ಶಾರ್ಜಾ ಹತ್ಯೆ: ಪ್ರಕಾಶ್ ಕುಂದರ್ ಮೃತದೇಹ ಭಾರತಕ್ಕೆ ತರಲು ಕ್ರಮ

ಉಡುಪಿ: ಶಾರ್ಜಾದಲ್ಲಿ ಉಡುಪಿ ಮೂಲದ ಆಲ್ವಿನ್ ಪ್ರಕಾಶ್ ಕುಂದರ್ ಅವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೃತದೇಹವನ್ನು ಭಾರತಕ್ಕೆ ತರಲು ವಿದೇಶಾಂಗ ಇಲಾಖೆ ಹಾಗೂ ಶಾರ್ಜಾದ ರಾಯಭಾರಿ ಕಚೇರಿಯೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಘಟನೆ ಗಮನಕ್ಕೆ ಬಂದ ತಕ್ಷಣ ವಿದೇಶಾಂಗ ಇಲಾಖೆಗೆ ಪತ್ರ ಬರೆದಿದ್ದು, ಶಾರ್ಜಾದ ರಾಯಭಾರಿ ಕಚೇರಿಯನ್ನೂ ಸಂಪರ್ಕಿಸಲಾಗಿದೆ. ವಿದೇಶಾಂಗ ಇಲಾಖೆ ಹಾಗೂ ಸಂಬಂಧಪಟ್ಟ ಸಚಿವರೊಂದಿಗೆ ಮಾತುಕತೆ ನಡೆಸಲಾಗಿದೆ. ಪ್ರಕಾಶ್ ಕುಂದರ್ ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು […]
ಮಾದಕ ವಸ್ತು ಜಾಲದ ಮೇಲೆ ಪೊಲೀಸ್ ದಾಳಿ: 10 ಮಂದಿ ಬಂಧನ

ಉಡುಪಿ: ಶಿರ್ವ ಹಾಗೂ ಉಡುಪಿ ನಗರ ಪೊಲೀಸರು ಪ್ರತ್ಯೇಕವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ನಿಷೇಧಿತ ಮಾದಕ ವಸ್ತುಗಳ ಸಾಗಾಟ ಮತ್ತು ದಾಸ್ತಾನು ಪ್ರಕರಣಗಳಿಗೆ ಸಂಬಂಧಿಸಿ ಒಟ್ಟು 10 ಮಂದಿಯನ್ನು ಬಂಧಿಸಿದ್ದು, ಗಾಂಜಾ, ಮೆಥಾಪಿಟಾಮೈನ್, ವಾಹನಗಳು, ಮೊಬೈಲ್ಗಳು ಹಾಗೂ ನಗದು ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸೆ.22ರಂದು ಕಾಪು ತಾಲೂಕಿನ ಬೆಳ್ಳೆ ಗ್ರಾಮದ ಪಡುಬೆಳ್ಳೆ ಭದ್ರಮ್ಮ ರಸ್ತೆ ಬಳಿ ಎರಡು ಕಾರು ಹಾಗೂ ಸ್ಕೂಟರ್ನಲ್ಲಿ ಮಾದಕ ವಸ್ತುಗಳನ್ನು ಹೊಂದಿರುವುದಾಗಿ ದೊರೆತ ಮಾಹಿತಿಯ ಆಧಾರದಲ್ಲಿ ಶಿರ್ವ ಪೊಲೀಸರು ದಾಳಿ […]
ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ – ಕೋಚ್ ರವಿಶಾಸ್ತ್ರಿ ಭೇಟಿ

ಉಡುಪಿ: ಮಾಜಿ ಕ್ರಿಕೆಟಿಗ ಹಾಗೂ ಖ್ಯಾತ ವೀಕ್ಷಕ ವಿವರಣೆಕಾರ ರವಿಶಾಸ್ತ್ರಿ ಅವರು ಗುರುವಾರ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ರವಿಶಾಸ್ತ್ರಿ ಅವರನ್ನು ಪರ್ಯಾಯ ಶ್ರೀ ಶೀರೂರು ಮಠದ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಸ್ವಾಗತಿಸಿ, ಫಲ ಹಾಗೂ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು. ರವಿಶಾಸ್ತ್ರಿ ಅವರು ಶ್ರೀಕೃಷ್ಣನ ದರ್ಶನ ಪಡೆದು ಮಠದ ಧಾರ್ಮಿಕ ಪರಂಪರೆ ಹಾಗೂ ವ್ಯವಸ್ಥೆಗಳ ಕುರಿತು ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಮಠದ ಪಾರುಪತ್ಯೆಗಾರರಾದ […]
ಲಯನ್ಸ್ ಕ್ಲಬ್ ಪ್ರಕೃತಿ ವತಿಯಿಂದ ಸಮಾಜಮುಖಿ ಕಾರ್ಯಕ್ರಮ

ಉಡುಪಿ: ಲಯನ್ಸ್ ಕ್ಲಬ್ ಉಡುಪಿ ಪ್ರಕೃತಿ ವತಿಯಿಂದ ನಗರದ ಟೌನ್ಹಾಲ್ನಲ್ಲಿ ವಲಯ 2 ಅಧ್ಯಕ್ಷ ಶೇಖರ್ ಡಿ. ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಝೋನ್ ಸೋಶಿಯಲ್ ಕಾರ್ಯಕ್ರಮ ನಡೆಯಿತು. ಇಂಜಿನಿಯರ್ಸ್ ಡೇ ಪ್ರಯುಕ್ತ ಏಕನಾಥೇಶ್ವರಿ ಕನ್ಸ್ಟ್ರಕ್ಷನ್ ಮಾಲೀಕರಾದ ಪ್ರಾಣೇಶ್ . ಅವರನ್ನು ಸನ್ಮಾನಿಸಲಾಯಿತು. ಶ್ರೀ ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಉಡುಪಿ ಸಮಿತಿ ಎಜುಕೇಶನ್ ಟ್ರಸ್ಟ್ ವತಿಯಿಂದ ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ ಮಾನ್ಯದಲ್ಲಿರುವ ಆತ್ಮಾನಂದ ಸರಸ್ವತಿ ಐಟಿಐ ಕಾಲೇಜಿಗೆ ಧನಸಹಾಯ ನೀಡಲಾಯಿತು. ಶಿರ್ವ ಕಾಪುವಿನ ಶ್ರೀಮತಿ ಸತ್ಯವತಿ ವಿ. ಶೆಟ್ಟಿ […]
ಉಡುಪಿಯ ‘ಜಲಜ ಸ್ಕಿನ್ ಕ್ಲಿನಿಕ್’ 9ನೇ ವರ್ಷದ ಸಂಭ್ರಮ

ಉಡುಪಿ: ಚರ್ಮದ ಆರೋಗ್ಯ ಕೇವಲ ಸೌಂದರ್ಯದ ವಿಚಾರವಲ್ಲ; ಅದು ವ್ಯಕ್ತಿಯ ಆತ್ಮವಿಶ್ವಾಸಕ್ಕೂ ಸಂಬಂಧಿಸಿದೆ. ಇಂತಹ ಚರ್ಮಕ್ಕೆ ಕೆಲವೊಮ್ಮೆ ಸಮಸ್ಯೆಗಳು ಎದುರಾಗುತ್ತವೆ. ಅಂತಹ ಸಮಸ್ಯೆ ಬಂದಾಗ ಸೂಕ್ತ ವೈದ್ಯರು ಸಿಕ್ಕಿದರೆ ಭಯ ಪಡಬೇಕಿಲ್ಲ. ಮೊಡವೆ, ಕಲೆ, ಪಿಗ್ಮೆಂಟೇಶನ್, ಕೂದಲು ಉದುರುವಿಕೆ ಸೇರಿದಂತೆ ವಿವಿಧ ಚರ್ಮ ಸಂಬಂಧಿತ ಸಮಸ್ಯೆಗಳಿಗೆ ತಜ್ಞರ ಸಲಹೆ ಹಾಗೂ ಆಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಉಡುಪಿಯ ಕೊಳದಪೇಟೆಯಲ್ಲಿ ‘ಜಲಜ ಸ್ಕಿನ್ ಕ್ಲಿನಿಕ್’ ಕಾರ್ಯನಿರ್ವಹಿಸುತ್ತಿದೆ. ಸಾಯಿ ಹರ್ಷ ಸ್ಕ್ವೇರ್ನ ಮೊದಲ ಮಹಡಿಯಲ್ಲಿ ಇರುವ […]