ಮಂಗಳೂರು: ಎರಡು ತಿಂಗಳಲ್ಲಿ ಬರೋಬ್ಬರಿ 43,200 ಮೆಟ್ರಿಕ್ ಟನ್ ಮೀನು ಇಳುವರಿ!

ಮಂಗಳೂರು: ಪ್ರಸ್ತುತ ಮೀನುಗಾರಿಕಾ ಋತು ಆರಂಭವಾಗಿ ಎರಡು ತಿಂಗಳು ಕಳೆದಿದ್ದು, ಪ್ರತಿಕೂಲ ಹವಾಮಾನದ ಆತಂಕದ ನಡುವೆಯೂ ಮೀನುಗಾರಿಕೆಯಲ್ಲಿ ತೃಪ್ತಿದಾಯಕ ಇಳುವರಿ ದೊರೆತಿದೆ ಎಂದು ಮೀನುಗಾರರು ತಿಳಿಸಿದ್ದಾರೆ. ಸಾಮಾನ್ಯವಾಗಿ ಎರಡು ತಿಂಗಳ ಮೀನುಗಾರಿಕಾ ನಿಷೇಧ ಮುಗಿದ ಬಳಿಕ ಹೆಚ್ಚಿನ ನಿರೀಕ್ಷೆಯೊಂದಿಗೆ ಕಡಲಿಗೆ ಇಳಿಯುವ ಮೀನುಗಾರರಿಗೆ ಈ ಬಾರಿ ಉತ್ತಮ ಇಳುವರಿ ದೊರೆತಿದೆ. ನಿಷೇಧಾವಧಿ ಮುಗಿದ ನಂತರ ಬಹುತೇಕ ಎಲ್ಲಾ ಬೋಟ್‌ಗಳು ತಮ್ಮ ಮೊದಲ ಮೀನುಗಾರಿಕಾ ಪ್ರವಾಸ ಕೈಗೊಂಡಿದ್ದು, ಆಳ ಸಮುದ್ರಕ್ಕೆ ತೆರಳಿದ ಬೋಟ್‌ಗಳಿಗೆ ಉತ್ತಮ ಪ್ರಮಾಣದಲ್ಲಿ ಮೀನು ಲಭ್ಯವಾಗಿದೆ. […]

ಮೂಡ್ಲಕಟ್ಟೆ ಐ ಎಂ ಜೆ ವಿದ್ಯಾಸಂಸ್ಥೆಗಳ ಆರೋಗ್ಯ ವಿಜ್ಞಾನ ವಿಭಾಗದ ಕೋರ್ಸುಗಳ ಓರಿಯೆಂಟೇಷನ್ ಕಾರ್ಯಕ್ರಮ

ಕುಂದಾಪುರ: ಮೂಡ್ಲಕಟ್ಟೆ ಐ ಎಂ ಜೆ ವಿದ್ಯಾಸಂಸ್ಥೆಗಳ ಆರೋಗ್ಯ ವಿಜ್ಞಾನ ವಿಭಾಗದ ಕೋರ್ಸುಗಳ ಓರಿಯೆಂಟೇಷನ್ ಕಾರ್ಯಕ್ರಮವನ್ನು 7ನೇ ಅಕ್ಟೋಬರ್ 2026 ರಂದು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ B.Sc. ನರ್ಸಿಂಗ್‌ನ 7ನೇ ಬ್ಯಾಚ್, ಅಲೈಡ್ ಹೆಲ್ತ್ ಸೈನ್ಸಸ್‌ನ 3ನೇ ಬ್ಯಾಚ್ ಹಾಗೂ ಫಿಸಿಯೋಥೆರಪಿಯ 2ನೇ ಬ್ಯಾಚ್‌ಗಳ ಉದ್ಘಾಟನೆಯನ್ನು ನೆರವೇರಿಸಲಾಯಿತು.ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್‌ನ ಪ್ರಾಂಶುಪಾಲರಾದ ಪ್ರೊ. ಜೆನ್ನಿಫರ್ ಫ್ರೀಡಾ ಮೆನೆಜಸ್ ಅವರು ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರು, ಬೋಧಕ ವೃಂದ ಹಾಗೂ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಪ್ರೊ. […]

ಉಡುಪಿ: ಯುವತಿ ನಾಪತ್ತೆ

 ಉಡುಪಿ: ಉಡುಪಿಯ ಬೀಡಿನಗುಡ್ಡೆ ಹುಲ್ಲಿಕೇರಿ ಪರಿಸರದಲ್ಲಿ ವಾಸವಾಗಿದ್ದ ಐಶ್ವರ್ಯ (18) ಎನ್ನುವ ಯುವತಿಯು ಮನೆಗೆಲಸ ಮಾಡಿಕೊಂಡಿದ್ದು, ಸೆಪ್ಟೆಂಬರ್ 28 ರಂದು ಮನೆಯಿಂದ ಹೊರಗೆ ಹೋದವರು ಈವೆರಗೂ ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ.  4 ಅಡಿ 10 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2520444, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 9480805408 ಹಾಗೂ […]

ಗ್ಯಾರಂಟಿಗಳಿಂದ ಜನರಿಗೆ ಆರ್ಥಿಕ ಭದ್ರತೆ: ಉದಯಕುಮಾರ್ ಶೆಟ್ಟಿ

ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮಾಡುತ್ತಿರುವ ಆರೋಪಗಳಿಗೆ ಪ್ರತ್ಯುತ್ತರ ನೀಡುವ ನಿಟ್ಟಿನಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗುರುವಾರ ತಾಲೂಕು ಕಚೇರಿ ಮುಂಭಾಗದಲ್ಲಿ ‘ಸತ್ಯ ಮೇವ ಜಯತೆ’ ಬೃಹತ್ ಪ್ರತಿಭಟನಾ ಸಭೆ ನಡೆಯಿತು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕಾರ್ಕಳ ಶಾಸಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಭದ್ ರಾವ್ ನೇತೃತ್ವದ ತಂಡ ಹಾಡಿನ ಮೂಲಕ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿತು. ಕಾಂಗ್ರೆಸ್ ಮುಖಂಡ […]

ಉಡುಪಿ ಉಚ್ಚಿಲ ದಸರಾ–2026: ಅ.11ರಿಂದ 21ರವರೆಗೆ ವೈಭವದ ಸಂಭ್ರಮ

ಉಡುಪಿ: ಶ್ರೀ ಕ್ಷೇತ್ರ ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಆಶ್ರಯದಲ್ಲಿ ದ.ಕ. ಮೊಗವೀರ ಮಹಾಜನ ಸಂಘದ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಭಕ್ತಾಭಿಮಾನಿಗಳ ಸಹಕಾರದೊಂದಿಗೆ ಐದನೇ ವರ್ಷದ ‘ಉಡುಪಿ ಉಚ್ಚಿಲ ದಸರಾ–2026’ ಅ.11ರಿಂದ 21ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ವೈಭವದಿಂದ ನಡೆಯಲಿದೆ.ಈ ಕುರಿತು ಗುರುವಾರ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ.ಜಿ. ಶಂಕರ್ ಮಾಹಿತಿ ನೀಡಿದರು. ಶ್ರೀಮತಿ ಶಾಲಿನಿ ಡಾ.ಜಿ. ಶಂಕರ್ […]