ಜ್ಞಾನಸುಧಾ: ಪದವಿ ಪೂರ್ವ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಉಡುಪಿ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ವತಿಯಿಂದ ಮಂಡ್ಯದ ವಿಶ್ವಮಾನವ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಸಪ್ರಶ್ನಾ ಸ್ಪರ್ಧೆಯಲ್ಲಿ ಉಡುಪಿ ಜ್ಞಾನಸುಧಾ ಪಿಯು ಕಾಲೇಜಿನ ಆದಿತ್ಯ ಕಾಮತ್ ಹಾಗೂ ಪ್ರಥಮ್ ಶೆಟ್ಟಿ ಪ್ರಥಮ ಸ್ಥಾನವನ್ನು, ಇಂಗ್ಲಿಷ್ ಆಶುಭಾಷಣ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ತನ್ವಿ ಶೆಟ್ಟಿ ದ್ವಿತೀಯ ಸ್ಥಾನವನ್ನು ಮತ್ತು ಕನ್ನಡ ಚರ್ಚಾ ಸ್ಪರ್ಧೆಯಲ್ಲಿ […]

ಅಂತರ್ ಜಿಲ್ಲಾ ಸಂಗೀತ ಸ್ಪರ್ಧೆಯಲ್ಲಿ ಸಾಧನೆ ಮೆರೆದ ಜನತಾ ಕಾಲೇಜಿನ ಕಮಲ್ ಕಿಶೋರ್

ಕುಂದಾಪುರ: ಕುಂದಾಪುರದ ಭಂಡಾರ್ಕಾರ್ಸ್ ಪ್ರಥಮ ದರ್ಜೆ ಕಾಲೇಜಿನವರು ಆಯೋಜಿಸಿದ ಅಂತರ್ ಜಿಲ್ಲಾ ಸಂಗೀತ ಸ್ಪರ್ಧೆ (ಪಿಯುಸಿ ಮತ್ತು‌ ಡಿಗ್ರಿ ವಿದ್ಯಾರ್ಥಿಗಳಿಗೆ ಒಂದಾಗಿ) ಕನ್ನಡ ಚಲನಚಿತ್ರ ಗಾಯನ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿ ಕಮಲ್ ಕಿಶೋರ್ ತೃತೀಯ ಸ್ಥಾನವನ್ನು ಪಡೆದಿರುತ್ತಾನೆ. ಸಾಧಕ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

ಅಪ್ರೆಂಟಿಸ್‌ಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನ

ಉಡುಪಿ: ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್, ಟೆಕ್ನಿಕಲ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್, ಬೆಂಗಳೂರು ತರಬೇತಿ ಸಂಸ್ಥೆಯಲ್ಲಿ ಅಪ್ರೆಂಟಿಸ್‌ಶಿಪ್ ಕಾಯ್ದೆ ಅಡಿಯಲ್ಲಿ ಸಿ.ಎನ್.ಸಿ ಪ್ರೋಗ್ರಾಮರ್ ಕಮ್ ಅಪರೇಟರ್, ಎಲೆಕ್ಟ್ರಿಷಿಯನ್, ವೆಲ್ಡರ್, ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ಟ್ರೇಡ್‌ನಲ್ಲಿ ಅಪ್ರೆಂಟಿಸ್‌ಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು ಶೇ.60 ಮತ್ತು ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಡಿ ಅಭ್ಯರ್ಥಿಗಳು ಶೇ.50 ಅಂಕಗಳೊಂದಿಗೆ ಉತ್ತೀರ್ಣರಾಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಅರ್ಜಿ ನಮೂನೆಯನ್ನು ಪಡೆದು, ವಿವರಗಳನ್ನು ಭರ್ತಿಮಾಡಿ ಅರ್ಜಿಯೊಂದಿಗೆಎಸ್.ಎಸ್.ಎಲ್.ಸಿ ಪ್ರಮಾಣಪತ್ರ, […]

ಭಾವಗೀತೆ ಸ್ಪರ್ಧೆ: ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ಮಂಡ್ಯ ಜಿಲ್ಲೆಯಲ್ಲಿ ಆಯೋಜಿಸಿದ್ದ ಮೈಸೂರು ವಿಭಾಗ ಮಟ್ಟದ ಭಾವಗೀತೆ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಧಾರಿಣಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ಬಹುಕೋಟಿ ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಜಾಮೀನಿನ ಮೇಲೆ ಬಿಡುಗಡೆ

ಬೆಂಗಳೂರು: ಉದ್ಯಮಿ ಒಬ್ಬರಿಗೆ ಬೈಂದೂರು ವಿಧಾನಸಭೆಯ ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ್ದ ಆರೋಪದ ಮೇಲೆ ಜೈಲು ಸೇರಿದ್ದ ಚೈತ್ರಾ ಕುಂದಾಪುರ ಜಾಮೀನಿನ ಮೇಲೆ ಪರಪ್ಪನ ಅಗ್ರಹಾರದಿಂದ ಬುಧವಾರ ರಾತ್ರಿ ಬಿಡುಗಡೆಯಾಗಿದ್ದಾರೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಹಾಗೂ ಆರೋಪಿ ಶ್ರೀಕಾಂತ್​ಗೆ ಎರಡು ದಿನಗಳ ಹಿಂದೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಚೈತ್ರಾ ಪರ ವಕೀಲರು ಜೈಲಿನ ಅಧಿಕಾರಿಗಳಿಗೆ ನ್ಯಾಯಾಲಯದ ಆದೇಶ ನೀಡಿ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಅಧಿಕಾರಿಗಳು ಆರೋಪಿಗಳನ್ನು […]