ವಿವಿಧ ಯೋಜನೆ: ಅರ್ಜಿ ಆಹ್ವಾನ
ಉಡುಪಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ನಿಗಮದ ವತಿಯಿಂದ 2024-25ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ, ಮೈಕ್ರೋ ಕ್ರೆಡಿಟ್ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಿಗೆ ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಂದ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ ಅಥವಾ ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 23 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ […]
ಕನ್ನಡ ಭಾಷೆ ಪ್ರತಿಯೊಬ್ಬರ ಹೆಗ್ಗಳಿಕೆ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ
ಉಡುಪಿ: ಕನ್ನಡ ನಾಡು ನುಡಿಯ ಕುರಿತು ಅಭಿಮಾನವನ್ನು ಮೂಡಿಸುವ ಉದ್ದೇಶದಿಂದ “ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ”ಯು ಪ್ರತಿ ಜಿಲ್ಲೆಗಳಿಗೆ ಸಂಚರಿಸುತ್ತಿದ್ದು, ಅನೇಕ ಶತಮಾನಗಳ ಇತಿಹಾಸವನ್ನು ಹೊಂದಿದ ಕನ್ನಡ ನಾಡು ಹಾಗೂ ಕನ್ನಡ ಭಾಷೆ ಪ್ರತಿಯೊಬ್ಬರ ಹೆಗ್ಗಳಿಕೆಯಾಗಿದೆ ಎಂದು ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಕ್ಕೆ ಸ್ವಾಗತ ಕೋರಿ, ಚಂಡೆ […]
ವಕ್ಫ್ ಬೋರ್ಡ್ ನ ಲ್ಯಾಂಡ್ ಜಿಹಾದ್ ವಿರುದ್ಧ ಬೈಂದೂರು ಬಿಜೆಪಿ ಮಂಡಲದಿಂದ ಧರಣಿ
ಉಡುಪಿ: ಬೈಂದೂರು ಬಿಜೆಪಿ ಮಂಡಲ ವತಿಯಿಂದ ವಕ್ಫ್ ಬೋರ್ಡ್ ನ ಲ್ಯಾಂಡ್ ಜಿಹಾದ್ ವಿರುದ್ಧ ಬೈಂದೂರಿನಲ್ಲಿ ಬ್ರಹತ್ ಪ್ರತಿಭಟನೆ ನಡೆಯಿತು.ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆ, ವಕ್ಫ್ ಬೋರ್ಡ್ ನ ಲ್ಯಾಂಡ್ ಜಿಹಾದ್ ವಿರುದ್ದ ಬೈಂದೂರು ತಾಲೂಕು ಆಡಳಿತ ಕಚೇರಿ ಎದುರು ಧರಣಿ ಹಮ್ಮಿಕೊಳ್ಳಲಾಗಿತ್ತು. ಬೈಂದೂರು ಶಾಸಕ ಗುರುರಾಜ್ ಗಂಟೆಹೊಳೆ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ, ಕೇಂದ್ರ ಸರ್ಕಾರ ವಕ್ಫ್ ಬೋರ್ಡ್ ನ ಅನಧಿಕೃತ ಚಟುವಟಿಕೆ ನಿಯಂತ್ರಣಕ್ಕೆ ಕಠಿಣ ಕಾನೂನು ಕುರಿತು ಕಳೆದ ಒಂದು ವರ್ಷದಿಂದ ವಿಮರ್ಶೆ […]
ಹೆಜಮಾಡಿ: ಕುಡಿದ ಮತ್ತಿನಲ್ಲಿ ಕಂಬಕ್ಕೆ ಡಿಕ್ಕಿ ಹೊಡೆದ ಚಾಲಕ
ಉಡುಪಿ: ಕುಡಿದ ಮತ್ತಿನಲ್ಲಿ ಅತೀ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದು ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕಾಪು ತಾಲೂಕಿನ ಹೆಜಮಾಡಿ ಟೋಲ್ ಗೇಟ್ ಸಮೀಪ ಸಂಭವಿಸಿದೆ. ಕೇರಳ ನೋಂದಣಿ ಸಂಖ್ಯೆಯ ಕಾರಿನಲ್ಲಿ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದು, ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದರು. ಮೊದಲು ಪಾಂಗಾಳ ಸಮೀಪ ವಾಹನವೊಂದಕ್ಕೆ ಡಿಕ್ಕಿ ಹೊಡೆದಿದ್ದಾರೆ. ಅಲ್ಲಿ ಕಾರು ನಿಲ್ಲಿಸದೆ ಪರಾರಿಯಾಗುತ್ತಿದ್ದವರನ್ನು ಪೊಲೀಸರು ಬೆನ್ನಟ್ಟಿದ್ದಾರೆ. ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಹೆಜಮಾಡಿ ಟೋಲ್ ಗೇಟ್ ಬಳಿ ಕಂಬವೊಂದಕ್ಕೆ ಗುದ್ದಿದ್ದಾರೆ. ಬಳಿಕ ಪೊಲೀಸರು […]
ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ವಂಚನೆ: ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ
ಕುಂದಾಪುರ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಮಾಡಿ ವಂಚಿಸಿದ ಆರೋಪಿಗೆ ನ್ಯಾಯಾಲಯ 20 ವರ್ಷ ಕಠಿನ ಸಜೆ ನೀಡಿದೆ. 17ರ ಹರೆಯದ ನೊಂದ ಬಾಲಕಿಯನ್ನು ಕಾಲೇಜಿಗೆ ಹೋಗುವಾಗ ಸಂಪರ್ಕಿಸಿದ ಮಿಥುನ್ (21) ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದೊಯ್ದು ಆಕೆಯ ಇಚ್ಛೆಗೆ ವಿರುದ್ಧವಾಗಿ ದೈಹಿಕ ಸಂಪರ್ಕ ನಡೆಸಿದ್ದ. ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಕರೆದೊಯ್ದಾಗ ಗರ್ಭಿಣಿ ಎಂದು ಗೊತ್ತಾಗಿತ್ತು. ಆಕೆಯ ತಂದೆ ನೀಡಿದ್ದ ದೂರಿನ ಮೇಲೆ ಕುಂದಾಪುರ ಇನ್‌ಸ್ಪೆಕ್ಟರ್ ನಂದಕುಮಾರ್ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ […]