ವಿಟಿಯುನಲ್ಲಿ 4ನೇ ರ್ಯಾಂಕ್ಗಳಿಸಿದ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕುಮಾರಿ ಸಿಂಚನ

ಉಡುಪಿ: ಬಂಟಕಲ್ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮತ್ತು ಡಾಟಾ ಸೈನ್ಸ್ ವಿಭಾಗದ 2022-26ನೇ ಸಾಲಿನ ವಿದ್ಯಾರ್ಥಿನಿ ಕುಮಾರಿ ಸಿಂಚನ ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಇಂಜಿನಿಯರಿಂಗ್ ವಿಭಾಗದಲ್ಲಿ ವಿಶ್ವವಿದ್ಯಾಲಯ ಮಟ್ಟದಲ್ಲಿ 4ನೇ ರ್ಯಾಂಕ್ ಗಳಿಸುವಮೂಲಕ ಸಂಸ್ಥೆಗೆ ಹೆಮ್ಮೆ ತಂದಿದ್ದಾರೆ. ಈ ಪ್ರತಿಷ್ಠಿತ ಸಾಧನೆಗಾಗಿ ಅವರು 26ನೇ ಸೆಪ್ಟೆಂಬರ್ 2026 ರಂದು ನಡೆದ ವಿ ಟಿ ಯು ನ 26ನೇ ಘಟಿಕೋತ್ಸವದಲ್ಲಿ, ಕರ್ನಾಟಕ ಸರ್ಕಾರದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ […]
ಸಂಸ್ಕೃತಿ ಜ್ಞಾನ ಪರಿಚಯ ಮತ್ತು ಗಣಿತ ವಿಜ್ಞಾನ ಮೇಳದಲ್ಲಿ ಭಾಗವಹಿಸಿ ‘ಕಥಾಕಥನ’ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಅಮೃತ ಭಾರತಿ ವಿದ್ಯಾಕೇಂದ್ರಶಾಲೆಯ ೭ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಚಿಂತ್ಯಾ ಆರ್.ಭಟ್ ಆಂಧ್ರ ಪ್ರದೇಶದ ವಿಜಯವಾಡದಲ್ಲಿ ನಡೆದ ೨೦೨೬-೨೭ನೇ ಸಾಲಿನ ಕ್ಷೇತ್ರ ಮಟ್ಟದ ಸಂಸ್ಕೃತಿ ಜ್ಞಾನ ಪರಿಚಯ ಮತ್ತು ಗಣಿತ ವಿಜ್ಞಾನ ಮೇಳದಲ್ಲಿ ಭಾಗವಹಿಸಿ ‘ಕಥಾಕಥನ’ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಕುರುಕ್ಷೇತ್ರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ ಯಾಗಿರುತ್ತಾಳೆ.ಇವಳು ಕುಕ್ಕೆಹಳ್ಳಿ ರಾಘವೇಂದ್ರ ಭಟ್ ನಾಗಮಣಿ ಆರ್.ಭಟ್ ದಂಪತಿಯ ಪುತ್ರಿ.
ಬಾಕಿ ಉಳಿದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್ ಹಾಗೂ ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳ ಪ್ರವೇಶಾತಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ಮೂಲಕ ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ಹಾಗೂ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸಿನ ವಿದ್ಯಾರ್ಥಿಗಳಿಂದ ವೆಬ್ಸೈಟ್ https://shp.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. […]
ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯದ ಅರ್ಹ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ( 1 ರಿಂದ 8ನೇ ತರಗತಿ) ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಎಸ್.ಎಸ್.ಪಿ ತಂತ್ರಾಂಶ https://ssp.postmatric.karnataka.gov.inನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990, […]
ಅ.8 ರಂದು ನೇರ ಸಂದರ್ಶನ

ಉಡುಪಿ: ನಗರದ ಶಾಂತ ಎಲೆಕ್ಟ್ರಿಕಲ್ಸ್ ಪ್ರೈವೇಟ್.ಲಿ., ಆಭರಣ ಜುವೆರ್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್ ರೋಡ್, ಅನುಗ್ರಹ ಕಾಂಪ್ಲೆಕ್ಸ್, ಉಡುಪಿ ಇಲ್ಲಿ ಅಕ್ಟೋಬರ್ 8 ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, […]