ಕುಂದಾಪುರ: ಮೂಡ್ಲಕಟ್ಟೆ ಪದವಿ ಕಾಲೇಜಿನಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ಫೆಸ್ಟ್ ನಾವೊಂನ್ಮೇಶ್ ಉದ್ಘಾಟನೆ
ಕುಂದಾಪುರ: ಆಧುನಿಕ ಜಗತ್ತಿನಲ್ಲಿ ಯಶಸ್ಸಿನ ಮೆಟ್ಟಿಲೇರಲು ಶೈಕ್ಷಣಿಕ ಪ್ರಗತಿಯ ಜೊತೆಗೆ ನಾಲ್ಕು ಬಹುಮುಖ್ಯ ವಿಷಯಗಳಾದ ನಾಯಕತ್ವ ಗುಣ, ಸೃಜನಶೀಲತೆ ಮತ್ತು ನಾವಿನ್ಯತೆ, ರಿಸ್ಕ್ ನಿರ್ವಹಣೆ, ಸೋಲನ್ನು ಸ್ವೀಕರಿಸುವಿಕೆ ಇವನ್ನು ನಿಭಾಯಿಸುವ ಕಲೆ ವಿದ್ಯಾರ್ಥಿಗಳು ಕಲಿಯಬೇಕಾಗುತ್ತದೆ. ನಾವೊಂನ್ಮೇಶ್ ಅಂತಹ ಬಹುದೊಡ್ಡ ಕಾರ್ಯಕ್ರಮ ಆಯೋಜಿಸುವಿಕೆ ಮತ್ತು ನಿರ್ವಹಿಸುವುವಿಕೆ ನಿಮಗೆ ಅಂತಹ ಗುಣಗಳನ್ನು ಪಡೆಯಲು ಸಹಕರಿಸುತ್ತದೆ ಎಂದು ನಾವೊಂನ್ಮೇಶ್ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ನೀವಿಯಸ್ ಸೊಲ್ಯೂಷನ್ ಉಡುಪಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಸುಯೋಗ್ ಶೆಟ್ಟಿ ಹೇಳಿದರು. ಇನ್ನೊರ್ವ […]
ಉಡುಪಿ: ಸ್ಮೀತಾ ವಿ. ಕಾಮತ್ ಅವರಿಗೆ ಪಿ.ಎಚ್.ಡಿ. ಪದವಿ
ಉಡುಪಿ: ಉಡುಪಿ ಶ್ವೇತಾ ವಿ ಕಾಮತ್ ಮತ್ತು ವರದರಾಯ ಕಾಮತ್ ಅವರ ಪುತ್ರಿ ಕುಮಾರಿ ಸ್ಮೀತಾ ವಿ ಕಾಮತ್ ಅವರಿಗೆ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ರಸಾಯಿನಿಕ ಶಾಸ್ತ್ರದ ಸಂಶೋಧನೆಯಲ್ಲಿ ಪಿ.ಎಚ್.ಡಿ. ಪದವಿ ನೀಡಲಾಗಿದೆ. ಸ್ಮೀತಾ ಮಂಗಳೂರಿನ ಕೆನರಾ ಕಾಲೇಜ್ ನಲ್ಲಿ ಪಿಯುಸಿ ವರೆಗೆ, ನಂತರ ಸಂತ ಅಲೋಸಿಯಸ್ ಕಾಲೇಜ್ ನಲ್ಲಿ ಪದವಿ ಮತ್ತು ಸ್ನಾತಕೋತ್ತರ ಶಿಕ್ಷಣ ಪಡೆದು ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದಲ್ಲಿ ಪ್ರೊ| ಎಸ್ ಕೆ ನಟರಾಜ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ್ದ ಫಂಕ್ಷನಲ್ ನ್ಯಾನೋಮಟೀರಿಯಲ್ ಆಧಾರಿತ ಮೆಂಬ್ರೇನ್‌ಗಳು […]
ಉಡುಪಿ:ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಉದ್ಘಾಟನೆ
ಉಡುಪಿ: ನಗರ ಕೇಂದ್ರ ಗ್ರಂಥಾಲಯದ ವತಿಯಿಂದ ಶುಕ್ರವಾರ ಅಜ್ಜರಕಾಡುವಿನ ವಿದ್ಯಾವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮವನ್ನು ಶಾಸಕ ಯಶ್‌ಪಾಲ್ ಎ.ಸುವರ್ಣ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯುವ ಪೀಳಿಗೆ ತಮ್ಮ ಬಹುಪಾಲು ಸಮಯವನ್ನು ಪುಸ್ತಕಗಳನ್ನು ಓದುವುದರ ಮೂಲಕಜ್ಞಾನಾರ್ಜನೆಯನ್ನು ಹೆಚ್ಚಿಸಿಕೊಳ್ಳಬೇಕು. ಅದಕ್ಕಾಗಿ ಸ್ಥಳೀಯ ಗ್ರಂಥಾಲಯಗಳಿಗೆ ಹೋಗಿ ಅಲ್ಲಿಯ ಉತ್ತಮ ಗ್ರಂಥಗಳ ಮಾಹಿತಿಯನ್ನು ಪಡೆದುಕೊಂಡು ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದ ಅವರು ಸಾಮಾಜಿಕ ಜಾಲತಾಣಗಳ ಬಳಕೆಯನ್ನು ಕಡಿಮೆ […]
ಉಡುಪಿ:ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರವಹಿಸಿ – ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ಟಿ ರೇಜು
ಉಡುಪಿ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಸಂದರ್ಭದಲ್ಲಿ ಹೊಸದಾಗಿ ಹೆಸರುಸೇರ್ಪಡೆ, ತಿದ್ದುಪಡಿ ಹಾಗೂ ಹೆಸರು ತೆಗೆದು ಹಾಕುವ ಕಾರ್ಯಗಳನ್ನು ಯಾವುದೇ ಲೋಪದೋಷ ಗಳಿಲ್ಲದಂತೆ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ಟಿ ರೇಜು ಹೇಳಿದರು. ಅವರು ಶನಿವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಮತದಾರರ ಪಟ್ಟಿಯ ವೀಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಈಗಾಗಲೇ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವು ಚುನಾವಣೆ ಆಯೋಗದ […]
ಉಡುಪಿ:ಡಾ. ಕೆ. ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ-ಜನರಲ್ಲಿ ಆತಂಕ ಬೇಡ : ಸಂಸದ ಕೋಟ ಶ್ರೀನಿವಾಸ ಪೂಜಾರಿ
ಉಡುಪಿ: ಡಾ. ಕೆ. ಕಸ್ತೂರಿ ರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯ ತಂಡದ ಆಧಾರದ ಮೇಲೆ ಪಶ್ಚಿಮಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಿರುವ ಕರಡು ಅಧಿಸೂಚನೆ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಸದ್ಯದ ಪರಿಸ್ಥಿತಿಯಲ್ಲಿ ಜನರಲ್ಲಿ ಆತಂಕ ಬೇಡ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಶನಿವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಪರಸರ ಸೂಕ್ಷ್ಮ ಪ್ರದೇಶ […]