ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ನಿನಾದ ತ್ರೈಮಾಸಿಕ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

ಕಾರ್ಕಳ: ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಹೊರತರಲಾಗುತ್ತಿರುವ ತ್ರೈಮಾಸಿಕ ಪತ್ರಿಕೆ “ನಿನಾದ” ಸಂಚಿಕೆ-5 ಅನ್ನು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವರ್ಗದವರ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು. ಲಿಂಗಪ್ಪ ಮತ್ತು ರತ್ನಾ ಲಿಂಗಪ್ಪ ದಂಪತಿಗಳು ತ್ರೈಮಾಸಿಕ ಪತ್ರಿಕೆಯನ್ನು ಅನಾವರಣಗೊಳಿಸಿದರು. ವಿದ್ಯಾ ಸಂಸ್ಥೆಯ ಸಂಸ್ಥಾಪಕ ಅಶ್ವತ್ ಎಸ್. ಎಲ್ ಮಾತನಾಡಿ ನಿನಾದ ಪತ್ರಿಕೆ ವಿದ್ಯಾರ್ಥಿಗಳಿಗೆ, ಯುವ ಬರಹಗಾರರಿಗೆ ಉತ್ತಮವಾದ ವೇದಿಕೆ ಒದಗಿಸುತ್ತಿದೆ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಒಳ್ಳೆಯ, ಚಿಂತನಾತ್ಮಕ ಅಂಶಗಳನ್ನು ಬೆಳೆಸಲು ಹಾಗೂ ಕ್ರಿಯಾಶೀಲ ಮನಸ್ಸುಗಳನ್ನು ಕಟ್ಟಲು ಕ್ರಿಯೇಟಿವ್ ಎಂದಿಗೂ ಸಿದ್ಧವಾಗಿದೆ. […]
ಹೋಟೆಲ್, ಫಾಸ್ಟ್ ಫುಡ್ ಅಂಗಡಿಗಳಲ್ಲಿ ಹಾನಿಕಾರಕ ಬಣ್ಣ ಅಥವಾ ರಾಸಾಯನಿಕ ಬಳಸುವಂತಿಲ್ಲ: ನಗರಸಭೆ

ಉಡುಪಿ: ಜಿಲ್ಲೆಯ ಹೊಟೇಲ್ ಮಾಲಕರು ಹಾಗೂ ಫಾಸ್ಟ್ ಫುಡ್ ಅಂಗಡಿಯವರು ತಮ್ಮ ಉದ್ಯಮದಲ್ಲಿಹಾನಿಕಾರಕ ಬಣ್ಣ, ಟೆಸ್ಟಿಂಗ್ ಪೌಡರ್, ರಾಸಾಯನಿಕ ಹಾಗೂ ಪೇಪರ್ ಪ್ಲೇಟ್, ಪೇಪರ್ ಗ್ಲಾಸ್ ಮತ್ತು ಟಿಶ್ಯೂಗಳನ್ನು ಬಳಸದೇ ಮರುಬಳಕೆಯ ವಸ್ತುಗಳಾದ ಸ್ಟೀಲ್ ಲೋಟ, ಸ್ಟೀಲ್ ತಟ್ಟೆಗಳನ್ನು ಕಡ್ಡಾಯವಾಗಿ ಬಳಸಿ ತ್ಯಾಜ್ಯವನ್ನು ಕಡಿಮೆ ಮಾಡಬೇಕು. ನಗರಸಭೆಯ ಪೌರಾಯುಕ್ತ, ಪರಿಸರ ಅಭಿಯಂತರ, ಕಿರಿಯ ಆರೋಗ್ಯ ನಿರೀಕ್ಷಕ, ಸ್ಯಾನೀಟರಿ ಸೂಪರ್‌ವೈಸರ್ ಹಾಗೂ ಪೌರಕಾರ್ಮಿಕರು ಈಗಾಗಲೇ ನಗರದ ಹಲವು ಕಡೆ ದಾಳಿ ನಡೆಸಿ, ಹಾನಿಕಾರಕ ಬಣ್ಣ, ಟೇಸ್ಟಿಂಗ್ ಪೌಡರ್‌ನ್ನು ವಶಪಡಿಸಿಕೊಂಡು […]
ಕೃಷಿ ಇಲಾಖೆಯಲ್ಲಿ ತಾಂತ್ರಿಕ ಸಹಾಯಕರ ಹುದ್ದೆಗಾಗಿ ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಆಹಾರ ಮತ್ತು ಪೌಷ್ಠಿಕ ಭದ್ರತೆಯೋಜನೆಯಡಿ ತಾಂತ್ರಿಕ ಸಹಾಯಕರ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಿ.ಎಸ್.ಸಿ (ಕೃಷಿ) ಪದವಿ ಹೊಂದಿರುವ, ಕಂಪ್ಯೂಟರ್ ಜ್ಞಾನ ಮತ್ತು ಕೃಷಿ ಸಂಶೋಧನೆ ಹಾಗೂ ಕೃಷಿ ವಿಸ್ತರಣಾ ಕಾರ್ಯಕ್ರಮದಲ್ಲಿ ಅನುಭವವುಳ್ಳವರು ಡಿಸೆಂಬರ್ 26 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಸಿ ಬ್ಲಾಕ್, ಎರಡನೇ ಮಹಡಿ, ಕೊಠಡಿ ಸಂಖ್ಯೆ ಸಿ-304, […]
ಮೀನುಗಾರರಿಗೆ ಆರೋಗ್ಯ ಸಮಸ್ಯೆಯಾದರೆ ಬರುತ್ತೆ ಬೋಟ್ ಆಂಬ್ಯುಲೆನ್ಸ್ : ಕಡಲಮಕ್ಕಳಿಗೆ ನೆರವು

ಮಂಗಳೂರು: ಕರಾವಳಿ ಕರ್ನಾಟಕದ ಪ್ರಮುಖ ವಾಣಿಜ್ಯ ವಹಿವಾಟು ಮತ್ಸೋದ್ಯಮ ವಾರ್ಷಿಕವಾಗಿ ಸಾವಿರಾರು ಕೋಟಿ ರೂಪಾಯಿ ವಹಿವಾಟು ಹೊಂದಿದೆ. ಮೀನುಗಾರಿಕೆಯ ಈ ಉದ್ಯಮದಲ್ಲಿ ಸಾವಿರಾರು ಮಂದಿ ತೊಡಗಿಸಿಕೊಂಡಿದ್ದಾರೆ. ಕಡಲಿನಾಳಕ್ಕೆ ಹೋಗಿ ಮೀನುಗಾರಿಕೆ ನಡೆಸುವಾಗ ಕಡಲಮಕ್ಕಳಿಗೆ ಆರೋಗ್ಯ ಸಮಸ್ಯೆ ಎದುರಾದರೆ ಶೀಘ್ರ ಚಿಕಿತ್ಸೆಗೆ ಕರೆದುಕೊಂಡು ಬರುವ ವ್ಯವಸ್ಥೆ ಇಲ್ಲ. ಈ ಹಿನ್ನೆಲೆಯಲ್ಲಿ ಉಳ್ಳಾಲ ವಲಯ ನಾಡದೋಣಿ ಮತ್ತು ಗಿಲ್ನೆಟ್ ಮೀನುಗಾರರ ಸಂಘ ಹೊಸ ಪ್ರಯತ್ನವೊಂದನ್ನು ಮಾಡಿದೆ.ಮೀನುಗಾರಿಕೆ ವೇಳೆ ಮೀನುಗಾರರಿಗೆ ಆರೋಗ್ಯದ ಸಮಸ್ಯೆ ಉಂಟಾದರೆ ಶೀಘ್ರ ಚಿಕಿತ್ಸೆಗೆ ಕರೆದೊಯ್ಯಲು ಆಂಬ್ಯುಲೆನ್ಸ್ ಬೋಟ್ […]
ಕಾರ್ಕಳ: ವ್ಯಕ್ತಿ ನಾಪತ್ತೆ

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪದ ನಂದಳಿಕೆ ಗ್ರಾಮದ ಅಂಬಾಡಾಗಿ ಮನೆಯ ನಿವಾಸಿ ವಿಠಲ ಆಚಾರ್ಯ(56) ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಅವರು ಡಿ. 12ರಂದು ಬೆಳಿಗ್ಗೆ ಮನೆಯಿಂದ ಪಿಲಾರು ಗ್ರಾಮದ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಕೆಲಸಕ್ಕೆಂದು ಹೋದವರು, ಇದುವರೆಗೂ ಮನೆಗೂ ಬಾರದೇ ಸಂಬಂಧಿಕರ ಮನೆಗೂ ಹೋಗದೇ ಕಾಣೆಯಾಗಿದ್ದಾರೆ. ಇವರು ಎಲ್ಲಿಯಾದರೂ ಕಂಡು ಬಂದಲ್ಲಿ 9480805462, 7411973927 ಕರೆ ಮಾಡುವಂತೆ ತಿಳಿಸಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.