ಅಗಲಿದ ಹಿರಿಯ ಪತ್ರಕರ್ತರ ಮಂಜುನಾಥ್ ಭಟ್ಗೆ ಶ್ರದ್ಧಾಂಜಲಿ ಸಭೆ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತರ ಮಂಜುನಾಥ್ ಭಟ್ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು. ಹಿರಿಯ ಪತ್ರಕರ್ತರಾದ ಕುಮಾರಸ್ವಾಮಿ ನುಡಿನಮನ ಸಲ್ಲಿಸಿ, ಮಂಜುನಾಥ್ ಭಟ್ ಕಷ್ಟದಿಂದ ಬೆಳೆದು ಬಂದವರು. ವಿದ್ಯಾರ್ಥಿ ಜೀವನದಲ್ಲಿ ಹಿರಿಯ ಸಾಹಿತಿಗಳ ಚರ್ಚಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತ ಅವರು ಸಾಹಿತ್ಯದತ್ತ ಒಲವು ಬೆಳೆಸಿಕೊಂಡರು. ಉಪ ಸಂಪಾದಕರಾಗಿ ಡೆಸ್ಕ್ನಲ್ಲಿಯೇ ಕುಳಿತು ಸ್ಥಳದಲ್ಲಿ ಸುದ್ದಿ ಮಾಡುವ […]
ಉಡುಪಿ:ಬಾಲ್ಯವಿವಾಹ ಪದ್ಧತಿ ನಿಷೇಧ ಕಾಯ್ದೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ : ಪೊಲೀಸ್ ಅಧೀಕ್ಷಕ ಡಿ.ಟಿ ಪ್ರಭು ಸೂಚನೆ

ಉಡುಪಿ: ಸಾಮಾಜಿಕ ಪಿಡುಗಾಗಿರುವ ಬಾಲ್ಯವಿವಾಹ ಪದ್ಧತಿಯನ್ನು ನಿರ್ಮೂಲನೆ ಮಾಡಲು ಜಾರಿಗೊಳಿಸಲಾದಕಾಯಿದೆ ಹಾಗೂ ಕಾನೂನುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದು ಪ್ರತಿಯೊಬ್ಬ ಅಧಿಕಾರಿಯ ಆದ್ಯ ಕರ್ತವ್ಯವಾಗಿದ್ದು, ಇದಕ್ಕೆ ಒತ್ತು ನೀಡಬೇಕು ಎಂದು ಉಪ ಪೊಲೀಸ್ ಅಧೀಕ್ಷಕ ಪ್ರಭು ಡಿ.ಟಿ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ […]
ಉಡುಪಿ:ಆ. 21 ರಂದು ನೇರ ಸಂದರ್ಶನ

ಉಡುಪಿ: ನಗರದ ಅಂಬಾಗಿಲು ಶಾಮಾ ಮ್ಯಾಟ್ರೀಕ್ಸ್ ಕರ್ಸ್ ಪ್ರೈ.ಲಿ ಇಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಆಗಸ್ಟ್ 21 ರಂದು ಬೆಳಗ್ಗೆ 10.30 ಕ್ಕೆ ನೇರ ಸಂದರ್ಶನ ನಡೆಯಲಿದೆ. ಸೇಲ್ಸ್ ಎಕ್ಸಿಕ್ಯೂಟಿವ್, ಬ್ಯಾಕ್ ಆಫೀಸ್, ಟೆಲಿಕಾಲರ್, ಆಟೋಮೊಬೈಲ್, ಎಲೆಕ್ಟಿçÃಷಿಯನ್ ಹಾಗೂ ರಿಸೇಪ್ಶನೀಸ್ಟ್ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, […]
ಮೇಲ್ಮನೆ ಸದಸ್ಯರಾಗಿ 45 ವರ್ಷ ಸೇವೆ: ಬಸವರಾಜ ಹೊರಟ್ಟಿ ಅವರಿಗೆ ಅಭಿನಂದನೆ ಸಲ್ಲಿಸಿದ ಮಂಜುನಾಥ ಭಂಡಾರಿ

ಬೆಂಗಳೂರು: ವಿಧಾನಮಂಡಲದಲ್ಲಿ ಅತ್ಯಂತ ಹಿರಿಯರಾಗಿ ಸಭಾಪತಿ ಪೀಠದಲ್ಲಿ ಕುಳಿತಿರುವ ಬಸವರಾಜ ಹೊರಟ್ಟಿ ಅವರು ಮೇಲ್ಮನೆ ಸದಸ್ಯರಾಗಿ 45 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ನಿವಾಸದಲ್ಲಿ ಭೇಟಿಯಾಗಿ ಶುಭಾಶಯಗಳನ್ನು ಸಲ್ಲಿಸಿದರು. ಹೊರಟ್ಟಿಯವರು ಓರ್ವ ನಿಷ್ಠುರವಾದಿಯಾಗಿ ಸದನದಲ್ಲಿ ಜನರ ಪರವಾದ ಗಟ್ಟಿ ಧ್ವನಿಯಾಗಿ ಹೆಜ್ಜೆ ಗುರುತು ಮೂಡಿಸಿದ್ದಾರೆ. ಮೇಲ್ನೋಟಕ್ಕೆ ಬಸವರಾಜ ಹೊರಟ್ಟಿಯವರು ಒರಟು ಮನಷ್ಯರಾಗಿ ಕಂಡರೂ ಅವರ ಮಾತು ಬಹಳ ಖಡಕ್. ವಿಶೇಷವಾಗಿ ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ಬಸವರಾಜ ಹೊರಟ್ಟಿಯವರು ʻಹೊರಟ್ಟಿ ಮಾಸ್ತರರು’ ಎಂದೇ […]
ಧರ್ಮಸ್ಥಳದ ವಿರುದ್ದ ವ್ಯವಸ್ಥಿತ ಷಡ್ಯಂತ್ರ; ತನಿಖೆ ಬಗ್ಗೆ ಡಾ.ಡಿ.ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ

ಧರ್ಮಸ್ಥಳ: ರಾಜ್ಯ ಹಾಗೂ ದೇಶದಲ್ಲಿ ಸಂಚಲನ ಮೂಡಿಸಿದ ಧರ್ಮಸ್ಥಳದ ತಲೆ ಬುರುಡೆ ಕೇಸ್ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇದೊಂದು ವ್ಯವಸ್ಥಿತ ಷಡ್ಯಂತ್ರ ಅಂತ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಇದೆಲ್ಲ ಅನಾವಶ್ಯಕ ವಾಗಿ ಮಾಡಿದ ಪ್ರಯತ್ನ. ಕ್ಷೇತ್ರ, ಕ್ಷೇತ್ರದ ಇತಿಹಾಸ, ಗೌರವ ಹಾಗೇ ಇದೆ. ಕ್ಷೇತ್ರದ ಬಗ್ಗೆ ಹಿಂದಿನಿಂದಲೂ ಷಡ್ಯಂತ್ರ ಮಾಡಿದ್ದಾರೆ ಅಂತ ಹೇಳಿದ್ದಾರೆ. ಎಸ್ಐಟಿ ತನಿಖೆಯನ್ನು ಸ್ವಾಗತಿಸಿದ ಅವರು, ಇದು ಒಳ್ಳೆಯ ಕೆಲಸ. ಸತ್ಯ ಹೊರಗೆ […]