ಉಡುಪಿ: ಹಾಸ್ಟೆಲ್ ವಾರ್ಡನ್ ನಾಪತ್ತೆ

ಉಡುಪಿ: ಉಡುಪಿಯ ರೆಸಿಡೆನ್ಸಿಯಲ್ ಸ್ಕೂಲ್ ಒಂದರ ಹಾಸ್ಟೆಲ್ ವಾರ್ಡನ್ ಗುಣಕರ (32) ಎಂಬ ವ್ಯಕ್ತಿಯು ಡಿಸೆಂಬರ್ 6 ರಂದು ಹಾಸ್ಟೆಲ್ ನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಸಪೂರ ಮೈಕಟ್ಟು, ಗೋಧಿ ಮೈಬಣ್ಣ, ಉದ್ದಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಇಂದು (ಡಿ.8) ಕೊನೆಯುಸಿರೆಳೆದಿದ್ದಾರೆ. ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಟಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.  ಲೀಲಾವತಿ ಸುಮಾರು 50 ವರ್ಷಗಳ ಕಾಲ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದರು. ತಮ್ಮ ಜೀವಿತಾವಧಿಯಲ್ಲಿ ಸುಮಾರು 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರೋ ಲೀಲಾವತಿ ಪುತ್ರ ವಿನೋದ್ ರಾಜ್ ಹಾಗೂ ಅವರ ಕುಟುಂಬವನ್ನು ಅಗಲಿದಿದ್ದಾರೆ. ಡಾ.ರಾಜ್‌ಕುಮಾರ್, ವಿಷ್ಣುವರ್ಧನ್ ಸೇರಿದಂತೆ ಕನ್ನ ಚಿತ್ರರಂಗದ ಗಣ್ಯರೊಂದಿಗೆ ನಟಿಸಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದರು. ಸಿನಿಮಾದ ಜೊತೆ ಜೊತೆಗೆ ಸಮಾಜ […]

ತೀವ್ರಗೊಂಡ ಮರಳು ಸಮಸ್ಯೆ: ಮರಳು ಸಮಿತಿಯ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುರುಪ್ರಸಾದ್ ಶೆಟ್ಟಿ

ಉಡುಪಿ: ಜಿಲ್ಲೆಯಲ್ಲಿ ಉಲ್ಬಣಗೊಂಡಿರುವ ಮರಳಿನ ಸಮಸ್ಯೆಗೆ ಪರಿಹಾರ ಕಾಣದೆ ನಿರ್ಮಾಣ ಹಂತದಲ್ಲಿರುವ ಮನೆಗಳು ಅತಂತ್ರ ಸ್ಥಿತಿಯಲ್ಲಿದ್ದು ಸಾರ್ವಜನಿಕರು ಪರದಾಡುವಂತಾಗಿದೆ. ಉಡುಪಿ ಜಿಲ್ಲಾಡಳಿತ ನೇಮಕ ಮಾಡಿರುವ 7 ಸದಸ್ಯರ ಮರಳು ಸಮಿತಿಯ ಸದಸ್ಯ ಗುರುಪ್ರಸಾದ್ ಶೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಜಿಲ್ಲೆಯಾದ್ಯಂತ ಕಟ್ಟಡದ ನಿರ್ಮಾಣ ಕ್ಷೇತ್ರದಲ್ಲಿ ವಿಪರೀತ ತೊಂದರೆ ಉಂಟಾಗಿದೆ. ಸಾಮಾನ್ಯ ಜನರ ಅಹವಾಲುಗಳು ಸಂಬಂಧಿಸಿದವರ ಕಿವಿ ತಲುಪುತ್ತಿಲ್ಲ. ಸಾರ್ವಜನಿಕರು, ವಿವಿಧ ಸಂಘಟನೆಗಳು ಹಾಗೂ ಕಾರ್ಮಿಕರು ಹಲವಾರು ಮನವಿಗಳನ್ನು ನೀಡಿದ್ದರೂ, ಮುಷ್ಕರಗಳನ್ನು ನಡೆಸಿದರೂ ಸರಕಾರದಿಂದ ಯಾವುದೇ ಸಕಾರಾತ್ಮಕ […]

ಉಡುಪಿ: ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೇಳೆ ಹೃದಯಾಘಾತ; ಜಿಲ್ಲಾಸ್ಪತ್ರೆ ವೈದ್ಯೆ ಸಾವು  

ಉಡುಪಿ: ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ರೋಗಿಗಳಿಗೆ ಸೇವೆ ನೀಡುತ್ತಿರುವಾಗಲೇ ವೈದ್ಯೆ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವೈದ್ಯರನ್ನು ಡಾ. ಶಶಿಕಲಾ ಎಂದು ಗುರುತಿಸಲಾಗಿದೆ. ಹೊರರೋಗಿಗಳ ವಿಭಾಗದಲ್ಲಿ ರೋಗಿಗೆ ಚಿಕಿತ್ಸೆ ನೀಡುತ್ತಿರುವ ಸಂದರ್ಭದಲ್ಲೇ ಕುಸಿದು ಬಿದ್ದ ಡಾ. ಶಶಿಕಲಾ ಅವರನ್ನುಜಿಲ್ಲಾಸ್ಪತ್ರೆ ಸಿಬ್ಬಂದಿಗಳು ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿದರು. ಆದರೆ, ಅಷ್ಟರಲ್ಲಿ ಶಶಿಕಲಾ ಅವರು ಯಾವುದೇ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. 2022ರ ಫೆಬ್ರವರಿಯಲ್ಲಿ ವಯೋ ನಿವೃತ್ತಿ ಹೊಂದಿದ್ದ ಡಾ. ಶಶಿಕಲಾ ಅವರನ್ನು […]

ಕಿಶೋರ ಯಕ್ಷಗಾನ ಸಂಭ್ರಮ- 2023 ಉದ್ಘಾಟನೆ

ಉಡುಪಿ: ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು,ಯಕ್ಷಗಾನ ಕಲಾರಂಗ(ರಿ) ಉಡುಪಿ, ಯಕ್ಷಶಿಕ್ಷಣ ಟ್ರಸ್ಟ್(ರಿ) ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ- 2023 ದ ಕಾರ್ಯಕ್ರಮವನ್ನು ಯಕ್ಷಶಿಕ್ಷಣ ಟ್ರಸ್ಟ್ ನ ಗೌರವಾಧ್ಯಕ್ಷ, ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ದೀಪ ಬೆಳಗಿಸಿ ಉದ್ಘಾಟಿಸಿದರು. ಕರಾವಳಿಯ ಕಲೆಯಾದ ಯಕ್ಷಗಾನದಲ್ಲಿ ಕುಣಿತ, ಹಾಡುಗಾರಿಕೆ,ಸಂಭಾಷಣೆ ಮತ್ತು ತಾಳ ವಾದ್ಯಗಳಿಂದ ಎಲ್ಲ ರೀತಿಯ ದೈಹಿಕ ಹಾಗೂ ಮಾನಸಿಕವಾಗಿ ಮನರಂಜನೆಯೊಂದಿಗೆ ಬೌದ್ಧಿಕ ವಿಕಸನವಾಗಿ ಮಕ್ಕಳಿಗೆ ನೈತಿಕ ಶಿಕ್ಷಣಕ್ಕೆ […]