ಸಾಯಿ ಈಶ್ವರ್‌ರಿಂದ ಅಯ್ಯಪ್ಪಸ್ವಾಮಿ ವ್ರತಧಾರಿಗಳಿಗೆ ಅನ್ನದಾನ ಸೇವೆ, ವಿಶ್ರಾಂತಿ ವ್ಯವಸ್ಥೆ

ಕಟಪಾಡಿ:ಭಾರತೀಯ ಸಂತ ಸಮಿತಿ ಕರ್ನಾಟಕ ಹಾಗೂ ಶ್ರೀ ಕ್ಷೇತ್ರ ಶಂಕರಪುರ ಉಡುಪಿ ಜಿಲ್ಲೆ ಸಹಭಾಗಿತ್ವದಲ್ಲಿ ಶ್ರೀ ಸಾಯಿ ಈಶ್ವರ್‌ ಗುರೂಜಿಯವರ ಮಾರ್ಗ ದರ್ಶನದಲ್ಲಿ ಜ.1ರಿಂದ ಜ. 14ರ ವರೆಗೆ ಉಡುಪಿ, ಮಂಗಳೂರು ಹೆದ್ದಾರಿಯಾಗಿ ಶಬರಿಮಲೆ ಯಾತ್ರೆ ಮಾಡುವ ಅಯ್ಯಪ್ಪ ಸ್ವಾಮಿ ವ್ರತದಾರಿಗಳಿಗೆ ಅನ್ನದಾನ ಸೇವೆ ಹಾಗೂ ವಿಶ್ರಾಂತಿಯ ವ್ಯವಸ್ಥೆ ಕಾಪು ಪಾಂಗಾಳ ಸೇತುವೆಯ ಬಳಿ ವ್ಯವಸ್ಥೆ ಮಾಡಲಾಗಿದೆ ಎಂದು ಶ್ರೀ ಕ್ಷೇತ್ರದ ಪ್ರಕಟನೆ ತಿಳಿಸಿದೆ.

ಉಡುಪಿ: ಹಿರಿಯ ನ್ಯಾಯವಾದಿ ಅಲೆವೂರು ಮಾಧವ ಆಚಾರ್ಯ ನಿಧನ

ಉಡುಪಿ: ಹಿರಿಯ ನ್ಯಾಯವಾದಿ ಅಲೆವೂರು ಮಾಧವ ಆಚಾರ್ಯ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು.ಉಡುಪಿ ವಕೀಲರ ಸಂಘದ ಹಿರಿಯ ಸದಸ್ಯರಾಗಿದ್ದ ಅವರು, ಉಡುಪಿ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದರು. ಅಗಲಿದ ಹಿರಿಯ ವಕೀಲರಾದ ಮಾಧವ ಆಚಾರ್ಯ ಅವರ ಸಂತಾಪ ಸೂಚಕ ಸಭೆ ಇಂದು (ಜನವರಿ 5ರಂದು) ಬೆಳಿಗ್ಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯದ ಸಭಾಂಗಣದಲ್ಲಿ ನಡೆಯಲಿದೆ ಎಂದು ವಕೀಲರ ಸಂಘದ ಅಧ್ಯಕ್ಷರಾದ ರೋನಾಲ್ಡ್ ಪ್ರವೀಣ್ ತಿಳಿಸಿದ್ದಾರೆ.

ಪರ್ಕಳ: ಮುಂಜಾನೆ ಮಂಜಿನ ಪರಿಣಾಮ ಟಿಟಿ ವಾಹನಕ್ಕೆ ಕಾರು ಡಿಕ್ಕಿ: ಕಾರು ಚಾಲಕನಿಗೆ ಗಾಯ

ಉಡುಪಿ: ಕಾರೊಂದು ಅಯ್ಯಪ್ಪ ಮಾಲೆಧಾರಿಗಳು ಪ್ರಯಾಣಿಸುತ್ತಿದ್ದ ಟಿಟಿ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಪರ್ಕಳದ ಕೆನರಾ ಬ್ಯಾಂಕ್ ಸಮೀಪ ತಿರುವಿನಲ್ಲಿ ಸಂಭವಿಸಿದೆ. ಹಿರಿಯಡಕ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ಪರ್ಕಳ ಕೆನರಾ ಬ್ಯಾಂಕ್ ತಿರುವಿನಲ್ಲಿ‌ ನಿಯಂತ್ರಣ ತಪ್ಪಿ ಟಿಟಿ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಟಿಟಿ ವಾಹನದಲ್ಲಿ ತೆಲಂಗಾಣ ಮೂಲದ ಅಯ್ಯಪ್ಪ ಮಾಲೆಧಾರಿಗಳು ಪ್ರಯಾಣಿಸುತ್ತಿದ್ದರು. ಅವರು ಉಡುಪಿಯಿಂದ ಧರ್ಮಸ್ಥಳದ ಕಡೆಗೆ ಸಂಚರಿಸುತ್ತಿದ್ದರು ಎನ್ನಲಾಗಿದೆ. ಪರ್ಕಳ ಪರಿಸರದಲ್ಲಿ ಬೆಳಗ್ಗಿನ ಜಾವ ಮಂಜು ಕವಿದ ವಾತಾವರಣವಿದ್ದು, ತಿರುವು ಗೋಚರಿಸದ ಕಾರಣ […]

ಕಾರ್ಕಳ ಪರಶುರಾಮ ಪ್ರತಿಮೆಯ ಸೊಂಟದ ಮೇಲ್ಬಾಗದ ಕಳ್ಳತನವೇ ಉಳಿದ ಬಿಡಿಭಾಗಗಳ ಕಳ್ಳತನಕ್ಕೆ ಪ್ರೇರಣೆ, ಕಾರ್ಕಳ ಶಾಸಕ ನೇರ ಹೊಣೆ: ಮುನಿಯಾಲು ಉದಯ ಕುಮಾರ್ ಶೆಟ್ಟಿ

ಕಾರ್ಕಳ: ಕಾರ್ಕಳದ ಪರಶುರಾಮ ಥೀಮ್ ಪಾರ್ಕಿನಲ್ಲಿ ಎರಡನೆಯ ಬಾರಿ ಕಳ್ಳತನ ನಡೆದಿದೆ. ಪರಶುರಾಮ ಪ್ರತಿಮೆಯ ಸೊಂಟದ ಮೇಲ್ಬಾಗದ ಕಳ್ಳತನವೇ ಉಳಿದ ಬಿಡಿಭಾಗಗಳ ಕಳ್ಳತನಕ್ಕೆ ಪ್ರೇರಣೆ. ಈ ದುಸ್ಥಿತಿಗೆ ಶಾಸಕ ಸುನೀಲ್ ಕುಮಾರ್ ನೇರ ಹೊಣೆ ಎಂದು ಕಾರ್ಕಳ ಕಾಂಗ್ರೆಸ್ ನಾಯಕ ಮುನಿಯಾಲು ಉದಯ ಕುಮಾರ ಶೆಟ್ಟಿ ತಿಳಿಸಿದ್ದಾರೆ. ಮೊದಲನೇ ಬಾರಿ ಕಳ್ಳತನ ನಡೆದಿದ್ದು:ಕಂಚಿನ ಬದಲು ಪರಶುರಾಮರ ಪೈಬರ್ ಮಿಶ್ರಿತ ನಕಲಿ ಪ್ರತಿಮೆ ನಿರ್ಮಿಸಿ ಅದರಲ್ಲಿಯೂ ಪ್ರತಿಮೆಯ ಸೊಂಟದ ಮೇಲಿನ ಭಾಗವನ್ನು ಸುನೀಲ್ ಕುಮಾರ್ ನಿರ್ದೇಶನದಂತೆ ಕಳ್ಳತನ ನಡೆಸಲಾಗಿತ್ತು. […]

ಉಡುಪಿ:ಗ್ರಾಫಿಕ್ ಡಿಸೈನರ್ ಹುದ್ದೆಗೆ ನೇಮಕಾತಿ

ಉಡುಪಿ:ಗ್ರಾಫಿಕ್ ಡಿಸೈನರ್ ಹುದ್ದೆಗೆ ನೇಮಕಾತಿ ನಡೆಯಲಿದೆ. ಅರ್ಹತೆಗಳು: ▪️ ಈ ಕೆಲಸದಲ್ಲಿ ಎರಡು ವರ್ಷಕ್ಕಿಂತ ಹೆಚ್ಚಿನ ಅನುಭವವಿರಬೇಕು. ▪️ ವಿಶ್ವಾಸಾರ್ಹ ಮತ್ತು ವೃತ್ತಿಪರರಾಗಿರಬೇಕು. ▪️ ಟೀಮ್ ಪ್ಲೇಯರ್ ಆಗಿರಬೇಕು. ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ಮೇಲ್ ಐಡಿಗೆ ಕಳುಹಿಸಿ. [email protected]