ಹಿರಿಯಡ್ಕ: ಗ್ರೀನ್ ಪಾರ್ಕ್ ಸೆಂಟ್ರಲ್ ಶಾಲೆಯ ವಾರ್ಷಿಕೋತ್ಸವ ಸಮಾರಂಭ

ಹಿರಿಯಡ್ಕ: ಗ್ರೀನ್ ಪಾರ್ಕ್ ಸೆಂಟ್ರಲ್ ಶಾಲೆಯ ವಾರ್ಷಿಕೋತ್ಸವನ್ನು (ಸೀನಿಯರ್ ವಿಭಾಗ) ಬ್ರಹ್ಮಾವರದ ನಿರ್ಮಲ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ರೆ. ಫಾ. ಲೆನ್ಸನ್ ಲಾರೆನ್ಸ್ ಲೋಬೊ ಉದ್ಘಾಟಿಸಿದರು. ಬಳಿಕ ಮಾತನಾಡಿ, ಗ್ರೀನ್ ಪಾರ್ಕ್ ಶಾಲೆಯು ಹಳ್ಳಿ ಪ್ರದೇಶದಲ್ಲಿದ್ದು ವಿದ್ಯಾಭ್ಯಾಸ ನಡೆಸಲು ಅತ್ಯಂತ ಪ್ರಶಸ್ತವಾಗಿದೆ. ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಲು ಶಾಲಾ ವಾರ್ಷಿಕೋತ್ಸವವು ಒಂದು ಉತ್ತಮ ವೇದಿಕೆಯಾಗಿರತ್ತದೆ. ಮಕ್ಕಳನ್ನು ಪ್ರೀತಿಯಿಂದ ನೋಡಿಕೊಂಡು ಮೌಲ್ಯಯುತವಾದ ವಿದ್ಯಾಭ್ಯಾಸವನ್ನು ಕೊಟ್ಟು ಪ್ರಜ್ಞಾವಂತರನ್ನಾಗಿ ರೂಪಿಸಬೇಕು ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ […]
ಡಿ. 14 ರಂದು ಜಿಲ್ಲಾ ಹಾಗೂ ರಾಜ್ಯ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಅಂತರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಅಂಗವಾಗಿ ರಾಜ್ಯ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆಯ ಪೂರ್ವಭಾವಿಯಾಗಿ ಜಿಲ್ಲಾ ಮಟ್ಟದಲ್ಲಿ ಸಿರಿಧಾನ್ಯ ಪಾಕ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು ತಮ್ಮ ಭಾವ ಚಿತ್ರದೊಂದಿಗೆ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯ, ಬೇಕಾಗುವ ಸಾಮಗ್ರಿ, ತಯಾರಿಸಲು ಬೇಕಾಗುವ ಸಮಯ ಹಾಗೂ ತಯಾರಿಸುವ ವಿಧಾನದ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು ಡಿಸೆಂಬರ್ 10 ರ ಒಳಗಾಗಿ ಇ-ಮೇಲ್ [email protected] ಅಥವಾ ಖುದ್ದಾಗಿ/ಪೋಸ್ಟ್ […]
ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಶಿಕ್ಷಾರ್ಹ ಅಪರಾಧ: ಡಾ. ಪ್ರತಾಪ್ ಕುಮಾರ್

ಉಡುಪಿ: ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಮಾಡುವುದು ಹಾಗೂ ಹೆಣ್ಣು ಭ್ರೂಣ ಹತ್ಯೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಅಪರಾಧ ಎಸಗಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿಯ ಅಧ್ಯಕ್ಷ ಡಾ. ಪ್ರತಾಪ್ ಕುಮಾರ್ ಹೇಳಿದರು. ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಯವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ […]
ತ್ರಿಶಾ ವಿದ್ಯಾ ಕಾಲೇಜು ‘ತ್ರಿತತ್ವ’: ಅಂತರ್ ಕಾಲೇಜು ಮಟ್ಟದ ಫೆಸ್ಟ್

ಉಡುಪಿ: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜು ಹಾಗೂ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ‘ತ್ರಿತತ್ವ – 2023’ ಕಾಮರ್ಸ್ ಫೆಸ್ಟ್ ಡಿಸೆಂಬರ್ 2 ಶನಿವಾರದಂದು ಕಾಲೇಜಿನಲ್ಲಿ ನಡೆಯಿತು. ಜ್ಞಾನ, ಕೌಶಲ್ಯ ಮತ್ತು ಧೈರ್ಯಎನ್ನುವ ಮೂರೂ ತತ್ವದ ಅಡಿಯಲ್ಲಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಡೆಂಟಾ ಕೇರ್ ಉಡುಪಿ ಇದರ ದಂತ ವೈದ್ಯ ಡಾ. ವಿಜಯೇಂದ್ರ ವಸಂತ್ ಮಾತನಾಡಿ, ಜಾಗತೀಕರಣದ ಮೂಲಕ ಕೇವಲ ಪ್ರಪಂಚದ ವಿವಿಧ ವಿಷಯವನ್ನು ಮೊಬೈಲ್ ನಲ್ಲಿಪಡೆದುಕೊಳ್ಳುವುದಲ್ಲ. ಅದರಲ್ಲಿರುವ ಒಳ್ಳೆಯ ಅಂಶಗಳನ್ನು […]
ಕುಂತಳನಗರ ಶಾಲೆಯ ಜೋಸ್ಲಿನ್ ಲಿಝಿ ಡಿ’ಸೋಜ ಇವರಿಗೆ ಶೆಫಿನ್ಸ್ ಇನ್ನೋವೇಟಿವ್ ಟೀಚಿಂಗ್ ಪ್ರಶಸ್ತಿ

ಉಡುಪಿ: ಉಡುಪಿಯ ಶೆಫಿನ್ಸ್ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸ್ಪೋಕನ್ ಇಂಗ್ಲೀಷ್ ಕಲಿಸುವಮೂಲಕ ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನದ ಅಂಗವಾಗಿ ಅತಿಥಿ ಹಾಗೂ ಗೌರವ ಶಿಕ್ಷಕಿಯರಿಗೆ ಏರ್ಪಡಿಸಿದ್ದ ಉಚಿತ ಸ್ಪೋಕನ್ ಇಂಗ್ಲೀಷ್ ತರಬೇತಿ ಕಾರ್ಯಕ್ರಮದಲ್ಲಿ ಶೆಫಿನ್ಸ್ ಇನ್ನೋವೇಟಿವ್ ಟೀಚಿಂಗ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕುಂತಳನಗರ ಭಾರತೀ ಹಿರಿಯ ಪ್ರಾಥಮಿಕ ಶಾಲೆಯ ಗೌರವ ಶಿಕ್ಷಕಿ ಶ್ರೀಮತಿ ಜೋಸ್ಲಿನ್ ಲಿಝಿ ಡಿ’ಸೋಜ ಇವರು ಈ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸುತ್ತಿರುವ ಶಿಕ್ಷಕಿಯರು ತಾವು ಶಾಲೆಗಳಲ್ಲಿ ಕಲಿಸುತ್ತಿರುವ […]