಕೋಬ್ರಾ ದ್ವಿಚಕ್ರ ಸಂಚಾರ ಗಸ್ತು ವಾಹನಗಳನ್ನು ಪರಿಚಯಿಸಿದರು. ಟ್ರಾಫಿಕ್ ಪೂರ್ವ ಮತ್ತು ಪಶ್ಚಿಮ ಪೊಲೀಸ್ ಠಾಣೆಗಳಿಗೆ ಕ್ರಮವಾಗಿ ಎರಡು ವಾಹನಗಳನ್ನು ಸೇರ್ಪಡೆಗೊಳಿಸಿದರು. ಮಂಗಳವಾರದಂದು ಕೋಬ್ರಾ ವಾಹನಗಳನ್ನು ಬಿಡುಗಡೆಮಾಡಲಾಯಿತು ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಆರ್ ಜೈನ್ ಸುದ್ದಿಗಾರರಿಗೆ ತಿಳಿಸಿದರು. ಇವು ಟ್ರಾಫಿಕ್ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡಲಿವೆ. ಈ ವಾಹನಗಳಲ್ಲಿ ಸೈರನ್ ಮತ್ತು ಮೈಕ್ ವ್ಯವಸ್ಥೆ ಇರಲಿದೆ. ಯಾವುದೇ ಟ್ರಾಫಿಕ್ ಸಮಸ್ಯೆ ಅಥವಾ ಅಪಘಾತ ಸಂಭವಿಸಿದಲ್ಲಿ ಈ ವಾಹನಗಳು […]