ಕಾಪು: ಲೀಲಾಧರ್ ಶೆಟ್ಟಿ ದಂಪತಿ ಆತ್ಮಹತ್ಯೆ

ಕಾಪು: ಕಾಪು ಕ್ಷೇತ್ರದಲ್ಲಿ ಮಾತ್ರವಲ್ಲದೆ ತುಳುನಾಡಿನದ್ಯಂತ ತನ್ನ ಆದರ್ಶ ವ್ಯಕ್ತಿತ್ವದಿಂದಲೇ ಜನಮನ್ನಣೆ ಪಡೆದು ಸಮಾಜದ ಸರ್ವರ ಆಪ್ತಮಿತ್ರನಂತಿದ್ದ ಸಮಾಜ ಸೇವಕ ಕಾಪು ಲೀಲಾಧರ್ ಶೆಟ್ಟಿ ಅವರು ಅವರ ಅರ್ಧಾಂಗಿ ಶ್ರೀಮತಿ ವಸುಂಧರಾ ಲೀಲಾಧರ ಶೆಟ್ಟಿ ಅವರೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ವಿಚಾರ ನೆನ್ನೆ ರಾತ್ರಿ ನಡೆದಿದೆ. ಇವರು ಕಾಪು ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು, ಕಾಪು ರಂಗತರಂಗ ನಾಟಕ ತಂಡ ಕಟ್ಟಿ ಬೆಳೆಸಿದ ಕೀರ್ತಿ ಇವರದು, ಈ ತಂಡದ ಯಜಮಾನಿಕೆಯೊಂದಿಗೆ ಅತ್ಯಂತ ಸುಪ್ರಸಿದ್ಧಿ ಹೊಂದಿದ್ದ ಇವರು ಗುರ್ಮೇ […]

ಉಡುಪಿ: ಭ್ರಷ್ಟ ಸಂಸದ ಧೀರಜ್ ಸಾಹುನನ್ನು ಗಲ್ಲಿಗೇರಿಸಿ – ಕೆ. ಉದಯಕುಮಾರ್ ಶೆಟ್ಟಿ

ಉಡುಪಿ: ಕಾಂಗ್ರೆಸ್‌ ಪಕ್ಷವು ಭ್ರಷ್ಟಾಚಾರದ ಕೂಪ. ಅಲ್ಲಿ ಮೌಲ್ಯಗಳನ್ನು ಎತ್ತಿ ಹಿಡಿಯುವ ನಾಯಕರೇ ಇಲ್ಲ. ಇಡೀ ದೇಶದ ಸಂಪತ್ತನ್ನು ಲೂಟಿ ಹೊಡೆದಿದ್ದಾರೆ. ಅದಕ್ಕೆ ರಾಜ್ಯಸಭಾ ಸದಸ್ಯ ಧೀರಜ್ ಸಾಹುವೇ ಜೀವಂತ ಸಾಕ್ಷಿ. ಆತನನ್ನು ಗಲ್ಲಿಗೇರಿಸಬೇಕು ಎಂದು ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ ಹೇಳಿದರು. ಜಾರ್ಖಂಡ್‌ನ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಧೀರಜ್ ಸಾಹು ಮನೆಯಲ್ಲಿ ಪತ್ತೆಯಾದ 300 ಕೋಟಿ ರೂ. ನಗದು ಹಣ ಹಾಗೂ ಭ್ರಷ್ಟಚಾರವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕಡಿಯಾಳಿಯ […]

ಉಡುಪಿ: ಮೆಡಿಕಲ್ ಶಾಪ್ ಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ – ಜಿಲ್ಲಾಧಿಕಾರಿ

ಉಡುಪಿ: ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಕ್ರಿಮಿನಲ್ ಪ್ರೊಸೀಜರ್ ಕೋಡ್, 1973 ಕಲಂ 133 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲೆಯಲ್ಲಿ “ಘಿ” ಮತ್ತು “ಊ” ಔಷಧಿಗಳನ್ನು ಮಾರಾಟ ಮಾಡುವ ಎಲ್ಲಾ ವೈದ್ಯಕೀಯ ಹಾಗೂ ಫಾರ್ಮಸಿ ಅಂಗಡಿಗಳಲ್ಲಿ ಕಡ್ಡಾಯವಾಗಿ ಸಿ.ಸಿ ಟಿವಿ ಅಳವಡಿಸುವಂತೆ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಆದೇಶಿಸಿದ್ದಾರೆ. ಸಿ.ಸಿ.ಟಿವಿ ಕ್ಯಾಮೆರಾವನ್ನು ಅಳವಡಿಸಲು ಎಲ್ಲಾ ವೈದ್ಯಕೀಯ/ಫಾರ್ಮಸಿ ಅಂಗಡಿ ಮಾಲೀಕರಿಗೆ ಎರಡು ವಾರಗಳ ಕಾಲಾವಕಾಶ ನೀಡಲಾಗಿದ್ದು, ಜಿಲ್ಲಾ ಔಷಧ ನಿಯಂತ್ರಕರು ಅಂಗಡಿಗಳಲ್ಲಿ ಸಿ.ಸಿ ಟಿವಿ ಅಳವಡಿಸಿರುವ ಕುರಿತು ತಪಾಸಣೆ […]

ಬೈಂದೂರು: ಡಿ. 13 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ

ಬೈಂದೂರು: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಡಿಸೆಂಬರ್ 13 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಬೈಂದೂರು ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ. ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881, ಮೊ.ನಂ: 9364062581, ಪೊಲೀಸ್ ನಿರೀಕ್ಷಕರು-1 ದೂ.ಸಂಖ್ಯೆ: 0820-2536661, ಮೊ.ನಂ: 9364062695 ಹಾಗೂ […]

ಬಿಳಿಗಡ್ಡೆಗೂ ಬಂತು ರಾಜಯೋಗ: ಸತತ ಏರಿಕೆಯ ಹಾದಿಯಲ್ಲಿ ಬೆಳ್ಳುಳ್ಳಿ

ಬೆಂಗಳೂರು: ಟೊಮೆಟೊ ಆ ಬಳಿಕ ಈರುಳ್ಳಿ ಇದೀಗ ಬೆಳ್ಳುಳ್ಳಿಗೂ ರಾಜಯೋಗ ಬಂದಿದೆ. ಬೆಳ್ಳುಳ್ಳಿ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕೆಲವೆಡೆ ಕಿಲೋ ಬೆಳ್ಳುಳ್ಳಿ 400 ರೂ. ತಲುಪಿದೆ ತಲುಪಿದೆ. ಅಕ್ಟೋಬರ್ ಹಾಗೂ ನವೆಂಬರ್‌ನಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಹಲವಾರು ಪ್ರದೇಶಗಳಲ್ಲಿ ಬೆಳೆಗಳು ಹಾನಿಗೀಡಾಗಿದ್ದು ಬೆಳ್ಳುಳ್ಳಿ ಬೆಲೆ ಏರಿಕೆಯತ್ತ ಸಾಗಿದೆ. ಹೊಸ ಬೆಳೆ ಮಾರುಕಟ್ಟೆಗೆ ಬರುವವರೆಗೂ ಬೆಲೆ ಏರಿಕೆ ಜಾರಿಯಲ್ಲಿರಲಿದೆ ಎಂದು ಅಂದಾಜಿಸಲಾಗಿದೆ. ಕಳೆದ 6 ವಾರಗಳಿಂದ ಬೆಳ್ಳುಳ್ಳಿ ಬೆಲೆ ದುಪ್ಪಟ್ಟಾಗಿದೆ. ವರದಿಗಳ ಪ್ರಕಾರ ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು […]