ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ

ಉಡುಪಿ: ಶ್ರೀಕೃಷ್ಣಮಠಕ್ಕೆ ಮಾಜಿ ಉಪಮುಖ್ಯಮಂತ್ರಿಗಳಾದ ಈಶ್ವರಪ್ಪನವರು ಆಗಮಿಸಿ ದೇವರ ದರ್ಶನ ಪಡೆದು, ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಇವರಿಂದ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬಿ.ಜೆ.ಪಿ.ಜಿಲ್ಲಾ ವಕ್ತಾರರಾದ ರಾಘವೇಂದ್ರ ಕಿಣಿ, ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಮೊದಲಾದವರು ಉಪಸ್ಥಿತರಿದ್ದರು.
ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ

ಕುಂದಾಪುರ: ಇಲ್ಲಿನ ಪ್ರಸಿದ್ದ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಡಿ.16 ರಂದು ಬ್ರಹ್ಮರಥೋತ್ಸವ ಹಾಗೂ ಅಷ್ಟೋತ್ತರ ಸಹಸ್ರ ನಾರಿಕೇಳ ಗಣಯಾಗದ ಪ್ರಯುಕ್ತ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ದೀಪ ಬೆಳಗುವ ಮೂಲಕ ವಿದ್ಯುಕ್ತ ಚಾಲನೆ ನೀಡಲಾಯಿತು. ರಥೋತ್ಸವ ಪ್ರಯುಕ್ತ ಬುಧವಾರದಂದು ಬೆಳಗ್ಗೆ ದೇವತಾ ಪ್ರಾರ್ಥನೆ, ಪುಣ್ಯಾಹ, ಸ್ವಸ್ತಿವಾಚನ, ಗಣಹೋಮ, ಅಥರ್ವಶೀರ್ಷ, ಉಪನಿಷತ್ ಹೋಮ, ಸತ್ಯಗಣಪತಿ ವೃತ, ಮಹಾಪೂಜೆ, ರಂಗಪೂಜೆ, ಡೋಲಾರೋಹಣ, ಪಲ್ಲಕ್ಕಿ ಉತ್ಸವ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮದರ್ಶಿಗಳಾದ […]
ಮಣಿಪಾಲ: ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಸರಕಾರಿ ಕೈಗಾರಿಕಾ ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಮಣಿಪಾಲ: ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಮಣಿಪಾಲ ವಲಯ ವತಿಯಿಂದ ಮಣಿಪಾಲದ ಸರಕಾರಿ ಕೈಗಾರಿಕಾ ತರಬೇತಿ ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ಉಡುಪಿ ತಾಲೂಕು ಜನಜಾಗ್ರತಿ ವೇದಿಕೆ ಅಧ್ಯಕ್ಷ ಸತ್ಯಾನಂದ ನಾಯಕ್ ಮಾತನಾಡಿ, ಯೋಜನೆಯ ಹಲವಾರು ಸೌಲಭ್ಯಗಳು, ಸಮಾಜಕ್ಕೆ ಯೋಜನೆಯಿಂದ ಆಗಿರುವ ಪ್ರಯೋಜನಗಳು ಮತ್ತು, ಸ್ವಾಸ್ತ್ಯ ಸಂಕಲ್ಪದ ಉದ್ದೇಶವನ್ನು ತಿಳಿಸಿದರು. ಸಂಪನ್ಮೂಲ ವ್ಯಕ್ತಿ ಬಾಳಿಗಾ ಆಸ್ಪತ್ರೆಯ ಹಿರಿಯ ವೈದ್ಯೆ ಡಾ. ಸೌಜನ್ಯ ಮಾತನಾಡಿ, ದುಶ್ಚಟಗಳಿಂದ ಆಗುವ […]
ಉಡುಪಿ: ತಾಲೂಕು ಸಾಹಿತ್ಯ ಸಮ್ಮೇಳನದ ಬಿತ್ತಿಪತ್ರ ಸಚಿವರಿಂದ ಲೋಕಾರ್ಪಣೆ.

ಉಡುಪಿ: ತಾಲೂಕು ಸಮ್ಮೇಳನಗಳಿಗೆ ನೀಡುವ ಅನುದಾನವನ್ನು ಸ್ಥಗಿತಗೊಳಿಸಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಪರಿಶೀಲಿಸಿ ಕಾರ್ಯಗತ ಗೊಳಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಖಾತೆ ಸಚಿವ ಶ್ರೀ ಶಿವರಾಜ್ ಸಂಗಪ್ಪ ತಂಗಡಗಿ ಹೇಳಿದರು. ಅವರು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಉಡುಪಿ ತಾಲೂಕು ಘಟಕದ ವತಿಯಿಂದ ಡಿಸೆಂಬರ್ 30, ಶನಿವಾರದಂದು ಮಣಿಪಾಲದ ಶಿವಪ್ಪಾಡಿ ಉಮಾಮಹೇಶ್ವರ ದೇವಸ್ಥಾನದ ಶ್ರೀ ರಮಾನಂದ ಸ್ಮೃತಿ ಮಂಟಪದಲ್ಲಿ ನಡೆಯಲಿರುವ ಉಡುಪಿ ತಾಲೂಕು 14ನೆ […]
ಡಿ. 27 ರಂದು ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ

ಉಡುಪಿ: ಜಿಲ್ಲಾಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮವು ಡಿಸೆಂಬರ್ 27 ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಬಗ್ಗೆ ಚರ್ಚಿಸಲಾಗುವುದು. ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲು ಹಾಗೂ ಸಲಹೆಗಳಿದ್ದಲ್ಲಿ ಡಿಸೆಂಬರ್ 20 ರ ಒಳಗಾಗಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ಇವರಿಗೆ ಲಿಖಿತವಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2575650 ಅನ್ನು ಸಂಪರ್ಕಿಸಬಹುದಾಗಿದೆ ಎಂದು […]