ಅ.11ರಂದು “ಸಂಗೊಳ್ಳಿ ರಾಯಣ್ಣ ಪುರಸ್ಕಾರ ಸಮಾರಂಭ”ರಂಗಕರ್ಮಿ ರವಿರಾಜ್ ಎಚ್.ಪಿ. ಅವರಿಗೆ ಸಂಗೊಳ್ಳಿ ರಾಯಣ್ಣ ಪುರಸ್ಕಾರ ಪ್ರದಾನ

ಉಡುಪಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದಕ್ಷಿಣ ಕನ್ನಡ–ಉಡುಪಿ ಜಿಲ್ಲೆ ಆಶ್ರಯದಲ್ಲಿ ಸಂಗೊಳ್ಳಿ ರಾಯಣ್ಣ ಪುರಸ್ಕಾರ ಸಮಾರಂಭ ಅ. 11ರಂದು ಸಂಜೆ 4.30ಕ್ಕೆ ಕುಂಜಿಬೆಟ್ಟಿನ ಯಕ್ಷಗಾನ ಕಲಾರಂಗದ ಐವೈಸಿ ಹವಾನಿಯಂತ್ರಿತ ಸಭಾಂಗಣದಲ್ಲಿ ನಡೆಯಲಿದೆ. ಈ ಬಾರಿ ಖ್ಯಾತ ರಂಗಕರ್ಮಿ ರವಿರಾಜ್ ಎಚ್.ಪಿ. ಅವರಿಗೆ ಸಂಗೊಳ್ಳಿ ರಾಯಣ್ಣ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಬಳಗದ ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಂಜೆ 4.30ರಿಂದ 5ರವರೆಗೆ ಖ್ಯಾತ ಗಾಯಕರಾದ ರಾಜೇಶ್ ಶಾನ್‌ಭೋಗ್ ಹಾಗೂ ಬಾರಕೂರು (ಪಿ. […]

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ

ಉಡುಪಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಪ್ರತಿ ಎರಡು ವರ್ಷಗಳಿಗೊಮ್ಮೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸಾಧನೆಗೈದ ಗಣ್ಯರನ್ನು ಗುರುತಿಸಿ ಕೊಡಲಾಗುವ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ವಿವಿಧ ಸಮುದಾಯಗಳ ಸ್ನೇಹ ಸಮಾವೇಶವನ್ನು ಅ.೩೧ರಂದು ಸಂಜೆ ೬.೩೦ಕ್ಕೆ ಉಡುಪಿಯ ಬಾಸೆಲ್ ಮಿಷನ್ ಮೆಮೋರಿಯಲ್ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದೆ. ಒಕ್ಕೂಟದ ನೂತನ ಕಚೇರಿಯಲ್ಲಿ ಬುಧವಾರ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ಮುಹಮ್ಮದ್ ಮೌಲಾ ಹಾಗೂ ನಿಕಟಪೂರ್ವ ಅಧ್ಯಕ್ಷ ಯಾಸೀನ್ ಮಲ್ಪೆ ಈ ಕುರಿತು ಮಾಹಿತಿ ನೀಡಿದರು. ಸಮಾಜಕ್ಕೆ ವಿಶಿಷ್ಟ […]

ಉಡುಪಿ ಶ್ರೀಕೃಷ್ಣ ಮಠಕ್ಕೆ ನಟ ಪ್ರೇಮ್ ದಂಪತಿ ಭೇಟಿ

ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು ದಂಪತಿ ಸಮೇತ ಉಡುಪಿ ಶ್ರೀಕೃಷ್ಣ ಮಠಕ್ಕೆ ಬುಧವಾರ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ಈ ಸಂದರ್ಭದಲ್ಲಿ ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.

ಅ.9ರಂದು ಕುಂತಳ ನಗರದಲ್ಲಿ 5ನೇ ಬೃಹತ್ ಉದ್ಯೋಗ ಮೇಳ- ಸ್ಟಡಿ ಅಬ್ರಾಡ್ ಎಕ್ಸ್‌ಪೋ

ಉಡುಪಿ: ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್‌ನ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ ವತಿಯಿಂದ ನಿಟ್ಟೆಯ ಎನ್‌ಎಂಎಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಹಯೋಗದಲ್ಲಿ ಹಾಗೂ ಎಂ.ಆರ್.ಜಿ. ಗ್ರೂಪ್ ಪ್ರಾಯೋಜಕತ್ವದಲ್ಲಿ 5ನೇ ಬೃಹತ್ ಉದ್ಯೋಗ ಮೇಳ ಮತ್ತು ಸ್ಟಡಿ ಅಬ್ರಾಡ್ ಎಕ್ಸ್‌ಪೋ-2026 ಅ.9ರಂದು ಕುಂತಳ ನಗರದ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಶನ್ ಸೆಂಟರ್ ಹಾಗೂ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ ಆವರಣದಲ್ಲಿ ನಡೆಯಲಿದೆ. ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಯುವಜನರಿಗೆ ಉದ್ಯೋಗಾವಕಾಶಗಳನ್ನು ಪರಿಚಯಿಸುವುದು, ಉದ್ಯೋಗದಾತರು ಮತ್ತು ಉದ್ಯೋಗಾಕಾಂಕ್ಷಿಗಳನ್ನು […]

ಪ್ರಧಾನಿ ಮೋದಿ ಸಾರ್ವಜನಿಕ ಸೇವೆಗೆ 25 ವರ್ಷದ ಸಂಭ್ರಮ; ಉಡುಪಿ ಬಿಜೆಪಿ ಕೈಗಾರಿಕಾ ಪ್ರಕೋಷ್ಠದ ವತಿಯಿಂದ ಕೊಳಲಗಿರಿ ‘ಸ್ವರ್ಗ ಆಶ್ರಮ’ದ ಅಸಹಾಯಕ ಬಂಧುಗಳಿಗೆ ಭೋಜನ ವ್ಯವಸ್ಥೆ

ಉಡುಪಿ: ಪ್ರಧಾನಿ ನರೇಂದ್ರ ಮೋದೀಜಿಯವರು ಸಾಂವಿಧಾನಿಕ ಹುದ್ದೆಯಲ್ಲಿ ನಿರಂತರವಾಗಿ 25 ವರ್ಷಗಳ ಕಾಲ ದೇಶಕ್ಕೆ ನೀಡಿರುವ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಪಕ್ಷವು ದೇಶದದ್ಯಾoತ “ಸೇವಾ ಸಂಕಲ್ಪ ಅಭಿಯಾನ ” ಕಾರ್ಯಕ್ರಮ ವನ್ನು ಆಯೋಜನೆ ಮಾಡಲಾಗಿದೆ. ಅದರಂತೆ ಜಿಲ್ಲಾ ಬಿಜೆಪಿ ಕೈಗಾರಿಕಾ ಪ್ರಕೋಷ್ಠದ ವತಿಯಿಂದ ಉಡುಪಿ ಕೊಳಲಗಿರಿ , “ಸ್ವರ್ಗ ಆಶ್ರಮ” ದ ಅಸಹಾಯಕ ಬಂಧುಗಳಿಗೆ ಮೋದೀಜಿ ಯವರ ಹೆಸರಿನಲ್ಲಿ ಮದ್ಯಾಹ್ನದ ಉತ್ತಮ ಭೋಜನ ವ್ಯವಸ್ಥೆಯನ್ನು ಮಾಡಲಾಯಿತು. ಜಿಲ್ಲಾ ಕೈಗಾರಿಕಾ ಪ್ರಕೋಷ್ಟದ ಜಿಲ್ಲಾ ಸಂಚಾಲಕರಾದ ಸದಾನಂದ ಪ್ರಭು ರವರು […]