ಅಕ್ರಮ ಕೆಂಪುಕಲ್ಲು ಗಣಿಗಾರಿಕೆ: ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಬೈಂದೂರು ತಾಲ್ಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು ಬುಧವಾರ ದಾಳಿ ನಡೆಸಿ, ₹16 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾಲ್ತೋಡು ಬೀಟ್ ಅಧಿಕಾರಿಯಿಂದ ದೊರೆತ ಮಾಹಿತಿಯ ಮೇರೆಗೆ ಬೈಂದೂರು ಠಾಣೆಯ ಪಿಎಸ್ಐ ಸುನಿಲ್ ಕುಮಾರ್ ಅವರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಯನ್ನು ಸ್ಥಳಕ್ಕೆ ಕರೆಸಿಕೊಂಡು, ಸೆ.23ರಂದು ಮಧ್ಯಾಹ್ನ 1.15ಕ್ಕೆ ದಾಳಿ ನಡೆಸಿದರು. ಈ ವೇಳೆ ಕೆಂಪುಕಲ್ಲು ತುಂಬಿದ್ದ ಎರಡು ಟಿಪ್ಪರ್ಗಳು, ಬ್ಲೇಡ್ […]
ಭಕ್ತರ ಸಹಕಾರದಿಂದ ಗಣೇಶೋತ್ಸವ ಯಶಸ್ವಿ: ಕೃಷ್ಣಮೂರ್ತಿ ಆಚಾರ್ಯ

ಉಡುಪಿ: ಕನ್ನರ್ಪಾಡಿ–ಕಿನ್ನಿಮುಲ್ಕಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ವತಿಯಿಂದ ಕಿನ್ನಿಮುಲ್ಕಿ ಸ್ವಾಗತ ಗೋಪುರದ ಬಳಿಯ ಗಣಪತಿ ಮೈದಾನದಲ್ಲಿ ನಡೆದ 21ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಮಾರೋಪ ಸಮಾರಂಭ ನಡೆಯಿತು. ಸಮಿತಿಯ ಕೆ. ಕೃಷ್ಣಮೂರ್ತಿ ಆಚಾರ್ಯ ಮಾತನಾಡಿ, 10 ದಿನಗಳ ಗಣೇಶೋತ್ಸವವನ್ನು ಯಶಸ್ವಿಯಾಗಿ ಆಚರಿಸಲು ಭಕ್ತರ ಸಹಕಾರವೇ ಪ್ರಮುಖ ಕಾರಣವಾಗಿದೆ. ಉತ್ಸವದ ಅಂಗವಾಗಿ ಸುಮಾರು ಒಂದು ಸಾವಿರ ಕಲಾವಿದರಿಗೆ ವೇದಿಕೆ ಕಲ್ಪಿಸಲಾಗಿದ್ದು, ತಾಳಮದ್ದಲೆ, ಭಜನೆ, ಯಕ್ಷಗಾನ, ಭರತನಾಟ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಲಾ ಪ್ರಕಾರಗಳ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದೆ ಎಂದರು. […]
ಕುಂದಾಪುರ: ಕೋಟೇಶ್ವರ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ

ಉಡುಪಿ: ಕುಂದಾಪುರ ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದ್ದು ಬುಧವಾರ ಬೆಳಿಗ್ಗೆ ಮೃತದೇಹವನ್ನು ಹುಡುಕಿ ಮೇಲಕ್ಕೆತ್ತಲಾಯಿತು. ಕೋಟೇಶ್ವರ ಸಮೀಪದ ಹೊದ್ರಾಳಿ ಕೊಳನಕಟ್ಟೆ ನಿವಾಸಿ ಮಹಾಬಲ ಆಚಾರ್ಯ ಅವರ ಪುತ್ರ ಪದ್ಮನಾಭ ಆಚಾರ್ಯ (37) ಆತ್ಮಹತ್ಯೆ ಮಾಡಿಕೊಂಡವರು. ಘಟನೆ ವಿವರ: ಕುಂದಾಪುರದ ಹೆಂಚಿನ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಪದ್ಮನಾಭ ಅವರು ಕಳೆದ ನಾಲ್ಕು ತಿಂಗಳಿನಿಂದ ಯಾವುದೇ ಕೆಲಸಕ್ಕೆ ಹೋಗುತ್ತಿರಲಿಲ್ಲ. ಮಂಗಳವಾರ ಬೆಳಿಗ್ಗೆ ಮನೆಯಿಂದ ಅವರು ತೆರಳಿದ್ದು ರಾತ್ರಿಯಾದರೂ ಮನೆಗೆ […]
ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ಜಿಎಸ್ಬಿ ಸಮಾಜ ಹಿತರಕ್ಷಣಾ ವೇದಿಕೆ ಆಸರೆ _30 ವಿದ್ಯಾರ್ಥಿಗಳಿಗೆ ತಲಾ ₹3,000 ವಿದ್ಯಾರ್ಥಿವೇತನ ಹಾಗೂ ಮಾಹೆ ಶೈಕ್ಷಣಿಕ ಕಿಟ್ ವಿತರಣೆ

ಸಾಣೂರು:ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹ ನೀಡುವ ಉದ್ದೇಶದಿಂದ ಜಿಎಸ್ಬಿ ಸಮಾಜ ಹಿತರಕ್ಷಣಾ ವೇದಿಕೆ (ರಿ.) ಉಡುಪಿ ಜಿಲ್ಲೆ ವತಿಯಿಂದ ಆಯೋಜಿಸಲಾದ 4ನೇ ವರ್ಷದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ಸಾಣೂರು ಸರಕಾರಿ ಪದವಿ ಪೂರ್ವ ವಿದ್ಯಾಲಯದ ಸಭಾಭವನದಲ್ಲಿ ಸೆಪ್ಟೆಂಬರ್ 22 ಮಂಗಳವಾರ ಮಧ್ಯಾಹ್ನ ನಡೆಯಿತು. ಸಾಣೂರು ಸರಕಾರಿ ಪ್ರೌಢಶಾಲೆಯ 10ನೇ ತರಗತಿಯ 10 ಮಂದಿ, ಸಾಣೂರು ಸರಕಾರಿ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿಯ 10 ಮಂದಿ ಹಾಗೂ ದ್ವಿತೀಯ ಪಿಯುಸಿಯ 10 ಮಂದಿ, […]
UDUPI: OFFICE SPACE FOR RENT

UDUPI: OFFICE SPACE FOR RENT Facilities Offered: For More Details: Business Bay DevelopersKunjibettu, Udupi-Manipal Road