ತ್ರಿಶಾ ಕ್ಲಾಸಸ್: ಸಿಎ ಫೌಂಡೇಷನ್ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ

ಕಟಪಾಡಿ: ತ್ರಿಶಾ ಕ್ಲಾಸಸ್ ವತಿಯಿಂದ ಸಿಎ ಫೌಂಡೇಷನ್ ವಿದ್ಯಾರ್ಥಿಗಳಿಗೆ ಒರಿಯಂಟೇಶನ್ ಕಾರ್ಯಕ್ರಮವು ಸೆಪ್ಟೆಂಬರ್ ೨೦ರಂದು ಕಾಲೇಜ್ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಜ್ಯೋತಿ ಬೆಳಗಿಸುವ ಮೂಲಕ ಈ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸಿ.ಎ. ನಾಗೇಂದ್ರ ಭಕ್ತ ಅವರು ವಿದ್ಯರ್ಥಿಗಳ ಉಜ್ವಲ ಭವಿಷ್ಯದ ಬಗ್ಗೆ ಅಮೂಲ್ಯ ವಿಚಾರ ಹಾಗೂ ಮರ್ಗರ್ಶನ ನೀಡಿದರು.ಕಾರ್ಯಕ್ರಮದಲ್ಲಿ ತ್ರಿಶಾ ಸಂಸ್ಥೆಯ ಟ್ರಸ್ಟಿಗಳಾದ ರಾಮ್ ಪ್ರಭು, ಅಕಾಡೆಮಿಕ್ ಮ್ಯಾನೇಜರ್ ಶ್ರೀ ಶಾಂತ ಪ್ರಿಯ, ತ್ರಿಶಾ ಕಾಲೇಜ್ ಆಫ್ ಕಾರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್ ನ […]
ಅಂಬಿಕಾ ಎನ್ ಅವರಿಗೆ ಪಿ.ಎಚ್.ಡಿ ಪದವಿ

ಕಾರ್ಕಳ: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂಗ ಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಗಣಿತಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಅಂಬಿಕಾ ಎನ್, ಇವರು ಎ.ಜೆ ತಾಂತ್ರಿಕ ಮಹಾವಿದ್ಯಾಲಯದ, ಗಣಿತಶಾಸ್ತ್ರ ವಿಭಾಗದಲ್ಲಿ ಪ್ರಾಧ್ಯಾಪಕಿ ಹಾಗೂ ವಿಭಾಗ ಮುಖ್ಯಸ್ಥೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ.ಶಾಂತಾ ಕುಮಾರಿ.ಕೆ, ಇವರ ಮಾರ್ಗದರ್ಶನದಲ್ಲಿ ನಡೆಸಿದ ಸಂಶೋಧನೆ ಮತ್ತು ಮಹಾಪ್ರಬಂಧ “ಕಾಂಟ್ರಿಬ್ಯುಶನ್ಸ್ ಟು ದ ಥಿಯರಿ ಆಫ್ ಜನರಲೈಸ್ಡ್ ಹೈಪೆರ್ ಜಿಯೋಮೆಟ್ರಿಕ್ ಫಂಕ್ಷನ್ ವಿದ್ ದೆಯರ್ ಅಪ್ಲಿಕೇಷನ್ಸ್” ಕ್ಕೆ ವಿಶ್ವೇಶ್ವರಯ್ಯ […]
ಪಂಚಮಿ ಸೌಹಾರ್ದ ಸಹಕಾರಿ ಸಂಘ ನಿಯಮಿತ; ವಾರ್ಷಿಕ ಸಭೆ

ಉಡುಪಿ: ಪಂಚಮಿ ಸೌಹಾರ್ದ ಸಹಕಾರಿ ಸಂಘ ನಿಯಮಿತ, ಉಡುಪಿ ಇದರ 9ನೇ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸೆ.19 ರಂದು ಅಪರಾಹ್ನ 3.00 ಗಂಟೆಗೆ, ಕುಂಜಿಬೆಟ್ಟುವಿನ ಶಾರದಾ ಮಂಟಪದಲ್ಲಿ, ಸಂಘದ ಅಧ್ಯಕ್ಷರಾದ ಸತ್ಯಪ್ರಸಾದ್ ಶೆಣೈ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಸಂಘದ ಉಪಾಧ್ಯಕ್ಷರಾದ ಕೆ. ಹರೀಶ್ ಪ್ರಭು ಅವರು ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸ್ವಾತಿ ಅವರು ವಾರ್ಷಿಕ ವರದಿಯನ್ನು ಸಭೆಯಲ್ಲಿ ವಾಚಿಸಿದರು. ಸಭೆಯಲ್ಲಿ ನಿರ್ದೇಶಕರಾದ ಸಂಜೀವ ಪ್ರಭು, ಸುರೇಂದ್ರ ನಾಯಕ್, ರಾಘವೇಂದ್ರ ನಾಯಕ್, […]
ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಮಹಾಸಭೆ: ಸರಕಾರದ ಸಾಮಾಜಿಕ ಭದ್ರತಾ ಮಂಡಳಿಯ ಸೌಲಭ್ಯ ಬಳಸಿಕೊಳ್ಳಿ; ಅಲ್ತಾಫ್ ಅಹಮದ್

ಉಡುಪಿ: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಜಾರಿಗೊಳಿಸುತ್ತಿರುವ ವಿವಿಧ ಯೋಜನೆಗಳ ಜೊತೆಗೆ ಕಾರ್ಮಿಕ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳ ಮಾಹಿತಿಯನ್ನು ಪಡೆದುಕೊಂಡು ಸದುಪಯೋಗ ಪಡೆದುಕೊಳ್ಳಿ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್ ರವರು ಸಲಹೆ ನೀಡಿದರು. ಅವರು ಉಡುಪಿಯ ಜಗನ್ನಾಥ ಸಭಾಭವನದಲ್ಲಿ ಉಡುಪಿ ಜಿಲ್ಲಾ ಗ್ಯಾರೇಜ್ ಮಾಲೀಕರ ಸಂಘ ಉಡುಪಿ ಇವರು ಆಯೋಜಿಸಿರುವ ವರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ, ಹಾಗು ರಿಕ್ಷಾ ಗ್ಯಾರೇಜುಗಳ ನೂತನ ದರಪಟ್ಟಿಯನ್ನು ಬಿಡುಗಡೆಗೊಳಿಸಿ ಮಾತನಾಡುತಿದ್ದರು. ಉಡುಪಿ […]
ಭಕ್ತಿಭಾವದ ನಡುವೆ ಕಡಿಯಾಳಿ ಗಣಪನಿಗೆ ಜಲಸ್ತಂಭನ

ಉಡುಪಿ: ‘ಉಡುಪಿಯ ರಾಜ’ ಖ್ಯಾತಿಯ ಕಡಿಯಾಳಿ ಉಡುಪಿ ಸಾರ್ವಜನಿಕ ಗಣೇಶೋತ್ಸವದ ಸಂಕಷ್ಟಹರ ಗಣಪತಿ ವಿಗ್ರಹದ ಜಲಸ್ತಂಭನ ಮಲ್ಪೆ ಕಡಲ ಕಿನಾರೆಯಲ್ಲಿ ನೆರವೇರಿತು. ಕಡಿಯಾಳಿಯಿಂದ ಆರಂಭಗೊಂಡ ವಿಸರ್ಜನಾ ಮೆರವಣಿಗೆ ಕಲ್ಸಂಕ, ಕೃಷ್ಣಮಠ ಸೇರಿದಂತೆ ನಗರದ ವಿವಿಧ ಮಾರ್ಗಗಳಲ್ಲಿ ಸಾಗಿತು. ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಭಕ್ತರು ಗಣಪತಿಯ ಶೋಭಾಯಾತ್ರೆಯನ್ನು ಭಕ್ತಿಭಾವದಿಂದ ವೀಕ್ಷಿಸಿದರು. ಮೆರವಣಿಗೆಯುದ್ದಕ್ಕೂ ವಿವಿಧ ಸಾಂಸ್ಕೃತಿಕ ತಂಡಗಳು, ವಾದ್ಯಮೇಳಗಳು ಗಮನ ಸೆಳೆದವು. ಕೃಷ್ಣಮಠದ ಸಮೀಪ ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಸಂಕಷ್ಟಹರ ಗಣಪತಿಗೆ ಮಂಗಳಾರತಿ ಬೆಳಗಿದರು. ವಜ್ರಮಹೋತ್ಸವದ […]