ಉಡುಪಿ:ಸಂಗೀತದಿಂದ ಆರೋಗ್ಯವಂತ ಸಮಾಜ ನಿರ್ಮಾಣ : ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ

ಉಡುಪಿ: ಸಂಗೀತವು ಭಾರತೀಯ ಸಂಸ್ಕೃತಿಯನ್ನು ಬೆಳೆಸುವುದರ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುತ್ತದೆ ಎಂದು ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಗುರುವಾರ ಕುಂದಾಪುರದ ಭಂಡಾರ್‌ಕರ‍್ಸ್ ಕಾಲೇಜಿನ ಆರ್.ಎನ್ ಶೆಟ್ಟಿ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಭಂಡಾರ್‌ಕರ‍್ಸ್ ಕಾಲೇಜು ಐ.ಕ್ಯೂ.ಎ.ಸಿ ವಿಭಾಗದ ಸಹಯೋಗದಿಂದ ನಡೆದ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ “ಹಾಡಿರೇ ರಾಗಗಳ ತೂಗಿರೇ ದೀಪಗಳ” ಸಂಗೀತ ಗಾಯನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ನಮ್ಮ ದೇಶಿಯ ಕಲೆ ಉಳಿವಿಗೆ ಹಾಗೂ ನಮ್ಮ ಸಂಸ್ಕೃತಿಯನ್ನು […]

ಉಡುಪಿ:ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಮ್ಯಾರಥಾನ್

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಡಾ.ಜಿ.ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜು (ಎನ್.ಎಸ್.ಎಸ್) ಅಜ್ಜರಕಾಡು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಹಾಗೂ ಉಡುಪಿ ಜಿಲ್ಲಾ ಅಮೆಚುರ್ ಅಥ್ಲೆಟಿಕ್ಸ್ ಅಸೋಶಿಯೇಷನ್ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಹೆಚ್.ಐ.ವಿ /ಏಡ್ಸ್ ಕುರಿತು ಜನ ಜಾಗೃತಿ ಮೂಡಿಸುವ ಪ್ರಯುಕ್ತ ಜಿಲ್ಲಾ […]

ಉಡುಪಿ:ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಜಿಲ್ಲೆಯ ಪ್ರವಾಸಿ ತಾಣಗಳ ಸೌಂದರ್ಯವನ್ನು ಸವಿಯಲು ಅನುಕೂಲವಾಗುವಂತೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಈಗಾಗಲೇ ಜಾಗಗಳನ್ನು ಗುರುತಿಸಿರುವ ಕೋಡಿ ಕುಂದಾಪುರ ಬೀಚ್, ಕೋಡಿ ಕನ್ಯಾಣ ಬೀಚ್ ಹಾಗೂ ತ್ರಾಸಿ-ಮರವಂತೆ ಬೀಚ್ […]

ಉಡುಪಿ:ಯುವಜನತೆ ಸಕ್ರೀಯವಾಗಿ ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಿ, ಸದೃಢ ಆರೋಗ್ಯ ಹೊಂದುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕರೆ

ಉಡುಪಿ: ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮನುಷ್ಯನ ದೇಹ ದೈಹಿಕವಾಗಿ ಮತ್ತು ಮಾನಸಿಕವಾಗಿ ಕ್ರಿಯಾಶೀಲರಾಗಿರುವುದರೊಂದಿಗೆ ಸದೃಢ ಬದುಕನ್ನು ಕಟ್ಟಿಕೊಳ್ಳಲು ಸಹಕಾರಿಯಾಗುತ್ತದೆ. ಯುವ ಜನರು ಕ್ರೀಡೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಿ, ಸದೃಢ ಆರೋಗ್ಯ ಹೊಂದಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕರೆ ನೀಡಿದರು. ಅವರು ಶುಕ್ರವಾರ ತೆಂಕನಿಡಿಯೂರು ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಲಯನ್ಸ್ ಕ್ಲಬ್ ಉಡುಪಿ ಹಾಗೂ […]

ತೆಕ್ಕಟ್ಟೆ ಸರಕಾರಿ ಪ.ಪೂ ಕಾಲೇಜು: ಹಳೆ ವಿದ್ಯಾರ್ಥಿಗಳಿಂದ ಶಾಲೆಗೆ ವಿವಿಧ ಪರಿಕರಗಳ ಹಸ್ತಾಂತರ

ತೆಕ್ಕಟ್ಟೆ: ಸರಕಾರಿ ಪದವಿ ಪೂರ್ವ ಕಾಲೇಜು ತೆಕ್ಕಟ್ಟೆ ಇಲ್ಲಿನ ಪ್ರೌಢಶಾಲಾ ವಿಭಾಗದಲ್ಲಿ 2009 ಮತ್ತು 10ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಂದ ಪ್ರೌಢ ಶಾಲೆಗೆ ಪ್ರೊಜೆಕ್ಟರ್,ಟ್ರ್ಯಾಕ್ ಸೂಟ್,ಕಂಪ್ಯೂಟರ್ ಮೌಸ್ ಮತ್ತು ಕೀಪ್ಯಾಡ್ ಗಳ ವಿತರಣಾ ಸಮಾರಂಭ ನಡೆಯಿತು. ಮುಖ್ಯ ಅತಿಥಿಗಳಾಗಿ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಿವರಾಮ ಶೆಟ್ಟಿ ವಿದ್ಯಾರ್ಥಿಗಳ ಕೊಡುಗೆಯನ್ನು ಶ್ಲಾಘಿಸಿದರು. ವಿಜಯ ಭಂಡಾರಿ ಪೂರ್ವ ವಿದ್ಯಾರ್ಥಿಗಳಿಂದ ನಿರಂತರವಾಗಿ ಶಾಲೆಗೆ ಸಹಾಯವಾಗಲಿ ಎಂದು ಹಾರೈಸಿದರು. ಕಾಲೇಜಿನ ಪ್ರಾಂಶುಪಾಲೆ ಶಾರದಾ ಹೊಳ್ಳ,ಸಂಸ್ಥೆಯ ಉಪ ಪ್ರಾಂಶುಪಾಲೆ […]