ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅಮಾನುಷ ಕೃತ್ಯಗಳು ಎಸ್‌ಐಟಿ ತನಿಖೆ ಮೂಲಕ ಬೆಳಕಿಗೆ ಬರಲಿ: ಮುಖ್ಯಮಂತ್ರಿಗೆ ಪತ್ರ ಬರೆದ ಜಾಗೃತ ನಾಗರಿಕರು ಕರ್ನಾಟಕದ ಮುಖಂಡರು

ಬೆಂಗಳೂರು: ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನ ಅಮಾನುಷ ಘಟನೆಗಳು ನಡೆದಿದೆ.  ಈ ಘಟನೆಗಳ ಎಸ್‌ಐಟಿ ತನಿಖೆಗೆ ಬೆಂಬಲಿಸಿ ಜಾಗೃತ ನಾಗರಿಕರು ಕರ್ನಾಟಕ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ರಾಜ್ಯ ಸಚಿವ ಸಂಪುಟದ ಸದಸ್ಯರ ಮತ್ತು ವಿರೋಧ ಪಕ್ಷದ ಸದಸ್ಯರ ಕಾನೂನು ವಿರೋಧಿ, ಸಂವಿಧಾನ ವಿರೋಧಿ ಹೇಳಿಕೆಗಳಿಗೆ ಜಾಗೃತ ನಾಗರಿಕರು ಕರ್ನಾಟಕದ ಮುಖಂಡರು ಖಂಡಿಸಿದ್ದಾರೆ. ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಕಳೆದ ನಾಲ್ಕು ದಶಕಗಳಿಂದ ಅತ್ಯಾಚಾರ, ಕೊಲೆ, ಭೂ ಕಬಳಿಕೆ ಪ್ರಕರಣಗಳು ಆಗಾಗ ಮುನ್ನೆಲೆಗೆ ಬರುತ್ತಲೇ ಇವೆ. ಶಾಲಾ ಕಾಲೇಜುಗಳಿಗೆ ಹೋದ ವಿದ್ಯಾರ್ಥಿನಿಯರು […]

ವಿದ್ಯಾರ್ಥಿನಿಲಯಗಳ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ /ಪರಿಶಿಷ್ಟ ವರ್ಗದ ಸಾಮಾನ್ಯ ಪದವಿ ಕೋರ್ಸಿನಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 25 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ:8050770004 ಮತ್ತು 8050770005 ಅನ್ನು ಸಂಪರ್ಕಿಸಬಹುದಾಗಿದೆ […]

ಇಂದು (ಅಗಸ್ಟ್18) ಉಡುಪಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿರುವ ಹಿನ್ನಲೆ ಇಂದು ( ಅಗಸ್ಟ್ 18) ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಮತ್ತು ಐಟಿಐ ಗಳಿಗೆ ರಜೆಯನ್ನು ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ. ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚಿಸಿದೆ. ರೆಡ್ ಅಲರ್ಟ್::ಅಗಸ್ಟ್ 18 ರಿಂದ ಅಗಸ್ಟ್ […]

ನಾಳೆ (ಆ.18) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೂರ್ನಾಲ್ಕು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆ.18ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶ ಹೊರಡಿಸಿದ್ದಾರೆ.ಉಳಿದಂತೆ ಎಲ್ಲಾ ಪದವಿಪೂರ್ವ, ಐಟಿಐ, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ಕಾಲೇಜಿಗೆ ರಜೆ ಘೋಷಿಸಿರುವುದಿಲ್ಲ.

ಉಡುಪಿ: ಹಿರಿಯ ಪತ್ರಕರ್ತ ಹಾರ್ಯಾಡಿ ಮಂಜುನಾಥ ಭಟ್ ನಿಧನ

ಉಡುಪಿ: ಹಿರಿಯ ಪತ್ರಕರ್ತ ಹಾರ್ಯಾಡಿ ಮಂಜುನಾಥ್ ಭಟ್ (72) ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಭಾನುವಾರ ಬೆಳಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಬ್ರಹ್ಮಾವರ ತಾಲೂಕಿನ ಹಾರ್ಯಾಡಿಯಲ್ಲಿ 1953 ರಲ್ಲಿ ಜನಿಸಿದ ಮಂಜುನಾಥ್ ಭಟ್ ಅವರು, ಉಡುಪಿ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ಪದವಿ ಪಡೆದರು. ಆರಂಭದಲ್ಲಿ ಪ್ರೌಢಶಾಲಾ ಶಿಕ್ಷಕರಾಗಿ ಕೆಲಸ ಮಾಡಿದ ಅವರು, 1977 ರಲ್ಲಿ ಮಂಗಳೂರಿನ ನವಭಾರತ ಪತ್ರಿಕೆಯ ಮೂಲಕ ಪತ್ರಿಕೋದ್ಯಮ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದರು. ನಂತರ ಅವರು ಮುಂಗಾರು, ಕನ್ನಡ ಜನ ಅಂತರಂಗ, ಮತ್ತು ಉದಯವಾಣಿ ಪತ್ರಿಕೆಗಳಲ್ಲಿ ವರದಿಗಾರರು, ಉಪ-ಸಂಪಾದಕರಾಗಿ […]