ಉಡುಪಿ: ಎಸಿ ಕೋಣೆಯಿಂದ ದಕ್ಷ ಎಸ್ಪಿ ಹೊರಬರಲಿ: ಶ್ರೀನಿಧಿ ಹೆಗ್ಡೆ

ಉಡುಪಿ: ರಾಜ್ಯದಲ್ಲೆ ಹೆಚ್ಚು ಶಾಂತಿಯುತ, ಕಾನೂನು ಸುವ್ಯವಸ್ಥೆಯನ್ನು ಪಾಲಿಸುವ ನಾಗರಿಕರನ್ನು ಹೊಂದಿರುವ ಉಡುಪಿ ಜಿಲ್ಲೆಯಲ್ಲಿ, ಪ್ರಸ್ತುತ ಎಸ್ಪಿಯಾಗಿರುವ ಡಾ.ಅರುಣ್ ದಕ್ಷ ಅಧಿಕಾರಿ ಎಂದು ಹೆಸರು ಪಡೆದಿದ್ದಾರೆ. ಆದರೆ ಅವರ ನಿರ್ಧಾರಗಳು ಪೋಲಿಸ್ ಸಿಬ್ಬಂದಿಗಳ ಆತ್ಮಸ್ಥೈರ್ಯವನ್ನು ಕುಗ್ಗಿಸುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ್, ಹೈಕೋರ್ಟ್ ವಕೀಲ ಶ್ರೀನಿಧಿ ಹೆಗ್ಡೆ ಪತ್ರಿಕಾ ಪ್ರಕಟಣೆಯಲ್ಲಿ ವಿಷಾದಿಸಿದ್ದಾರೆ. ಆರಂಭದಲ್ಲಿ ಸಾಕಷ್ಟು ಖ್ಯಾತಿ ಪಡೆದ ಎಸ್ಪಿ ಡಾ.ಅರುಣ್ ಅವರ ಅವಧಿಯಲ್ಲಿ ನಡೆದ ಘನಘೋರ ಅಪರಾಧಗಳನ್ನು ಪತ್ತೆಹಚ್ಚುವಲ್ಲಿ ಅವರ ನೇತೃತ್ವದಲ್ಲಿ ಜಿಲ್ಲಾ […]

ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯೋಪಾಧ್ಯಾಯ ಕುದಿ ವಸಂತ ಶೆಟ್ಟಿ ಇನ್ನಿಲ್ಲ

ಉಡುಪಿ: ರಾಷ್ಟ್ರಪ್ರಶಸ್ತಿ ವಿಜೇತ, ಹಿರಿಯಡಕ ಕುದಿ ಗ್ರಾಮದ ಶ್ರೀ ವಿಷ್ಣುಮೂರ್ತಿ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕುದಿ ವಸಂತ ಶೆಟ್ಟಿ ಅವರು ಸೋಮವಾರ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ತನ್ನ ಊರಿನ ಪ್ರೌಢಶಾಲೆಯಲ್ಲಿ 1980ರಿಂದ ಸ್ಥಾಪಕ ಮುಖ್ಯ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು, ಮೂರು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಕುದಿ ವಸಂತ ಶೆಟ್ಟಿ ಅವರು ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಸ್ಥಾಪಕ ಕಾರ್ಯದರ್ಶಿಯಾಗಿ 4 ವರ್ಷ, ಅಧ್ಯಕ್ಷರಾಗಿ 5 ವರ್ಷ ಸೇವೆ ಸಲ್ಲಿಸಿದ್ದಾರೆ. ಉತ್ತಮ ವಾಗ್ಮಿ, ಸಂಪನ್ಮೂಲ […]

ತ್ರಿಶಾ ಕಾಲೇಜು ಮಂಗಳೂರು ಹಾಗೂ ಕೆನರಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಯೊಂದಿಗೆ (ಕೆಸಿಸಿಐ) ಒಡಂಬಡಿಕೆ

ಮಂಗಳೂರು: ತ್ರಿಶಾ ಕಾಲೇಜು ಹಾಗೂ ಮಂಗಳೂರಿನ ಕೆನರಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಯೊಂದಿಗೆ (ಕೆಸಿಸಿಐ) ಒಡಂಬಡಿಕೆ ಮಾಡಿಕೊಂಡಿದ್ದು ಈ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನವೆಂಬರ್ 8 ರಂದು ನಡೆಯಿತು. ಮುಖ್ಯ ಅತಿಥಿಯಾಗಿದ್ದ ಕೆಸಿಸಿಐ ಅಧ್ಯಕ್ಷರು ಶ್ರೀ ಆನಂದ್ ಜಿ ಪೈ, ಉಪನ್ಯಾಸ ನೀಡಿ, ಉದ್ಯಮ ಮತ್ತು ಶಿಕ್ಷಣದ ಸಹಭಾಗಿತ್ವವು ವಿದ್ಯಾರ್ಥಿಗಳನ್ನು ವೃತ್ತಿ ಜಗತ್ತಿಗೆ ಸಿದ್ಧಗೊಳಿಸುವುದರ ಮಹತ್ವವನ್ನು ತಿಳಿಸಿದರು. ಕೆಸಿಸಿಐ ವಿದ್ಯಾರ್ಥಿಗಳ ಹೊಸ ಆವಿಷ್ಕಾರಗಳಿಗೆ ಸಹಾಯ ಮಾಡುತ್ತದೆ ಎಂದರು. ಅಧ್ಯಕ್ಷತೆಯನ್ನು ವಹಿಸಿದ್ದ ತ್ರಿಶಾ ಸಂಸ್ಥೆಯ ಸಂಸ್ಥಾಪಕರಾದ ಸಿಎ […]

ಮಂಗಳೂರು: ‘ಗೃಹಲಕ್ಷ್ಮಿ’ ಹಣದಿಂದ ಪತಿಗೆ ‘ಸ್ಕೂಟಿ’ ಗಿಫ್ಟ್ ನೀಡಿದ ಪತ್ನಿ.

ಮಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಅದರಲ್ಲಿ ಮಹಿಳೆಯರಿಗೆ ಪ್ರಮುಖವಾದ ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯದ ಹಲವು ಮಹಿಳೆಯರಿಗೆ ಸದುಪಯೋಗವಾಗಿದೆ. ಇದೀಗ ಪತಿಗೆ ಪತ್ನಿಯೊಬ್ಬರು ಗೃಹಲಕ್ಷ್ಮಿ ಯೋಜನೆಯಿಂದ ಬಂದಂತಹ ಹಣದಿಂದ ಸ್ಕೂಟಿ ಗಿಫ್ಟ್ ಕೊಟ್ಟಿದ್ದಾರೆ. ಮಂಗಳೂರಿನ ಕೋಡಿಂಬಾಡಿ ಸಮೀಪದ ಶಾಂತಿನಗರ ನಿವಾಸಿ ಮಿಸ್ತ್ರಿಯಾ ಎಂಬವರು ತನ್ನ ಬ್ಯಾಂಕ್ ಖಾತೆಗೆ ಜಮೆಯಾಗಿರುವ ಗೃಹಲಕ್ಷ್ಮಿ ಹಣದಿಂದ ಪತಿ ಸಲೀಂ ಗಾಗಿ ಸ್ಕೂಟರ್ ಖರೀದಿಸಿದ್ದಾರೆ. ಪೈಂಟರ್ ಆಗಿರುವ ಸಲೀಂ ನಿತ್ಯ ದೂರದ […]

ಬೈಲೂರು ಪರಶುರಾಮ ಥೀಮ್ ಪಾರ್ಕ್ ಪ್ರಕರಣ; ಶಿಲ್ಪಿ ಕೃಷ್ಣ ನಾಯ್ಕ್ ಬಂಧನ

ಉಡುಪಿ: ಬೈಲೂರು ಥೀಮ್ ಪಾರ್ಕ್ ಪ್ರಕರಣಕ್ಕೆ ಸಂಬಂಧಿಸಿ ಶಿಲ್ಪಿ ಕೃಷ್ಣ ನಾಯ್ಕ್ ಎಂಬವರನ್ನು ಪುದುಚೆರಿಯ ಮಾಹೆ ಎಂಬಲ್ಲಿ ಕಾರ್ಕಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ನಾಯ್ಕ್ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ತಿರಸ್ಕರಿಸಿ ಆದೇಶ ನೀಡಿತ್ತು. ಆ ಬಳಿಕ ಪೊಲೀಸರು ಪತ್ತೆ ಕಾರ್ಯ ತೀವ್ರಗೊಳಿಸಿ ಹುಡುಕಾಟ ನಡೆಸಿದ್ದರು. ಮಾಹೆಯಲ್ಲಿ ತಲೆಮರಸಿಕೊಂಡಿದ್ದ ಕೃಷ್ಣ ನಾಯ್ಕ್ ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೃಷ್ಣ […]