ಜೈಲು ವಾರ್ಡನ್‌ಗೆ ಹಲ್ಲೆ, ಜೀವ ಬೆದರಿಕೆ ಹಾಕಿದ ಪ್ರಕರಣ: ಆರೋಪಿಗೆ 5 ವರ್ಷ ಕಠಿಣ ಶಿಕ್ಷೆ

ಉಡುಪಿ: ಜೈಲು ವಾರ್ಡನ್‌ಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಕಠಿಣ ಶಿಕ್ಷೆ ಹಾಗೂ ₹40 ಸಾವಿರ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. 2011ರ ಡಿ.3ರಂದು ಮಧ್ಯಾಹ್ನ 1.20ರ ಸುಮಾರಿಗೆ ಹಿರಿಯಡ್ಕ ಠಾಣಾ ವ್ಯಾಪ್ತಿಯ ಅಂಜಾರು ಗ್ರಾಮದ ಜಿಲ್ಲಾ ಕಾರಾಗೃಹದ ಮೊದಲ ಬ್ಯಾರಕ್‌ ಎದುರಿನ ವರಾಂಡದಲ್ಲಿ ಘಟನೆ ನಡೆದಿತ್ತು. ಜೈಲು ವಾರ್ಡನ್‌ ಕರ್ತವ್ಯಕ್ಕೆ ಹಾಜರಾಗಿ ಬಂಧಿಗಳ ಲೆಕ್ಕ ತೆಗೆದುಕೊಳ್ಳಲು ಅವರವರ ಬ್ಯಾರಕ್‌ಗಳಿಗೆ ತೆರಳುವಂತೆ ಸೂಚಿಸಿದ್ದರು. […]

ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್’ ಸಂಸ್ಥೆಯ ಮಾಲೀಕ ಮುಳಿಯ ಶ್ಯಾಮ ಭಟ್ ನಿಧನ

ಪುತ್ತೂರು: ‘ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್’ ಸಂಸ್ಥೆಯ ಮಾಲೀಕರಾದ ಮುಳಿಯ ಸಾರಾಫ ಶ್ಯಾಮ ಭಟ್ (81 ವರ್ಷ) ಅವರು ಅಕ್ಟೋಬರ್ 4ರಂದು ನಿಧನ ಹೊಂದಿದ್ದಾರೆ. ಪುತ್ತೂರಿನ ಪಾಂಗಳಾಯಿಯಲ್ಲಿರುವ ಶ್ಯಾಮಲೋಚನಾ ನಿವಾಸದಲ್ಲಿ ಅಲ್ಪಕಾಲದ ಅಸೌಖ್ಯದಿಂದ ಅವರು ಕೊನೆಯುಸಿರೆಳೆದರು. ಚಿನ್ನಾಭರಣ, ಬೆಳ್ಳಿ ಮತ್ತು ವಜ್ರ ವ್ಯವಹಾರ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಮುಳಿಯ ಶ್ಯಾಮ ಭಟ್ ಅವರು ‘ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್’ ಸಂಸ್ಥೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇವರು ಪುತ್ತೂರು, ಬೆಂಗಳೂರು, ಮಡಿಕೇರಿ, ಗೋಣಿಕೊಪ್ಪಲು ಹಾಗೂ […]

ಧಾರ್ಮಿಕ ಆಚರಣೆಗಳು ಯುವಜನತೆಯ ಸದಾಚಾರ ಸಂಸ್ಕೃತಿ ಬೆಳವಣಿಗೆಗೆ ಸಹಕಾರಿ: ಕಿನ್ನಿಮುಲ್ಕಿ ಶಾರದೋತ್ಸವ ಪೂರ್ವಭಾವಿ ಸಭೆಯಲ್ಲಿ ಶಾಸಕ ಯಶಪಾಲ್ ಸುವರ್ಣ

ಉಡುಪಿ: ಧಾರ್ಮಿಕ ಆಚರಣೆಗಳು ಪಾಶ್ಚಾತ್ಯ ಸಂಸ್ಕೃತಿಗೆ ಆಕರ್ಷಿತಗೊಂಡ ಯುವಜನತೆಯಲ್ಲಿ ಸದಾಚಾರ, ಸನ್ನಡತೆ, ಮತ್ತು ಧಾರ್ಮಿಕ ಮೌಲ್ಯಗಳನ್ನು ಬೆಳೆಸುವಲ್ಲಿ ಪ್ರೇರಣೆ ನೀಡುತ್ತದೆ ಹಾಗೂ ಅವರನ್ನು ಸುಸಂಸ್ಕೃತ ಭಾರತೀಯ ನಾಗರಿಕರಾಗಿ ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಶಾಸಕರಾದ ಸುವರ್ಣರವರು ಅಭಿಮತ ವ್ಯಕ್ತಪಡಿಸಿದರು. ಅವರು ಭಾನುವಾರ ಕಿನ್ನಿಮುಲ್ಕಿ ಶ್ರೀ ವೀರಭದ್ರ ದೇವಸ್ಥಾನದ ವಠಾರ ದಲ್ಲಿ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ರಿ., ಉಡುಪಿ ಜಿಲ್ಲೆ ಇವರ ವತಿಯಿಂದ ಉಡುಪಿ ಶಾರದೆಯ ನವಮ ವರ್ಷದ ಶ್ರೀ ಶಾರದಾ ಮಹೋತ್ಸವವು ದಿನಾಂಕ […]

ಉಡುಪಿ: ಗಾಂಧಿ ಜಯಂತಿ, ಲಾಲ್ ಬಹುದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

ಉಡುಪಿ: ಲಯನ್ಸ್ ಕ್ಲಬ್ ಪ್ರಕೃತಿ ವತಿಯಿಂದ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರೀ ಜಯಂತಿಯನ್ನು ಉಡುಪಿಯ ಶಿರಬಿಡು ಸರಸ್ವತಿ ವಿದ್ಯಾ ಮಂದಿರ ಶಾಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಅದೇ ಸಂದರ್ಭದಲ್ಲಿ ಶಾಲೆಗೆ ದೇಶದ ಗಣ್ಯರ ಫೋಟೋಗಳನ್ನು ಹಸ್ತಾಂತರ ಮಾಡಲಾಯಿತು. ಇದೇ ಸಂದರ್ಭದಲ್ಲಿ ಉಡುಪಿಯ ಆಶಾ ನಿಲಯದಲ್ಲಿ, ನಮ್ಮ ಲಯನ್ಸ್ ಕ್ಲಬ್ ಸದಸ್ಯರಾದ ರಾಜ ವಿಕ್ರಮ್ ಅವರ ಮೊಮ್ಮಗಳಾದ ಕುಮಾರಿ ಸಿಯಾ ಅಶ್ವಿನ್ ಹುಟ್ಟುಹಬ್ಬವನ್ನು ಲಯನ್ಸ್ ಕ್ಲಬ್‌ನ ಸಹಯೋಗದೊಂದಿಗೆ ಆಚರಿಸಿ ಮಕ್ಕಳಿಗೆ ಬೇಕಾದ ಅಗತ್ಯ ವಸ್ತುಗಳನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ […]

ನಾಡಿನ ಜನಪ್ರಿಯ ಕಲೆ ಯಕ್ಷಗಾನವನ್ನು ರಾಜ್ಯ ಕಲೆ ಎಂದು ಘೋಷಿಸುವಂತೆ ಸರ್ಕಾರಕ್ಕೆ ಯಕ್ಷಗಾನ ಅಕಾಡೆಮಿಯ ಮನವಿ

ಉಡುಪಿ: ನಾಡಿನಾದ್ಯಂತ ಜನಪ್ರಿಯವಾಗಿರುವ ಕರಾವಳಿಯ ಯಕ್ಷಗಾನ ಕಲೆಯನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸುವಂತೆ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ್ ಶೆಟ್ಟಿ ಅವರ ನೇತೃತ್ವದಲ್ಲಿ ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅ.8ರಂದು ಮನವಿ ಮಾಡಿಲಿದ್ದಾರೆ. ಕರ್ನಾಟಕ ಕರಾವಳಿಯ ಗಂಡುಕಲೆಯೆಂದೇ ಪ್ರಖ್ಯಾತವಾಗಿರುವ ನೂರಾರು ವರ್ಷಗಳ ಇತಿಹಾಸ ಹೊಂದಿರುವ ‘ಯಕ್ಷಗಾನ ಕಲೆ’ಯ ಉಳಿವು ಹಾಗೂ ಬೆಳವಣಿಗೆಯ ದೃಷ್ಟಿಯಿಂದ ‘ಕರ್ನಾಟಕ ರಾಜ್ಯ ಕಲೆ’ಯಾಗಿ ಮಾನ್ಯತೆ ನೀಡಿ ಸರಕಾರದ ವತಿಯಿಂದ ಅಧಿಕೃತವಾಗಿ ಘೋಷಿಸಬೇಕು ಎಂಬ ಮನವಿ ಇದೆ. ಕರ್ನಾಟಕದ ಹೆಮ್ಮೆಯ […]