ಉಡುಪಿ: ಪೆರಂಪಳ್ಳಿ ವಾರ್ಡಿನ ಉಪಚುನಾವಣೆಗೆ ಕಾಂಗ್ರೆಸ್ ಮುಖಂಡರಿಂದ ಬಿರುಸಿನ ಮತಪ್ರಚಾರ.

ಉಡುಪಿ: ಉಡುಪಿ ನಗರಸಭೆಯ 13ನೇ ಪೆರಂಪಳ್ಳಿ ವಾರ್ಡಿನ ಉಪಚುನಾವಣೆಯು ಡಿ.27 ಬುಧವಾರದಂದು ನಡೆಯಲಿದ್ದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀಮತಿ ಶ್ರುತಿ ಅವರ ಪರವಾಗಿ ಕಾಂಗ್ರೆಸ್ ಮುಖಂಡರಾದ ಪ್ರಸಾದ್‌ರಾಜ್ ಕಾಂಚನ್, ರಮೇಶ್ ಕಾಂಚನ್, ಕುಶಲ್ ಶೆಟ್ಟಿ, ಗೀತಾ ವಾಘ್ಲೆ, ಜ್ಯೋತಿ ಹೆಬ್ಬಾರ್, ಪ್ರಖ್ಯಾತ್ ಶೆಟ್ಟಿ ಅವರು ಮನೆ ಮನೆಗಳಿಗೆ ತೆರಳಿ ಕರ್ನಾಟಕ ರಾಜ್ಯ ಸರ್ಕಾರದ ಜನಪರ ಯೋಜನೆ ಹಾಗೂ ಗ್ಯಾರಂಟಿಗಳ ಬಗ್ಗೆ ತಿಳಿಸಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ನಾಯಕರಾದ ಗಣೇಶ್ ನೆರ್ಗಿ, ಸತೀಶ್ ಕೊಡವೂರು, ಲಕ್ಷ್ಮಣ್ ಪೂಜಾರಿ, […]

ಡಿ.24: ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅಮೃತ ವೈಭವ – ಹೊನಲು ಬೆಳಕಿನ ಸಾಂಸ್ಕೃತಿಕ ಉತ್ಸವ

ಹೆಬ್ರಿ: ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಡಿ. 24 ರಂದು ಸಂಜೆ 6 ಗಂಟೆಗೆ ಅಮೃತ ವೈಭವ – ಹೊನಲು ಬೆಳಕಿನ ಸಾಂಸ್ಕೃತಿಕ ಉತ್ಸವ ನಡೆಯಲಿದೆ. ಅಮೃತ ಭಾರತಿ ಟ್ರಸ್ಟ್ ಅಧ್ಯಕ್ಷ ಸಿಎ ಎಂ. ರವಿರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಸಭಾ ಸದಸ್ಯ ಲೆಹರ್ ಸಿಂಗ್, ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, […]

ಉಡುಪಿ: ಹೃದಯಾಘಾತಕ್ಕೆ ಪಿಯುಸಿ ವಿದ್ಯಾರ್ಥಿ ಮೃತ್ಯು..!

ಉಡುಪಿ: ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತಕ್ಕೆ ಮರಣವಾಗುವ ಸುದ್ದಿಗಳು ಕೇಳಿಬರುತ್ತಿದೆ. ಚಿಕ್ಕಮಗಳೂರಿನಲ್ಲಿ 7ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆಯ ಬೆನ್ನಿಗೇ ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಕಲ್ಯಾಣಪುರದ ಮಿಲಾಗ್ರಿಸ್ ಪಿಯು ಕಾಲೇಜಿನ ಪ್ರಥಮ ಪಿಯುಸಿ ಓದುತ್ತಿದ್ದ ಅಫ್ಕಾರ್ (17) ಮೃತ ವಿದ್ಯಾರ್ಥಿ. ಅಫ್ಕಾರ್‌ ಹುಟ್ಟಿನಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಎಂದು ಮನೆಯವರು ತಿಳಿಸಿದ್ದಾರೆ. ಡಿಸೆಂಬರ್ 6ರಂದು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದಿದ್ದ ಬಾಲಕ ಕಳೆದ 18ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ. […]

ಚಿತ್ರನಟಿ ಸಾಯಿ ಪಲ್ಲವಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ

ಉಡುಪಿ: ದಕ್ಷಿಣ ಭಾರತದ ಪ್ರಸಿದ್ಧ ಚಿತ್ರನಟಿ ಸಾಯಿ ಪಲ್ಲವಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ಖಾಸಗಿ ಕಾರ್ಯ ನಿಮಿತ್ತ ಕರಾವಳಿಗೆ ಬಂದಿರುವ ಚಿತ್ರನಟಿ ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಪಡೆದಿದ್ದಾರೆ. ನಂತರ ಕಾಣಿಯೂರು ಮಠಕ್ಕೆ ತೆರಳಿ ಶ್ರೀ ವಿದ್ಯಾ ವಲ್ಲಭ ತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಮಠಕ್ಕೆ ಭೇಟಿ ನೀಡಿದ ಸಾಯಿ ಪಲ್ಲವಿ ಅವರನ್ನು ಶ್ರೀ ಕೃಷ್ಣ ಮಠದ ವತಿಯಿಂದ ಗೌರವಿಸಲಾಯಿತು.

ಮಲ್ಪೆ: ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ – 8 ಮಂದಿಯ ರಕ್ಷಣೆ

ಮಲ್ಪೆ: ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಗೊಂಡಿದ್ದ ಪರಿಣಾಮ ಅದರಲ್ಲಿದ್ದ 8 ಮಂದಿ ಮೀನುಗಾರರನ್ನು ಬೇರೆ ಬೋಟ್ ನವರು ರಕ್ಷಿಸಿದ ಘಟನೆ ನಡೆದಿದೆ. ಡಿ.12ರಂದು ರಾತ್ರಿ ಕಡೆಕಾರು ರಕ್ಷಣಾ ಸಂಸ್ಥೆಯ ಶ್ರೀ ನಾರಾಯಣ ಎಂಬ ಬೋಟ್ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಆದರೆ ಡಿಸೆಂಬರ್ 19 ರಂದು ಬೆಳಗ್ಗೆ ಸಮುದ್ರದಲ್ಲಿ ಮಲ್ಪೆಯಿಂದ 26 ಮಾರು ಆಳದಲ್ಲಿ ದೋಣಿ ಮುಳುಗಡೆಗೊಂಡಿದೆ. ಬೆಳಗ್ಗೆ 6.30ರ ಸುಮಾರಿಗೆ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ನೀರಿನಡಿಯಲ್ಲಿ ಯಾವುದೋ ವಸ್ತು ದೋಣಿಯ ತಳ ಒಡೆದು ನೀರು ನುಗ್ಗಲು […]