ಉಡುಪಿ ತಾಲೂಕು – ಕೃಷಿ ಭಾಗ್ಯ ಯೋಜನೆಯಡಿ ಸಹಾಯಧನ : ಅರ್ಜಿ ಆಹ್ವಾನ
ಉಡುಪಿ: ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವ ನಿಟ್ಟಿನಲ್ಲಿ, ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸಿ ಆದಾಯವನ್ನುಹೆಚ್ಚಿಸುವ ಸಲುವಾಗಿ ಮತ್ತು ಮಳೆ ನೀರನ್ನು ವ್ಯರ್ಥ ಮಾಡದೆ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ, ಬೆಳೆಗಳ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವ ಸಲುವಾಗಿ ಕೃಷಿ ಭಾಗ್ಯ ಯೋಜನೆಯನ್ನು ತಾಲೂಕುಗಳಲ್ಲಿಅನುಷ್ಠಾನಗೊಳಿಸಲಾಗುತ್ತಿದೆ. ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ನೀರು ಇಂಗದಂತೆ ತಡೆಯಲು […]
ಉಡುಪಿ:ಗ್ರಾಮ ಪಂಚಾಯತ್ ಉಪಚುನಾವಣೆ : ನಿಷೇಧಾಜ್ಞೆ ಜಾರಿ
ಉಡುಪಿ: ಗ್ರಾಮ ಪಂಚಾಯತ್‌ಗಳ ಸಾರ್ವತ್ರಿಕ ಉಪ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಗ್ರಾಮಪಂಚಾಯತ್‌ಗಳಲ್ಲಿ ಸದಸ್ಯರ ರಾಜೀನಾಮೆ, ನಿಧನ ಮುಂತಾದ ಕಾರಣಗಳಿಂದ ಆಕಸ್ಮಿಕವಾಗಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮೂಲಕ ಭರ್ತಿ ಮಾಡಲು ಕುಂದಾಪುರ ತಾಲೂಕಿನ ಅಮಾಸೆಬೈಲು, ಬ್ರಹ್ಮಾವರ ತಾಲೂಕಿನ ಕೋಟ, ಉಡುಪಿ ತಾಲೂಕಿನ ಬೊಮ್ಮಾರಬೆಟ್ಟು ಹಾಗೂ ಕೊಡಿಬೆಟ್ಟು ಹಾಗೂ ಕಾರ್ಕಳ ತಾಲೂಕಿನ ಈದು, ನಲ್ಲೂರು, ನಿಟ್ಟೆ, ನೀರೆ, 5-ಕೆರ್ವಾಶೆ ಹಾಗೂಕಡ್ತಲ ಗ್ರಾಮ ಪಂಚಾಯತಿಗಳ ಖಾಲಿ ಇರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ವೇಳಾ ಪಟ್ಟಿಯನ್ನು ನಿಗಧಿಪಡಿಸಿ, ನವೆಂಬರ್ […]
ಉಡುಪಿ: ನ.13 ರಂದು ಮಿನಿ ಉದ್ಯೋಗ ಮೇಳ
ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ನವೆಂಬರ್ 13 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳ ವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಗ್ರಾಫಿಕ್ ಡಿಸೈನ್, (ಕಂಪ್ಲಿಟೇಡ್ ಪೋಟೋ ಕೋರ್ಸ್) ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಿನಿ […]
ಮಂಗಳೂರು: ಪಕ್ಷಿಕೆರೆ ಕೊಲೆ ಪ್ರಕರಣ: ಕಾರ್ತಿಕ್ ಭಟ್ ತಾಯಿ ಹಾಗೂ ಸಹೋದರಿ ಬಂಧನ
ಮಂಗಳೂರು: ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಿಕೆರೆಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾರ್ತಿಕ್ ಭಟ್ ತಾಯಿ ಹಾಗೂ ಅಕ್ಕನನ್ನು ಪೊಲೀಸರು ಬಂದಿಸಿದ್ದಾರೆ. ಶ್ಯಾಮಲಾ ಭಟ್(61) ಹಾಗೂ ಸುರತ್ಕಲ್ ಬಾಳ ನಿವಾಸಿ ಕಣ್ಮಣಿ ರಾವ್(36) ಬಂಧಿತರು. ಇಬ್ಬರ ವಿರುದ್ಧ ಕಾರ್ತಿಕ್ ಭಟ್ ಪತ್ನಿಯ ತಾಯಿ ಸಾವಿತ್ರಿ ನೀಡಿದ ದೂರಿನಂತೆ 308 ಭಾರತೀಯ ನ್ಯಾಯ ಸಂಹಿತೆ ಆತ್ಮಹತ್ಯೆ ಪ್ರಚೋದನೆ ಪ್ರಕರಣ ದಾಖಲಾಗಿದ್ದು ಇಬ್ಬರನ್ನು ಮುಲ್ಕಿ ಪೊಲೀಸರು ಬಂಧಿಸಿ ಮೂಡಬಿದ್ರೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕಳೆದ ದಿನದ ಹಿಂದೆ ಪೊಲೀಸ್ ಠಾಣಾ […]
ಮಂಗಳೂರು: ಕಾರ್ಕಳ ಮೂಲದ ಮಹಿಳೆ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ.
ಮಂಗಳೂರು: ನಗರದ ಲೇಡಿಗೋಷನ್ ಹೆರಿಗೆ ಅಸ್ಪತ್ರೆಯ ನಾಲ್ಕನೇ ಮಹಡಿಯಿಂದ ಜಿಗಿದು ಬಾಣಂತಿಯೊಬ್ಬರು ಸೋಮವಾರ ಆತ್ಮಹತ್ಯೆಮಾಡಿಕೊಂಡಿದ್ದಾರೆ. ಮೃತರು ಉಡುಪಿ ಜಿಲ್ಲೆಯ ಕಾರ್ಕಳದ ರಂಜಿತಾ ಆಚಾರ್ಯ (28). ರಂಜಿತಾ ಅವರಿಗೆ ಅವಧಿ ಪೂರ್ವ ಪ್ರಸವವಾಗಿತ್ತು. ಅ.30ರಂದು ಸಿಸೇರಿಯನ್ ಮೂಲಕ ಹೆರಿಗೆ ನಡೆದಿತ್ತು. ಎನ್ ಐಸಿಯುವಿನಲ್ಲಿ ಅರೈಕೆಯಲ್ಲಿದ್ದ ಶಿಶು ನ.3ರಂದು ಮೃತಪಟ್ಟಿತ್ತು. ರಂಜಿತಾ ಅವರು ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಗೊಳ್ಳಬೇಕಿತ್ತು. ಅಷ್ಟರಲ್ಲಿ ಈ ಘಟನೆ ನಡೆದಿದೆ. ರಂಜಿತಾ ಅವರನ್ನು ಆಸ್ಪತ್ರೆಯಿಂದ ಕರೆದೊಯ್ಯಲು ಮನೆಯವರು ಕೂಡ ಲೇಡಿಗೋಷನ್ ಆಸ್ಪತ್ರೆಗೆ ಬಂದಿದ್ದರು. ಆದರೆ ರಂಜಿತಾ ಏಕಾಏಕಿ […]