ಉಡುಪಿ: ಎಲೆಕ್ಟ್ರಿಕಲ್, ಮೆಕ್ಯಾನಿಕಲ್ ಟೆಕ್ನಿಷಿಯನ್ ಹಾಗೂ DG ಆಪರೇಟರ್ ಹುದ್ದೆಗಳಿಗೆ ನೇಮಕಾತಿ

ಉಡುಪಿ: ಉಡುಪಿ ಜಿಲ್ಲೆಯ ರಿಫೈನರಿ ಮತ್ತು ಶಿಪ್‌ಬಿಲ್ಡಿಂಗ್ ಘಟಕಗಳಲ್ಲಿ ಕೆಲಸ ಮಾಡಲು ಎಲೆಕ್ಟ್ರಿಕಲ್ ಟೆಕ್ನಿಷಿಯನ್, ಮೆಕ್ಯಾನಿಕಲ್ ಟೆಕ್ನಿಷಿಯನ್ ಹಾಗೂ DG ಆಪರೇಟರ್ ಹುದ್ದೆಗಳಿಗೆ ತಕ್ಷಣದ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಎಲೆಕ್ಟ್ರಿಕಲ್ ಅಥವಾ ಮೆಕ್ಯಾನಿಕಲ್ ವಿಭಾಗದಲ್ಲಿ ITI ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರುವ ಹಾಗೂ ಕಾರ್ಯಾಚರಣೆ ಅಥವಾ ನಿರ್ವಹಣೆ (Operation/Maintenance) ಕ್ಷೇತ್ರದಲ್ಲಿ ಕನಿಷ್ಠ ಎರಡು ವರ್ಷಗಳ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೇತನ 20,000 ರಿಂದ 25,000 ತನಕ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಅನುಭವಕ್ಕೆ ಅನುಗುಣವಾಗಿ ಆಕರ್ಷಕ […]

ಯುವ ಚೇತನ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ: ವಾರ್ಷಿಕ 27 ಕೋ.ರೂ. ವ್ಯವಹಾರ

ಉಡುಪಿ: ಯುವ ಚೇತನ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಕುಂಜಿಬೆಟ್ಟಿನ ಎ.ವಿ. ಆರ್ಕೇಡ್ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಅಶ್ವಿನಿ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಅನಂತರ ಮಾತನಾಡಿದ ಅವರು ಸದಸ್ಯರ ಸಹಕಾರದಿಂದ ಸಂಘವು ಪ್ರಗತಿಯತ್ತ ಸಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ 27 ಕೋಟಿ ರೂ. ವ್ಯವಹಾರ ನಡೆಸಿ 1.85 ಲಕ್ಷ ರೂ. ಲಾಭ ಗಳಿಸಿರುವುದು ಸಂತಸದ ಬೆಳವಣಿ ಮುಂದಿನ ದಿನಗಳಲ್ಲಿ ಎಲ್ಲ ಸದಸ್ಯರ ಸಹಕಾರದಲ್ಲಿ ಇನ್ನು ಹೆಚ್ಚು ಅಭಿವೃದ್ಧಿ ಸಾಗಬೇಕಾಗಿದೆ ಎಂದರು. ಉಪಾಧ್ಯಕ್ಷ ಶ್ರೀನಿವಾಸ್ […]

ಜನಸಾಮಾನ್ಯರ ವಾಹನಗಳ ಸುರಕ್ಷಿತ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕ ಎಲ್ಲಾ ರಸ್ತೆಗಳಲ್ಲಿ ಜನಸಾಮಾನ್ಯರ ವಾಹನಗಳು ಸುರಕ್ಷಿತವಾಗಿ ಸಂಚರಿಸಲು ಅಗತ್ಯವಿರುವ ಎಲ್ಲಾ ರೀತಿಯ ರಸ್ತೆ ಅಭಿವೃದ್ಧಿ ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ಅಪಘಾತ ಪ್ರಕರಣಗಳು ಆಗದಂತೆ ಕ್ರಮವಹಿಸಬೇಕೆಂದು ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸಾರ್ವಜನಿಕ ವಾಹನಗಳು ಸಂಚರಿಸುವಾಗ ಪ್ರಾಧಿಕಾರದ ವತಿಯಿಂದ ನಗರ ಹಾಗೂ ನಗರದ ಹೊರ […]

ಯುವತಿ ನಾಪತ್ತೆ

ಉಡುಪಿ: ನಗರದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತೀಕ್ಷಾ (18) ಎನ್ನುವ ಯುವತಿಯು ಆಗಸ್ಟ್ 5 ರಂದು ಮನೆಯಿಂದ ನಾಪತ್ತೆಯಾಗಿದ್ದು ಈವರೆಗೂ ಮನಗೆ ವಾಪಸ್ಸು ಬಂದಿರುವುದಿಲ್ಲ. 5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಂ: 0820-2526444, ಪಿಐ:9480805458, ಪಿಎಸ್‌ಐ:8277988949, 8277988950, ಮಹಿಳಾ ಪೊಲೀಸ್ ಠಾಣೆ: 0820-2525599 ಅನ್ನು ಸಂಪರ್ಕಿಸುವoತೆ ಮಹಿಳಾ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ […]

ಪೌರ ಕಾರ್ಮಿಕರ ದಿನಾಚರಣೆ: ಉಡುಪಿಯಲ್ಲಿ ಅದ್ಧೂರಿ ಮೆರವಣಿಗೆ

ಉಡುಪಿ: ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಉಡುಪಿ ನಗರದಲ್ಲಿ ಬುಧವಾರ ಅದ್ಧೂರಿ ಮೆರವಣಿಗೆ ನಡೆಯಿತು. ನಗರದ ಪ್ರಮುಖ ಬೀದಿಗಳ ಮೂಲಕ ಅಜ್ಜರಕಾಡು ಪುರಭವನದವರೆಗೆ ನಡೆದ ಮೆರವಣಿಗೆಯಲ್ಲಿ ಪೌರ ಕಾರ್ಮಿಕರು ಹಾಗೂ ನಗರಸಭೆಯ ಅಧಿಕಾರಿಗಳು ಪಾಲ್ಗೊಂಡರು. ಡಿಜೆ ಹಾಡು ಹಾಗೂ ಸಾಂಪ್ರದಾಯಿಕ ಡೋಲು ವಾದ್ಯದ ಸದ್ದಿಗೆ ಪೌರ ಕಾರ್ಮಿಕರು ಹೆಜ್ಜೆ ಹಾಕಿ, ಹಾಡು–ಕುಣಿತದೊಂದಿಗೆ ಸಂಭ್ರಮಿಸಿದರು. ಪೌರ ಕಾರ್ಮಿಕರ ದಿನಾಚರಣೆಯ ಹಿನ್ನೆಲೆಯಲ್ಲಿ ನಗರದಲ್ಲಿ ಹಬ್ಬದ ವಾತಾವರಣ ಕಂಡುಬಂತು.