ಉಡುಪಿ: ಕೆಂಪು ಕಲ್ಲು, ಮರಳಿನ ಮೇಲಿನ ನಿರ್ಬಂಧ ತೆರವುಗೊಳಿಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ

ಉಡುಪಿ: ಕೆಂಪು ಕಲ್ಲು ಮತ್ತು ಮರಳಿನ ಮೇಲೆ ಹೇರಿರುವ ನಿರ್ಬಂಧವನ್ನು ಸಡಿಲಿಸಬೇಕು ಎಂದು ಆಗ್ರಹಿಸಿ ಇವತ್ತು ಕರ್ನಾಟಕ ರಕ್ಷಣಾ ವೇದಿಕೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿತು. ಮಣಿಪಾಲದ ಟೈಗರ್ ಸರ್ಕಲ್ ನಿಂದ ಹೊರಟ ಪ್ರತಿಭಟನೆ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಮಾಪ್ತಿಗೊಂಡಿತು. ಅಲ್ಲಿ ಜಿಲ್ಲಾಧಿಕಾರಿಗೆ ಮನವಿ ನೀಡಿದ ಕರವೇ ಮುಖಂಡರು, ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು.ಮುಖ್ಯವಾಗಿ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ತೆಗೆಯುವುದಕ್ಕೆ ನಿರ್ಬಂಧ ಇದೆ. ಹೊರಭಾಗದಿಂದ ಮರಳು ಮತ್ತು ಕೆಂಪು ಕಲ್ಲು ಸಾಗಾಣಿಕೆ ಮಾಡುತ್ತಿರುವ ಲಾರಿಗಳನ್ನು ಪೋಲಿಸರು […]
ಉಡುಪಿ: ಆ.29ರಂದು “ಜಿಎಸ್ ಟಿ ಸೊಲ್ಯೂಷನ್ಸ್” ಕಾರ್ಯಕ್ರಮ

ಉಡುಪಿ: ಉಡುಪಿ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿಯ ನೇತೃತ್ವದಲ್ಲಿ ಉಡುಪಿ ಟ್ಯಾಕ್ಸ್ ಬಾರ್ ಅಸೋಸಿಯೇಶನ್, ದ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟ್ಸ್ ಆಫ್ ಇಂಡಿಯಾ ಉಡುಪಿ ಬ್ರಾಂಚ್ (ಎಸ್ ಐ ರ್ ಸಿ),ಉಡುಪಿ ಜಿಲ್ಲಾ ಬೇಕರಿ ಹಾಗೂ ಖಾದ್ಯ ತಿನಸುಗಳ ತಯಾರಕರು ಮತ್ತು ಮಾರಾಟಗಾರರ ಸಂಘ, ಉಡುಪಿ ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಶನ್, ಉಡುಪಿ ಡಿಸ್ಟಿಕ್ಟ್ ಕನ್ವೆನ್ಷನ್ ಹಾಲ್ ಅಸೋಸಿಯೇಶನ್, ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಅಂಡ್ ಆರ್ಕಿಟೆಕ್ಟ್ಸ್, ಉಡುಪಿ, ಉಡುಪಿ ಹೋಟೆಲ್ ಓನರ್ಸ್ ಅಸೋಸಿಯೇಶನ್ […]
ಪೆರ್ಣಂಕಿಲ ಮಹಾಗಣಪತಿಗೆ ಮಂಗಳಾರತಿ ಸೇವೆ

ಉಡುಪಿ: ಉಡುಪಿ ಜಿಲ್ಲೆಯ ಅತ್ಯಂತ ಪ್ರಾಚೀನ ನೆಲೆಗಳಲ್ಲಿ ಒಂದಾಗಿರುವ “ಕೊಪ್ಪರಿಗೆ ಅಪ್ಪ” ಹರಕೆ ಖ್ಯಾತಿಯ ಪೆರ್ಣಂಕಿಲ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಪೂಜೆ ನೆರವೇರಿಸಲಾಯಿತು. ಹಬ್ಬದ ಪ್ರಯುಕ್ತ ದೇಗುಲದಲ್ಲಿ ಬೆಳಿಗ್ಗೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಮಹಾಗಣಪತಿಗೆ ವಿಶೇಷ ನೈವೇದ್ಯ, ಅಭಿಷೇಕ ಮಾಡಿದ ಬಳಿಕ ಮಹಾಮಂಗಳಾರತಿ ಬೆಳಗಿಸಲಾಯಿತು. ನೂರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.
ಕಾರ್ಕಳ ಮೂಲದ ಹೊಟೇಲ್ ಉದ್ಯಮಿ ಬರ್ಬರ ಕೊಲೆ

ಉಡುಪಿ: ಕೆಲಸದ ವಿಚಾರಕ್ಕೆ ಹೊಟೇಲ್ ಸಿಬ್ಬಂದಿಯೊಬ್ಬನಿಗೆ ಗದರಿದ ಹೊಟೇಲ್ ಮಾಲೀಕನನ್ನೇ ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾರಾಷ್ಟ್ರದ ಪೂನಾದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ. ಕಾರ್ಕಳ ತಾಲೂಕಿನ ಎಣ್ಣೆಹೊಳೆ ಕುಮೇರುಮನೆ ನಿವಾಸಿ ಹೊಟೇಲ್ ಉದ್ಯಮಿ ಸಂತೋಷ್ ಶೆಟ್ಟಿ(46) ಹತ್ಯೆಯಾದ ಉದ್ಯಮಿ.ಉತ್ತರ ಪ್ರದೇಶ ಮೂಲದ ವೆಯರ್ ಹೊಟೇಲ್ ನಲ್ಲಿ ಕೆಲಸದ ಸಮಯದಲ್ಲಿ ಮದ್ಯಪಾನ ಮಾಡಿರುವುದಕ್ಕೆ ಬೈದು ಬುದ್ಧಿವಾದ ಹೇಳಿದ್ದಕ್ಕೆ ಸಿಟ್ಟಿಗೆದ್ದ ಆತ ಕಿಚನ್’ನಿಂದ ಕತ್ತಿ ಹಿಡಿದುಕೊಂಡು ಬಂದು ಸಂತೋಷ್ ಶೆಟ್ಟಿಯವರು ಕುಳಿತ್ತಿದ್ದ ವೇಳೆ ಹಿಂಬದಿಯಿಂದ ಕುತ್ತಿಗೆಗೆ ಕಡಿದು […]
ಮೂಡುಬಿದಿರೆ:ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟ 2025 ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ಗೆ 42 ಪದಕ

ಮೂಡುಬಿದಿರೆ: ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ(ರಿ.) ವತಿಯಿಂದ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್ನ ಕ್ರೀಡಾಪಟುಗಳಿಗೆ 19 ಚಿನ್ನ, 15 ಬೆಳ್ಳಿ, 8 ಕಂಚು ಒಟ್ಟು 42 ಪದಕಗಳು, 3 ನೂತನ ಕೂಟ ದಾಖಲೆ ಹಾಗೂ 1 ವಿಭಾಗ ಕ್ರೀಡಾಕೂಟದ ವೈಯಕ್ತಿಕ ಪ್ರಶಸ್ತಿಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಇದರಲ್ಲಿ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ನ ಕ್ರೀಡಾಪಟುಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುವುದರಲ್ಲಿ ಮಹತ್ವದ ಕೊಡುಗೆಯನ್ನು […]