ಕಾರ್ಕಳ: ಮಂಗಳೂರು ಮೂಲದ ವ್ಯಕ್ತಿಯ ಭೀಕರ ಕೊಲೆ

ಕಾರ್ಕಳ: ತಾಲೂಕಿನ ಕುಂಟಲ್ಪಾಡಿಯಲ್ಲಿ ಮಂಗಳೂರು ಮೂಲದ ನವೀನ್ ಪೂಜಾರಿ (50) ಎಂಬವರನ್ನು ಕೊಲೆ ಮಾಡಲಾಗಿದೆ. ಮಂಗಳವಾರ (ಆ.26) ಬೆಳಗಿನ ಹೊತ್ತಿಗೆ ಈ ಘಟನೆ ಪತ್ತೆಯಾಗಿದ್ದು, ಕಾರ್ಕಳ ನಗರ ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಮೂಲಗಳ ಪ್ರಕಾರ, ನವೀನ್ ಪೂಜಾರಿ ಕಾರ್ಕಳದಲ್ಲಿ ನೆಲೆಸಿ ಬಡ್ಡಿ ವ್ಯಾಪಾರ ನಡೆಸುತ್ತಿದ್ದವರು ಎಂದು ತಿಳಿದುಬಂದಿದೆ. ಪೋಲೀಸರು ಸಹಕಾರದಿಂದ ತನಿಖೆ ಮುಂದುವರೆದಿದೆ. ಘಟನಾ ಸ್ಥಳಕ್ಕೆ ಎಸ್‌ಪಿ ಹರಿರಾಮ್ ಶಂಕರ್, ಎಎಸ್‌ಪಿ ಡಾ.ಹರ್ಷ ಪ್ರಿಯಾಂವದ ಹಾಗೂ ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಪೊಲೀಸರು […]

ಉಡುಪಿ:ವ್ಯಕ್ತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಕುತ್ಪಾಡಿ ಗ್ರಾಮದ ನಿವಾಸಿ ಧನ್‌ರಾಜ್ (43) ಎಂಬ ವ್ಯಕ್ತಿಯು ಆಗಸ್ಟ್ 22 ರಂದು ಮಧ್ಯಾಹ್ನ 12.30 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 8 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.

ಮಣಿಪಾಲ:ಡಾ. ಟಿಎಂಎ ಪೈ ಆಸ್ಪತ್ರೆ ಉಡುಪಿಯಲ್ಲಿ ಸ್ತನ ಪುನರ್ನಿರ್ಮಾಣ ಮತ್ತು ಟಮ್ಮಿ ಟಕ್ (ಹೊಟ್ಟೆ ಗಾತ್ರ ಕಡಿಮೆಗೊಳಿಸುವ/ಬಿಗಿಗೊಳಿಸುವ)ಶಿಬಿರ

ಉಡುಪಿ: ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಪ್ಲಾಸ್ಟಿಕ್ ಸರ್ಜರಿ ವಿಭಾಗದ ಸಹಯೋಗದೊಂದಿಗೆ, ಆಗಸ್ಟ್ 28, 2025 ರ ಗುರುವಾರ ಬೆಳಿಗ್ಗೆ 9:00 ರಿಂದ ಸಂಜೆ 4:30 ರವರೆಗೆ ಆಸ್ಪತ್ರೆ ಆವರಣದಲ್ಲಿ ಸ್ತನ ಪುನರ್ನಿರ್ಮಾಣ ಮತ್ತು ಟಮ್ಮಿ ಟಕ್ (ಹೊಟ್ಟೆ ಗಾತ್ರ ಕಡಿಮೆಗೊಳಿಸುವ/ಬಿಗಿಗೊಳಿಸುವ ) ಶಿಬಿರವನ್ನು ಆಯೋಜಿಸಲಿದೆ. ಈ ಶಿಬಿರವನ್ನು ಈ ಕೆಳಗಿನ ಪರಿಸ್ಥಿತಿಗಳಿಗೆ ಪರಿಹಾರಗಳನ್ನು ಹುಡುಕುತ್ತಿರುವ ವ್ಯಕ್ತಿಗಳಿಗಾಗಿ ವಿನ್ಯಾಸಗೊಳಿಸಲಾಗಿದೆ: ಶಿಬಿರದಲ್ಲಿ ತಜ್ಞರ ಸಮಾಲೋಚನೆ ಉಚಿತವಾಗಿದೆ. ಅವಶ್ಯ ಪರೀಕ್ಷೆಗಳ ಹಾಗೂ ಶಸ್ತ್ರ ಚಿಕಿತ್ಸೆಗಳ […]

ಕಾರ್ಕಳ ಕ್ರೈಸ್ಟ್ಕಿಂಗ್: ಟೇಬಲ್ ಟೆನ್ನಿಸ್‌ನಲ್ಲಿ ಐಶ್ವರ್ಯ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಜಿಲ್ಲಾ ಪಂಚಾಯತ್ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಇವರ ಆಶ್ರಯದಲ್ಲಿ ಸುಂದರ ಪುರಾಣಿಕ್ ಸ್ಮಾರಕ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ 14/17 ರ ವಯೋಮಿತಿಯ ಬಾಲಕಿಯರ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ಐಶ್ವರ್ಯ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಉಳಿದಂತೆ ಆರನೇ ತರಗತಿಯ ಡೆಲ್ಸಿಯಾ ಡಿ’ಸೋಜ ಜಿಲ್ಲಾಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾಳೆ.

ಮೂಡುಬಿದಿರೆ: ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು.

ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ ಬೆಳುವಾಯಿಯಲ್ಲಿ ಇತ್ತೀಚೆಗೆ ನಡೆದಿದ್ದ ಕಾರು ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ನಿವಾಸಿ ಸಂದೀಪ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಗಸ್ಟ್ 24ರಂದು ಮೃತಪಟ್ಟಿದ್ದಾರೆ. ಅಗಸ್ಟ್ 16ರಂದು ಸಂದೀಪ್ ಹಾಗೂ ಆತನ ಮೂವರು ಸ್ನೇಹಿತರು ಕಾರಿನಲ್ಲಿ ಮೂಡುಬಿದಿರೆಯಿಂದ ಕಾರ್ಕಳಕ್ಕೆ ಹೋಗುವಾಗ ಬೆಳುವಾಯಿಯಲ್ಲಿ ಕಾರು ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ವೇಣೂರು ಪೆರ್ಮಡೆ ನಿವಾಸಿ ಸುಮಿತ್ ಸ್ಥಳದಲ್ಲೇ ಮೃತಪಟ್ಟಿದ್ದರು. ಅವರೊಂದಿಗೆ ಇದ್ದ ಸಂದೀಪ್ ಸಹಿತ ಇತರರು ಗಾಯಗೊಂಡಿದ್ದರು. ಮೂಡುಬಿದಿರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ […]