ನ.6ರಂದು ಡಾ.ಜಿ ಶಂಕರ್ ಅವರಿಗೆ ಪಂಚವರ್ಣ ರಾಜ್ಯೋತ್ಸವ ಗೌರವ

ಕೋಟ: ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿವರ್ಷ ನಡೆಸಲ್ಪಡುವ ಕನ್ನಡ ರಾಜ್ಯೋತ್ಸವ ಸದ್ಭಾವನಾ 2026ರ ನಾಡುನುಡಿಗೆ ಭಾವ ನಮನ ಕಾರ್ಯಕ್ರಮ ನ.6ರಂದು ಸಂಜೆ ಕೋಟದ ಮಾಂಗಲ್ಯ ಮಂದಿರದ ಎದುರಿನ ಮೈದಾನದಲ್ಲಿ ಜರಗಲಿದೆ. ಈ ಪ್ರಯುಕ್ತ ರಾಜ್ಯದ ಪ್ರಸಿದ್ಧ ಸಾಧಕರಿಗೆ ಪಂಚವರ್ಣ ರಾಜ್ಯೋತ್ಸವ ಗೌರವ ಪ್ರದಾನ ಕಾರ್ಯಕ್ರಮ ಜರಗಲಿದ್ದು ಸಮಾಜ ಸೇವಕ ಡಾ.ಜಿ ಶಂಕರ್ ಫ್ಯಾುಲಿ ಟ್ರಸ್ಟ್ ಪ್ರವರ್ತಕ ಜಿ ಶಂಕರ್ ಅವರಿಗೆ ಪಂಚವರ್ಣ ರಾಜ್ಯೋತ್ಸವ ಗೌರವ ಗಣ್ಯರ ಸಮ್ಮುಖದಲ್ಲಿ […]

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ! ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಸುನಿಲ್ ಕುಮಾರ್ ಹೆಸರು ಚರ್ಚೆಯಲ್ಲಿ.!

ಬೆಂಗಳೂರು: ನವೆಂಬರ್‌ನಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಬಳಿಕ ರಾಜ್ಯ ಬಿಜೆಪಿಯ ಸಾಂಸ್ಥಿಕ ರಚನೆ ಹಾಗೂ ವಿಧಾನಸಭೆಯಲ್ಲಿನ ಪ್ರಮುಖ ಹುದ್ದೆಗಳಲ್ಲಿ ಬದಲಾವಣೆಗಳಾಗುವ ಸಾಧ್ಯತೆ ಇದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರ ಮೂರು ವರ್ಷಗಳ ಅವಧಿ ನವೆಂಬರ್‌ನಲ್ಲಿ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ, ಹೊಸ ನಾಯಕತ್ವದ ಆಯ್ಕೆ ಕುರಿತು ಪಕ್ಷದ ವರಿಷ್ಠರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.ರಾಧಾ ಮೋಹನ್ ದಾಸ್ ಅಗರ್ವಾಲ್ ಅವರ ಬದಲಿಗೆ ಹರೀಶ್ ದ್ವಿವೇದಿ ಅವರನ್ನು […]

ಏನ್.ಎಸ್.ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಉಡುಪಿ: ಉಡುಪಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಏನ್.ಎಸ್.ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆಯು ಗುರುವಾರ ನಗರದ ಜಿಲ್ಲಾ ತರಬೇತಿ ಮತ್ತು ಶಿಕ್ಷಣ ಸಂಸ್ಥೆ (ಡಯಟ್) ಇಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾದ್ಯಕ್ಷೆ ನಿರುಪಮ ಪ್ರಸಾದ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯ ಪಾಲನೆ, ಕರ್ತವ್ಯಪ್ರಜ್ಞೆ ಹಾಗೂ ಮಾನವೀಯ ಮೌಲ್ಯಗಳನ್ನು ಗಟ್ಟಿಗೊಳಿಸುವಲ್ಲಿ ಎನ್.ಎಸ್.ಎಸ್ ನ ಪಾತ್ರ ದೊಡ್ಡದು. ಇಂದಿನ ಯುವಜನತೆ ಮೊಬೈಲ್ ಗೀಳಿನಿಂದ ಹೊರಬಂದು ತಮ್ಮದೇ ಆದ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕಾದ […]

ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆಯನ್ನು ಅರ್ಥಪೂರ್ಣವಾಗಿ ಆಚರಿಸಿ, ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ವಿದ್ಯಾರ್ಥಿಗಳಿಗೆ ನಮ್ಮ ದೇಶದ ಸಂವಿಧಾನದ ಬಗ್ಗೆ ಹಾಗೂ ಸಂಸದೀಯ ವ್ಯವಸ್ಥೆಯನ್ನು ಪರಿಚಯಿಸುವ ಉದ್ದೇಶದಿಂದ ಯುವ ಸಂಸತ್ತು ಸಭೆಯನ್ನು ಆಯೋಜಿಸಲಾಗುತ್ತಿದೆ. ಇದನ್ನು ವ್ಯವಸ್ಥಿತ ಹಾಗ ಅರ್ಥ ಪೂರ್ಣವಾಗಿ ಆಯೋಜಿಸಿ ಯಶಸ್ವಿಗೊಳಿಸಲು ಕಾರ್ಯ ಪ್ರವೃತ್ತರಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ […]

ಉಡುಪಿ ಜಿಲ್ಲಾ ಪಂಚಾಯಿತಿಯ 28 ಕ್ಷೇತ್ರಗಳ ಮೀಸಲಾತಿ ಪ್ರಕಟ

ಉಡುಪಿ: ಉಡುಪಿ ಜಿಲ್ಲಾ ಪಂಚಾಯಿತಿಯ 28 ಕ್ಷೇತ್ರಗಳ ಮೀಸಲಾತಿ ವಿವರಗಳನ್ನು ಒಳಗೊಂಡ ಪಟ್ಟಿ ಪ್ರಕಟಗೊಂಡಿದೆ. ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಸಂಖ್ಯೆ, ಹೆಸರು ಹಾಗೂ ಮೀಸಲಾತಿ ವರ್ಗಗಳನ್ನು ಪಟ್ಟಿಯಲ್ಲಿ ನಮೂದಿಸಲಾಗಿದೆ. ಪಟ್ಟಿಯ ಪ್ರಕಾರ, ವಿವಿಧ ಕ್ಷೇತ್ರಗಳನ್ನು ಸಾಮಾನ್ಯ, ಸಾಮಾನ್ಯ ಮಹಿಳೆ, ಹಿಂದುಳಿದ ವರ್ಗಗಳ ಎ ಮತ್ತು ಬಿ ವಿಭಾಗ, ಹಿಂದುಳಿದ ವರ್ಗಗಳ ಮಹಿಳಾ ಮೀಸಲಾತಿ ಹಾಗೂ ಅನುಸೂಚಿತ ಜಾತಿಗೆ ಮೀಸಲಿಡಲಾಗಿದೆ. ಇದರಿಂದ ಜಿಲ್ಲಾ ಪಂಚಾಯಿತಿ ಕ್ಷೇತ್ರವಾರು ಮೀಸಲಾತಿಯ ವಿವರಗಳು ಲಭ್ಯವಾಗಿವೆ. ಶಿರೂರು, ಕೊಲ್ಲೂರು, ಕಂಬದಕೋಣೆ, ತ್ರಾಸಿ, ವಂಡ್ಸೆ, ಸಿದ್ದಾಪುರ, […]