ಕೊಡಗಿನಲ್ಲಿ ರೆಡ್ ಅಲರ್ಟ್ ಮುಂದುವರಿಕೆ: ನಾಳೆಯು (ಜುಲೈ 20) ಕೊಡಗು ಜಿಲ್ಲೆಯಾದ್ಯಂತ ಶಾಲಾ-ಕಾಲೇಜಿಗಳಿಗೆ ರಜೆ ಘೋಷಣೆ.
ಕೊಡಗು: ಕೊಡಗು ಜಿಲ್ಲಾದ್ಯಂತ ಬಾರಿ ಮಳೆ, ಗಾಳಿ ಮುಂದುವರದಿದ್ದು, ಹವಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜು.20 ರಂದು ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ತ್ರಿಶಾ ಕ್ಲಾಸಸ್ : ಸಿ ಎಸ್ ಎಕ್ಸಿಕ್ಯೂಟಿವ್ ತರಗತಿ ಆರಂಭ
ಕರಾವಳಿ ಭಾಗದಲ್ಲಿ ಸತತ 25 ವರ್ಷಗಳಿಂದ ಸಿ ಎ, ಸಿ ಎಸ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ನೀಡುತ್ತಾ ಬಂದಿರುವ ತ್ರಿಶಾ ಕ್ಲಾಸಸ್ ವತಿಯಿಂದ ಜುಲೈ 23ರಿಂದ ಸಿಎಸ್ ಎಕ್ಸಿಕ್ಯೂಟಿವ್ ನ ಮಾಡ್ಯೂಲ್ 2 ತರಗತಿಗಳು ಉಡುಪಿಯಲ್ಲಿ ಆರಂಭಗೊಳ್ಳುತ್ತಿದೆ. ತರಗತಿಯ ವೈಶಿಷ್ಟ್ಯಗಳು: 🔹ನುರಿತ ಪ್ರಾಧ್ಯಾಪಕ ವೃಂದ🔹ವಿದ್ಯಾರ್ಥಿಗಳಿಗೆ ಸ್ಟಡೀ ಮೆಟಿರಿಯಲ್ ಗಳು🔹ಪರೀಕ್ಷಾ ಆಧಾರಿತ ರಿವಿಶನ್ ತರಗತಿಗಳು ಹಾಗೂ 🔹ಮಾಕ್ ಟೆಸ್ಟ್ ಸರಣಿ🔹ಹಾಸ್ಟೆಲ್ ವ್ಯವಸ್ಥೆ🔹ಉತ್ತಮ ಫಲಿತಾಂಶ ಆಸಕ್ತರು ಉಡುಪಿಯ ಕೋರ್ಟ್ ಮುಂಭಾಗದಲ್ಲಿರುವ ತ್ರಿಶಾ ಕ್ಲಾಸಸ್ ಕಛೇರಿ ಅಥವಾ ಕಟಪಾಡಿಯ ತ್ರಿಶಾ ವಿದ್ಯಾ […]
ಧಾರಾಕಾರ ಮಳೆ: ನಾಳೆ (ಜು. 20) ದ.ಕ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.
ಮಂಗಳೂರು, ಜು. 19: ಕರಾವಳಿಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜುಲೈ 20ರಂದು ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿ ಆದೇಶಿಸಿದೆ.
ಜುಲೈ 20ರಂದು ಉಡುಪಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ: ಕಳೆದು ಐದು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ನೆರೆ ಭೀತಿ ಉಂಟಾಗಿದೆ. ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 20) ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ನೀಡಿದ್ದಾರೆ.ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ. ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.
ಉಡುಪಿಯಲ್ಲಿ ಭಾರೀ ವರ್ಷಾಧಾರೆ; ಕೆಮ್ತೂರು, ಮಠ ಕುದ್ರು ಭಾಗದಲ್ಲಿ ನೆರೆ
ಉಡುಪಿ: ಜಿಲ್ಲೆಯಾದ್ಯಂತ ಕಳೆದ ಐದು ದಿನಗಳಿಂದ ಭಾರೀ ವರ್ಷಾಧಾರೆಯಾಗುತ್ತಿದ್ದು, ಇದರಿಂದ ನದಿ ಪಾತ್ರದ ಜನರಲ್ಲಿ ಆತಂಕ ಮನೆಮಾಡಿದೆ. ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಪಾಪನಾಶಿನಿ ನದಿ, ಪಿನಾಕಿನಿ ನದಿ ಉಕ್ಕಿ ಹರಿಯುತ್ತಿದ್ದು, ನದಿ ತೀರದ ನಿವಾಸಿಗಳಲ್ಲಿ ನೆರೆ ಭೀತಿ ಎದುರಾಗಿದೆ. ಪಾಪನಾಶಿನಿ ನದಿಗೆ ಹೊಂದಿಕೊಂಡಿರುವ ಉದ್ಯಾವರ, ಮಟ್ಟು ಪ್ರದೇಶದಲ್ಲಿ ನೆರೆ ಬಂದಿದ್ದು, ಜನಜೀವನಕ್ಕೆ ತೊಂದರೆಯಾಗಿದೆ. ಉದ್ಯಾವರದ ಮಠದ ಕುದ್ರು, ಕೆಮ್ತೂರು, ಮೂಡುಅಲೆವೂರು ಮತ್ತಿತರೆಡೆಗಳಲ್ಲಿ ನದಿ ಅಪಾಯದ ಮಟ್ಟ ತಲುಪಿದೆ. ಇಂದು ಮುಂಜಾನೆ ಅಗ್ನಿಶಾಮಕ ಸಿಬ್ಬಂದಿ ಈ ಭಾಗದ ಜನರ […]