ತ್ರಿಶಾ ವಿದ್ಯಾ ಕಾಲೇಜು ‘ತ್ರಿತತ್ವ’: ಅಂತರ್ ಕಾಲೇಜು ಮಟ್ಟದ ಫೆಸ್ಟ್

ಉಡುಪಿ: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜು ಹಾಗೂ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ‘ತ್ರಿತತ್ವ – 2023’ ಕಾಮರ್ಸ್ ಫೆಸ್ಟ್ ಡಿಸೆಂಬರ್ 2 ಶನಿವಾರದಂದು ಕಾಲೇಜಿನಲ್ಲಿ ನಡೆಯಿತು. ಜ್ಞಾನ, ಕೌಶಲ್ಯ ಮತ್ತು ಧೈರ್ಯಎನ್ನುವ ಮೂರೂ ತತ್ವದ ಅಡಿಯಲ್ಲಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಡೆಂಟಾ ಕೇರ್ ಉಡುಪಿ ಇದರ ದಂತ ವೈದ್ಯ ಡಾ. ವಿಜಯೇಂದ್ರ ವಸಂತ್ ಮಾತನಾಡಿ, ಜಾಗತೀಕರಣದ ಮೂಲಕ ಕೇವಲ ಪ್ರಪಂಚದ ವಿವಿಧ ವಿಷಯವನ್ನು ಮೊಬೈಲ್ ನಲ್ಲಿಪಡೆದುಕೊಳ್ಳುವುದಲ್ಲ. ಅದರಲ್ಲಿರುವ ಒಳ್ಳೆಯ ಅಂಶಗಳನ್ನು […]
ಕುಂತಳನಗರ ಶಾಲೆಯ ಜೋಸ್ಲಿನ್ ಲಿಝಿ ಡಿ’ಸೋಜ ಇವರಿಗೆ ಶೆಫಿನ್ಸ್ ಇನ್ನೋವೇಟಿವ್ ಟೀಚಿಂಗ್ ಪ್ರಶಸ್ತಿ

ಉಡುಪಿ: ಉಡುಪಿಯ ಶೆಫಿನ್ಸ್ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸ್ಪೋಕನ್ ಇಂಗ್ಲೀಷ್ ಕಲಿಸುವಮೂಲಕ ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನದ ಅಂಗವಾಗಿ ಅತಿಥಿ ಹಾಗೂ ಗೌರವ ಶಿಕ್ಷಕಿಯರಿಗೆ ಏರ್ಪಡಿಸಿದ್ದ ಉಚಿತ ಸ್ಪೋಕನ್ ಇಂಗ್ಲೀಷ್ ತರಬೇತಿ ಕಾರ್ಯಕ್ರಮದಲ್ಲಿ ಶೆಫಿನ್ಸ್ ಇನ್ನೋವೇಟಿವ್ ಟೀಚಿಂಗ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕುಂತಳನಗರ ಭಾರತೀ ಹಿರಿಯ ಪ್ರಾಥಮಿಕ ಶಾಲೆಯ ಗೌರವ ಶಿಕ್ಷಕಿ ಶ್ರೀಮತಿ ಜೋಸ್ಲಿನ್ ಲಿಝಿ ಡಿ’ಸೋಜ ಇವರು ಈ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸುತ್ತಿರುವ ಶಿಕ್ಷಕಿಯರು ತಾವು ಶಾಲೆಗಳಲ್ಲಿ ಕಲಿಸುತ್ತಿರುವ […]
ಅಂಬಾಗಿಲು ಎಲ್ ವಿ ಟಿ ದೇವಾಲಯದಲ್ಲಿ ವಾರ್ಷಿಕ ದೀಪೋತ್ಸವ

ಉಡುಪಿ: ಅಂಬಾಗಿಲು ಎಲ್ ವಿ ಟಿ ದೇವಾಲಯದಲ್ಲಿ ವಾರ್ಷಿಕ ದೀಪೋತ್ಸವವು ಕಾರ್ತಿಕ ಬಹುಳ ಸಪ್ತಮಿ ದಿನ ಸೋಮವಾರದಂದು ಪಲ್ಲಕ್ಕಿ ಉತ್ಸವ, ಪುಷ್ಪ ರಥೋತ್ಸವ, ಕಟ್ಟೆ ಪೂಜೆ, ಪ್ರಸಾದ ವಿತರಣೆ, ಮಹಾ ಅನ್ನ ಸಂತರ್ಪಣೆ ಹಾಗೂ ಮಹಾಪೂಜೆ ದೀಪಾಲಂಕಾರ ಸೇವೆಯೊಂದಿಗೆ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ, ಭಜನ ಮಂಡಳಿ, ಯುವಕ ಮಂಡಳಿ ಮತ್ತು ಸಮಾಜದ ಸಮಸ್ತರು ದೇವರ ದರ್ಶನ ಪಡೆದರು.
ಮೂಡನಿಡಂಬೂರು ಹಾಗೂ ನಿಡಂಬೂರು ಯುವಕ ಮಂಡಲ ವತಿಯಿಂದ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ಸನ್ಮಾನ ಕಾರ್ಯಕ್ರಮ

ಉಡುಪಿ: ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಗೌರವ ಡಾಕ್ಡರೇಟ್ ಪುರಸ್ಕೃತರಾದ ಉಡುಪಿ ತಲ್ಲೂರು ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕ ಹಾಗೂ ಕರ್ನಾಟಕ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ಕಡೆಕಾರಿನ ಮೂಡನಿಡಂಬೂರು ಯುವಕ ಮಂಡಲ ರಿ. ಹಾಗೂ ನಿಡಂಬೂರು ಯುವಕ ಮಂಡಲ ಟ್ರಸ್ಟ್ ಸಹಭಾಗಿತ್ವದಲ್ಲಿ ಅದ್ದೂರಿ ಸನ್ಮಾನ ಕಾರ್ಯಕ್ರಮ ಭಾನುವಾರ ಯುವಕ ಮಂಡಲದ ಕಚೇರಿ ಸಭಾಂಗಣದಲ್ಲಿ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ತಲ್ಲೂರು ಶಿವರಾಮ ಶೆಟ್ಟಿ, ನಿಸ್ವಾರ್ಥ ಭಾವನೆಯಿಂದ ಮಾಡಿದ ಸೇವೆಯನ್ನು ಸಮಾಜ ಗುರುತಿಸಿರುವುದು ಸಂತೋಷ […]
ಡಿ. 8 ರಿಂದ 12 ರವರೆಗೆ ಧರ್ಮಸ್ಥಳ ಲಕ್ಷದೀಪೋತ್ಸವ ಹಾಗೂ ಸರ್ವ ಧರ್ಮ ಸಮ್ಮೇಳನ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸ ಪ್ರಯುಕ್ತ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಡಿ. 8 ರಿಂದ 12 ರವರೆಗೆ ನಡೆಯಲಿವೆ. ಡಿ.8ರಂದು ಬೆಳಗ್ಗೆ 10.30ಕ್ಕೆ ಹೈಸ್ಕೂಲ್ ವಠಾರದಲ್ಲಿ ರಾಜ್ಯಮಟ್ಟದ ವಸ್ತು ಪ್ರದರ್ಶನವನ್ನು ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಗಿರೀಶ್ ನಂದನ್ ಉದ್ಘಾಟಿಸಲಿದ್ದಾರೆ. ವಸ್ತು ಪ್ರದರ್ಶನ ಮಂಟಪದಲ್ಲಿ ಪ್ರತಿದಿನ ಸಂಜೆ 6 ರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ. ಡಿ.10 ರಂದು ರಾತ್ರಿ 7 ರಿಂದ 10ರವರೆಗೆ ಅಮೃತವರ್ಷಿಣಿ ಸಭಾಭವನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಬಳಗದವರಿಂದ […]