ಶುಲ್ಕ ಮರುಪಾವತಿ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತ ಸರ್ಕಾರದ ಶಾಸನಬದ್ಧ ಅಂಗಿಕೃತವಾದ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ಹಾಗೂ ತಾಂತ್ರಿಕ & ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಎಸ್.ಎಸ್.ಪಿ ತಂತ್ರಾಂಶ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ […]

ಹಿರಿಯ ನಾಗರಿಕರ ಕಲ್ಯಾಣ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಸರಕಾರ ಹಿರಿಯ ನಾಗರಿಕರ ಸುರಕ್ಷತೆ, ಘನತೆ ಮತ್ತು ಉತ್ಪಾದಕ ಜೀವನ ನಡೆಸಲು ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ಕಾಯಿದೆ ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇದನ್ನು ಸಮರ್ಪಕವಾಗಿ ಅಧಿಕಾರಿಗಳು ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಾಲಕರ ಪೋಷಣೆ, ಸಂರಕ್ಷಣೆ ಮತ್ತು ಹಿರಿಯ ನಾಗರಿಕರ ರಕ್ಷಣಾ ಕಾಯಿದೆ 2007 ರಡಿ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಹಿರಿಯ ನಾಗರಿಕರ ನಿರ್ವಹಣೆ […]

ಜಿಲ್ಲೆಯಲ್ಲಿ ಸಂಭವಿಸುವ ಜನನ – ಮರಣದ ನಿಖರ ಮಾಹಿತಿ ದಾಖಲಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಜಿಲ್ಲೆಯಲ್ಲಿ ಸಂಭವಿಸುವ ಪ್ರತಿಯೊಂದು ಜನನ ಮತ್ತು ಮರಣದ ವಿವರಗಳನ್ನು ಯಾವುದೇ ತಪ್ಪುಗಳಿಗೆ ಆಸ್ಪದ ನೀಡದಂತೆ ನಿಖರವಾಗಿ ಮಾಹಿತಿ ದಾಖಲು ಮಾಡುವಂತೆ ನೋಂದಣಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜನನ ಮರಣ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜನನ ಮತ್ತು ಮರಣ ನೋಂದಣಿಯು ಭವಿಷ್ಯದ ಕೆಲಸ ಕಾರ್ಯಗಳಿಗೆ ಇವುಗಳ ಪ್ರಮಾಣಪತ್ರವು ಅವಶ್ಯವಿದ್ದು, ಇದನ್ನು ಮನಗಂಡು […]

ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಅನರ್ಹಗೊಳಿಸುವ ಹುನ್ನಾರ: ಐವನ್ ಡಿಸೋಜ ಆರೋಪ

ಉಡುಪಿ: ಕೇಂದ್ರದ ಬಿಜೆಪಿ ಸರ್ಕಾರ ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಯನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಂಡು, ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಎಸ್‌ಐಆರ್‌ (ವಿಶೇಷ ತೀವ್ರ ಪರಿಷ್ಕರಣೆ) ಹೆಸರಿನಲ್ಲಿ ನೈಜ ಮತದಾರರ ಮತದಾನದ ಹಕ್ಕು ಕಸಿಯುವ ಕುತಂತ್ರ ನಡೆಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಆರೋಪಿಸಿದರು. ಉಡುಪಿ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಎಲ್‌ಒ ಹಾಗೂ ಅಧಿಕಾರಿಗಳ ಮೇಲೆ ಒತ್ತಡ ಹೇರಿ ನೈಜ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ […]

ಉಡುಪಿ: ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಉಡುಪಿ: ಕೇಂದ್ರ ಸರ್ಕಾರ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಸಿಪಿಎಂ ವತಿಯಿಂದ ಉಡುಪಿಯಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ, “ಚುನಾವಣಾ ಆಯೋಗದ ಮುಖ್ಯ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದ್ದು, ಚುನಾವಣಾ ಆಯೋಗವನ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳಲಾಗುತ್ತಿದೆ” ಎಂದು ಆರೋಪಿಸಿದರು. ಫಾರಂ-7 ಮೂಲಕ ನಡೆಯುತ್ತಿರುವ ಅಕ್ರಮಗಳ ಕುರಿತು ದೂರು ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಪ್ರಜಾಪ್ರಭುತ್ವ ರಕ್ಷಣೆಗಾಗಿ ಹೋರಾಟ […]