ನ.27 ರಿಂದ 30 ರವರೆಗೆ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ

ಕಡಬ: ದೇಶ-ವಿದೇಶಗಳಲ್ಲಿ ಪ್ರಸಿದ್ದಿ ಪಡೆದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.27 ರಿಂದ 30 ರವರೆಗೆ ಸಂಭ್ರಮದ ಚಂಪಾಷಷ್ಠಿ ಮಹೋತ್ಸವ-2022 ಜರುಗಲಿದೆ. ಉತ್ಸವದ ವಿವರಗಳು: ನ.27 ಆದಿತ್ಯವಾರದಂದು ರಾತ್ರಿ ಹೂವಿನ ತೇರಿನ ಉತ್ಸವ, ನ.28 ಸೋಮವಾರದಂದು ರಾತ್ರಿ ಪಂಚಮಿ ರಥೋತ್ಸವ ಮತ್ತು ತೈಲ್ಯಾಭ್ಯಂಜನ, ನ.29 ಮಂಗಳವಾರದಂದು ಚಂಪಾಷಷ್ಠಿ ಮಹಾರಥೋತ್ಸವ, ನ.30 ಬುಧವಾರದಂದು ಅವಭೃತೋತ್ಸವ ಮತ್ತು ನೌಕಾವಿಹಾರ ನಡೆಯಲಿದೆ. ನ. 27 ಮತ್ತು 28 ರಂದು ರಾತ್ರಿ ಹೊತ್ತಿನ ಪ್ರಾರ್ಥನೆ ಸೇವೆ ಹಾಗೂ ನ.29 ರಂದು ಮಧ್ಯಾಹ್ನ […]

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಎನ್.ಐ.ಎ ತೆಕ್ಕೆಗೆ; ಘಟನೆಯಿಂದ ಪಾಠ ಕಲಿಯಿರಿ ಎಂದ ಆಲೋಕ್ ಕುಮಾರ್

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ಹಸ್ತಾಂತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅಲ್ಲದೆ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ತನಿಖೆ ನಡೆಸಲು ತನಿಖಾ ಸಂಸ್ಥೆಗೆ ಶಿಫಾರಸು ಮಾಡಿದೆ ಎಂದು ವರದಿಯಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಕಂಕನಾಡಿ ಪೊಲೀಸ್ ಠಾಣೆಯಲ್ಲಿ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಯಲ್ಲಿ ಸಂಗ್ರಹಿಸಿದ ಸಾಕ್ಷ್ಯಗಳು ಮತ್ತು ಇತರ ಮಾಹಿತಿಗಳ ಆಧಾರದ ಮೇಲೆ ರಾಜ್ಯ ಸರ್ಕಾರವು ಈ ನಿರ್ಧಾರ ಕೈಗೊಂಡು ಯುಎಪಿಎ ಕಾಯ್ದೆಯಡಿ […]

ಮಂಗಳೂರು: ನ. 27 ರಂದು ಗುರು ಬೆಳದಿಂಗಳು ವತಿಯಿಂದ ಬೃಹತ್ ಉಚಿತ ಆರೋಗ್ಯ ಮೇಳ

ಮಂಗಳೂರು: ಗುರುಬೆಳದಿಂಗಳು ಫೌಂಡೇಶನ್‌ ಕುದ್ರೋಳಿ ಆಶ್ರಯದಲ್ಲಿ ಭರವಸೆ ಚಾರಿಟೆಬಲ್ ಫೌಂಡೇಶನ್ ಬೆಂಗಳೂರು ವತಿಯಿಂದ ನ. 27ರಂದು ಬೆಳಗ್ಗೆ 8.30 ರಿಂದ ಸಾಯಂಕಾಲ 4 ರವರೆಗೆ ಮಂಗಳೂರಿನ ಶ್ರೀ ಗೋಕರ್ಣನಾಥ ಕಾಲೇಜು ಸಭಾಂಗಣದಲ್ಲಿ ಪುರುಷ, ಮಕ್ಕಳು ಮತ್ತು ಮಹಿಳೆಯರಿಗಾಗಿ ಬೃಹತ್ ಉಚಿತ ಆರೋಗ್ಯ  ಮೇಳ ಆಯೋಜಿಸಲಾಗಿದೆ. ಮಹಿಳೆಯರ ಮುಟ್ಟಿನ ತೊಂದರೆ, ಬಂಜೆತನ, ಲೈಂಗಿಕ ಸಮಸ್ಯೆ, ರಕ್ತಹೀನತೆ, ಎಚ್ ಪಿ ವಿ ಪರೀಕ್ಷೆ (ಗರ್ಭಕಂಠದ ಕ್ಯಾನ್ಸರ್, ಸ್ತನ ಕ್ಯಾನ್ಸರ್) ತಡೆಗಟ್ಟವಿಕೆ, ಎಲ್ಲಾ ಸ್ತ್ರೀ ರೋಗಗಳ ತಡೆಗಟ್ಟುವಿಕೆ, ಮಾರ್ಗದರ್ಶನ ಮತ್ತು ಚಿಕಿತ್ಸೆ […]

ಕಾರ್ಕಳ: ನವೆಂಬರ್ 26 ರಂದು ಕೋಟಿ ಚೆನ್ನಯ್ಯ ಥೀಂ ಪಾರ್ಕಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

ಕಾರ್ಕಳ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ, ಕೋಟಿ ಚೆನ್ನಯ ಅಭಿವೃದ್ಧಿ ಸಮಿತಿ ಹಾಗೂ ಯಕ್ಷ ರಂಗಾಯಣ ಕಾರ್ಕಳ ಇವರ ಸಹಯೋಗದೊಂದಿಗೆ ಕಾರ್ಕಳ ಕೋಟಿ ಚೆನ್ನಯ್ಯ ಥೀಂ ಪಾರ್ಕ್ನಲ್ಲಿ ನಡೆಯಲಿರುವ ಮಾಸಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವು ನವೆಂಬರ್ 26 ರಂದು ಸಂಜೆ 5.30 ಕ್ಕೆ ನಡೆಯಲಿದೆ. ಮೊದಲ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಅಂದು ಸಂಜೆ 6 ರಿಂದ ರಾತ್ರಿ 9 ರವರೆಗೆ ರಾಮ ನಿರ್ಯಾಣ ಯಕ್ಷಗಾನ ತಾಳಮದ್ದಳೆಯನ್ನು ಏರ್ಪಡಿಸಲಾಗಿದೆ. ಪ್ರತಿ ತಿಂಗಳು ಥೀಂ ಪಾರ್ಕ್ನಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಚಟುವಟಿಕೆಗಳು […]

ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವತಿಯಿಂದ ಅಂತರ್ ಕಾಲೇಜು ಭಾಷಣ ಮತ್ತು ಪ್ರಬಂಧ ಸ್ಪರ್ಧೆ

ಬ್ರಹ್ಮಾವರ: ಗುರುವಾರದಂದು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಸಾಹಿತ್ಯ ಸಂಘದ ವತಿಯಿಂದ ಪದವಿಪೂರ್ವ ಅಂತರ್ ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಮತ್ತು ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸ್ಥಳೀಯ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ನೀಡಲಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ ಮತ್ತು ಬಹುಮಾನ ಪಡೆದ ವಿದ್ಯಾರ್ಥಿಗಳನ್ನು ಸಂಸ್ಥೆಯ ಸಂಸ್ಥಾಪಕ ಸುಬ್ರಹ್ಮಣ್ಯ ಇವರು ಅಭಿನಂದಿಸಿದರು. ಸಂಸ್ಥೆಯ ನಿರ್ದೇಶಕಿ ಶ್ರೀಮತಿ ಮಮತಾ ಮತ್ತು ಪ್ರಾಂಶುಪಾಲೆ ಶ್ರೀಮತಿ ಡಾ ಸೀಮಾ ಭಟ್ ಮತ್ತು ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. […]