ವಿದ್ಯಾರ್ಥಿನಿ ಅಪಹರಣ ಪ್ರಕರಣದ ಆರೋಪಿ ಮೊಹಮ್ಮದ್ ಅಕ್ರಂ ಗೆ ಪಿಎಫ್ ಐ ನಂಟು- ಎನ್ಐಎ ತನಿಖೆಗೆ ವಿಎಚ್ ಪಿ ಆಗ್ರಹ

ಉಡುಪಿ: ಉಡುಪಿಯ ಕರಂಬಳ್ಳಿಯ ನಿವಾಸಿ ಮೊಹಮ್ಮದ್ ಅಕ್ರಮ್ ಇತ್ತೀಚೆಗೆ ಜಿನಾ ಎಂಬ ಯುವತಿಯನ್ನು ಅಪಹರಿಸಿದ್ದು, ಬೆದರಿಕೆಯೊಡ್ಡಿ ಬಲವಂತವಾಗಿ ಮದುವೆಯಾಗಲು ಯತ್ನಿಸಿದ್ದಾನೆ. ಇದೊಂದು ವ್ಯವಸ್ಥಿತ ಲವ್ ಜಿಹಾದ್ ಷಡ್ಯಂತ್ರವಾಗಿದೆ. ಅಕ್ರಮ್‌ಗೆ ಪಿಎಫ್ಐ ನಂಟಿದ್ದು, ಈ ಕುರಿತು ಕೇಂದ್ರ ಸರಕಾರ ಎನ್ಐಎ ತನಿಖೆ ನಡೆಸಬೇಕೆಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಗೋರಕ್ಷ ಪ್ರಮುಖ್ ಸುನೀಲ್ ಕೆ.ಆರ್ ಆಗ್ರಹಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವತಿಯು 9ನೇ ತರಗತಿಯಲ್ಲಿ ಇದ್ದಾಗಲೇ ಅಕ್ರಮ್ ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯ ಮಾಡಿಕೊಂಡು ಆಕೆಯನ್ನು ಲವ್ ಜಿಹಾದ್ […]

ಏಪ್ರಿಲ್ 3ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ.!

ಬೆಂಗಳೂರು: ಕರ್ನಾಟಕದಲ್ಲಿ ಬಿಸಿಲ ಝಳ ಹೆಚ್ಚಾಗಿದ್ದು, ಅಲ್ಲಲ್ಲಿ ಮಳೆ ಕೂಡ ಆಗುತ್ತಿದೆ. ಏಪ್ರಿಲ್ 3ರಿಂದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಸಂಜೆ ಸಣ್ಣ ಪ್ರಮಾಣದ ಮಳೆಯಾಗಲಿದ್ದು, ನಾಳೆಯಿಂದ ಹೆಚ್ಚಾಗುವ ಸಾಧ್ಯತೆ ಇದೆ. ಇನ್ನೂ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕಾರ್ಕಳ: ಅಜೆಕಾರು ಕೊಲೆ ಪ್ರಕರಣ; ಆರೋಪಿ ದಿಲೀಪ್ ಹೆಗ್ಡೆಗೆ ಹೈಕೋರ್ಟ್ ಜಾಮೀನು

ಕಾರ್ಕಳ: ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ದೆಪ್ಪುತ್ತೆ ಬಾಲಕೃಷ್ಣ ಪೂಜಾರಿ(44) ಕೊಲೆ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆ(28)ಗೆ ರಾಜ್ಯ ಹೈಕೋರ್ಟ್ ಇಂದು ಜಾಮೀನು ನೀಡಿ ಆದೇಶಿಸಿದೆ. ದಿಲೀಪ್ ಹೆಗ್ಡೆ ಜಾಮೀನು ಅರ್ಜಿಯನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ಕಾರ್ಕಳ ಮಾ.4ರಂದು ತಿರಸ್ಕರಿಸಿದ್ದು, ಈ ಹಿನ್ನೆಲೆಯಲ್ಲಿ ಆರೋಪಿ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದನು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರ ಏಕಸದಸ್ಯ ಪೀಠ ಆರೋಪಿ ದಿಲೀಪ್ […]

ಉಡುಪಿ:ಸಾಹಿತಿ ಪ್ರಫುಲ್ಲ.ಕೆ.ವಿ ಅವರಿಗೆ ಪಿಎಚ್.ಡಿ ಪದವಿ

ಉಡುಪಿ: ಶ್ರೀಮತಿ ಪ್ರಫುಲ್ಲ.ಕೆ.ವಿ ಅವರು ಡಾ. ಉದಯಕುಮಾರ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಹಂಪಿ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ “ಯಕ್ಷಗಾನ ಅಧ್ಯಯನಗಳು: ತಾತ್ವಿಕ ಸ್ವರೂಪ ” ಎಂಬ ವಿಷಯದ ಸಂಶೋಧನಾ ಪ್ರೌಢ ಪ್ರಬಂಧವು ಪಿಯೆಚ್.ಡಿ.ಮಾನ್ಯತೆಯನ್ನು ಪಡೆದಿದೆ. ಗಮಕ ಕಲಾ ಪರಿಷತ್ತು ಉಡುಪಿ ತಾಲ್ಲೂಕು ಘಟಕದ ಕಾರ್ಯದರ್ಶಿಯಾಗಿರುವ ಇವರು ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ನಿಧಿ ಪ್ರಶಸ್ತಿಯನ್ನು ಪಡೆದಿರುವ ಸಾಹಿತಿಯಾಗಿದ್ದಾರೆ. ಮೂಲತಃ ಕಾಸರಗೋಡಿನವರಾಗಿದ್ದು ಪ್ರಸ್ತುತ ಮಣಿಪಾಲದ ಕುಂಡೇಲು ಗಣಪತಿಭಟ್ ಅವರ ಧರ್ಮಪತ್ನಿ ಹಾಗೂ ಗೃಹಿಣಿಯಾಗಿದ್ದಾರೆ.