ತುಳು ಭಾಷಾ ಮಾನ್ಯತೆ ಸಂಭ್ರಮ: ಅ.4ರಂದು ಉಡುಪಿಯಲ್ಲಿ ‘ವಿಶೇಷ ತುಳುವೆರೆ ದಿಬ್ಬಣ’

ಉಡುಪಿ: ತುಳು ಭಾಷೆಗೆ ಕರ್ನಾಟಕ ರಾಜ್ಯದ ಅಧಿಕೃತ ಭಾಷೆಯಾಗಿ ಮಾನ್ಯತೆ ದೊರೆತಿರುವ ಹಿನ್ನೆಲೆಯಲ್ಲಿ ತುಳುಕೂಟ ಉಡುಪಿ ವತಿಯಿಂದ ಅ.4ರಂದು ನಗರದಲ್ಲಿ ‘ವಿಶೇಷ ತುಳುವೆರೆ ದಿಬ್ಬಣ’ ಹಾಗೂ ಗೌಜಿ-ಮಿನದನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತುಳುಕೂಟದ ಅಧ್ಯಕ್ಷ ಬಿ. ಜಯಕರ್ ಶೆಟ್ಟಿ ಇಂದ್ರಾಳಿ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 3 ಗಂಟೆಗೆ ಕುಂಜಿಬೆಟ್ಟು ರಿಕ್ಷಾ ನಿಲ್ದಾಣದಿಂದ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದವರೆಗೆ ತುಳುಕೂಟದ ಸದಸ್ಯರು ಹಾಗೂ ವಿವಿಧ ತುಳು ಸಂಘಟನೆಗಳ ಸಹಯೋಗದಲ್ಲಿ ತುಳುವೆರೆ ದಿಬ್ಬಣ […]
ಶ್ವೇತಾ ಪ್ರಸನ್ನ ಶೆಟ್ಟಿ ಅವರಿಗೆ ಡಾಕ್ಟರೇಟ್ ಪದವಿ ಪ್ರದಾನ

ಹೆಬ್ರಿ: ಪೆರ್ಡೂರು ಮೂಲದ ಪುಣೆಯಲ್ಲಿ ಉದ್ಯಮಿಯಾಗಿರುವ ಪ್ರಸನ್ನ ಶೆಟ್ಟಿ ಅವರ ಪತ್ನಿಶ ಶ್ವೇತಾ ಪಿ.ಶೆಟ್ಟಿ ಅವರು ಎ.ಜೆ ತಾಂತ್ರಿಕ ಮಹಾವಿದ್ಯಾಲಯದ ಗಣಿತಶಾಸ್ತ್ರ ವಿಭಾಗದಲ್ಲಿ ಪ್ರಾಧ್ಯಾಪಕಿಯಾಗಿ ಹಾಗೂ ವಿಭಾಗ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ. ಶಾಂತಕುಮಾರಿ. ಕೆ., ಇವರ ಮಾರ್ಗದರ್ಶನದಲ್ಲಿ ಸಲ್ಲಿಸಿದ ” ಎ ಸ್ಟಡಿ ಆಫ್ ಸಿಂಗಲ್ ಅಂಡ್ ಡಬಲ್ ಇಂಟಿಗ್ರಲ್ಸ್ ಇನ್ವಾಲ್ವಿಂಗ್ ಹೈಪರ್ಜಿಯೋಮೆಟ್ರಿಕ್ ಅಂಡ್ ಜನರಲೈಸ್ಡ್ ಹೈಪರ್ಜಿಯೋಮೆಟ್ರಿಕ್ ಫಂಕ್ಷನ್ಸ್ ವಿದ್ ಅಪ್ಲಿಕೇಶನ್ಸ್” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿಯು 26ನೇ ವಾರ್ಷಿಕ ಘಟಿಕೋತ್ಸವದಲ್ಲಿ […]
ಕೃಷಿ ಪ್ರವಾಸೋದ್ಯಮಕ್ಕೆ ಒತ್ತು ನೀಡಲು ಚಿಂತನೆ: ಸಿ.ಇ.ಓ ಪ್ರತೀಕ್ ಬಾಯಲ್

ಉಡುಪಿ: ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳ ಜೊತೆಗೆ ಗ್ರಾಮೀಣ ಬದುಕು ಮತ್ತು ಕೃಷಿ ಸಂಸ್ಕೃತಿಯನ್ನು ಪ್ರವಾಸೋದ್ಯಮದೊಂದಿಗೆ ಬೆಸೆಯಲು ಕೃಷಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡುವ ಚಿಂತನೆ ಇದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್ ತಿಳಿಸಿದರು. ಅವರು ರವಿವಾರ ಕಾಪುವಿನ ಪ್ಯಾಲೇಸ್ ಗಾರ್ಡನ್ನಲ್ಲಿ ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಉಡುಪಿ ಪ್ರವಾಸೋದ್ಯಮ ಇಲಾಖೆ ಹಾಗೂ ಅಸೋಸಿಯೇಷನ್ ಆಫ್ ಕೋಸ್ಟಲ್ ಟೂರಿಸಂ ಸಹಯೋಗದಲ್ಲಿ ಉಡುಪಿ ಟೂರಿಸಂ ಇನ್ಫು÷್ಲಎನ್ಸರ್ಸ್ & ಸ್ಟೇಕ್ […]
ಹಿರಿಯ ನಾಗರಿಕರು ಹಿಂಜರಿಕೆಯಿಲ್ಲದೆ ಮುಕ್ತವಾಗಿ ಸ್ಪರ್ಧೆಗಳಲ್ಲಿ ಭಾಗವಹಿಸಿ: ನ್ಯಾ. ನಿತಿನ್ ಯಶ್ವಂತ್ ರಾವ್

ಉಡುಪಿ:ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊoದಿಗೆ ಯಾವುದೇ ಹಿಂಜರಿಕೆಯಿಲ್ಲದೇ ಹಿರಿಯ ನಾಗರಿಕರು ಮುಕ್ತವಾಗಿ ಎಲ್ಲಾ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಆಗ ಮಾತ್ರ ಇಂತಹ ಕಾರ್ಯಕ್ರಮಗಳು ಯಶಸ್ಸು ಕಾಣಲು ಸಾಧ್ಯ ಎಂದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಿತಿನ್ ಯಶ್ವಂತ್ ರಾವ್ ಹೇಳಿದರು. ಅವರು ಇಂದು ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ […]
ಅ.17ರಂದು 9ನೇ ವರ್ಷದ ‘ಉಡುಪಿ ದಾಂಡಿಯಾ’

ಉಡುಪಿ: ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಯುವ ಘಟಕದ ನೇತೃತ್ವದಲ್ಲಿ 9ನೇ ವರ್ಷದ ‘ಉಡುಪಿ ದಾಂಡಿಯಾ–2026’ ಕಾರ್ಯಕ್ರಮ ಅ.17ರಂದು ಸಂಜೆ 6ರಿಂದ ಕಡಿಯಾಳಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಪೋಸ್ಟರ್ನ್ನು ಶಾಸಕ ಯಶ್ಪಾಲ್ ಎ. ಸುವರ್ಣ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಪ. ವಸಂತ್ ಭಟ್, ಪ್ರಧಾನ ಕಾರ್ಯದರ್ಶಿ ಕೆ. ರಾಘವೇಂದ್ರ ಕಿಣಿ, ವಜ್ರಮಹೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಗಿರೀಶ್ ಎಂ. ಅಂಚನ್, ಕೋಶಾಧಿಕಾರಿ ಎಂ. ವಲ್ಲಭ ಭಟ್, ವಜ್ರಮಹೋತ್ಸವ ಸಮಿತಿ […]