ಶಿರ್ವ: ಮೇಯಲು ಬಿಟ್ಟಿದ್ದ ದನ ಕಳವು: ನಾಲ್ವರು ಆರೋಪಿಗಳ ಬಂಧನ

ಉಡುಪಿ: ಮೇಯಲು ಬಿಟ್ಟಿದ್ದ ದನಗಳನ್ನು ಟೆಂಪೋದಲ್ಲಿ ಹಿಂಸಾತ್ಮಕವಾಗಿ ಕಟ್ಟಿಹಾಕಿ ಸಾಗಿಸುತ್ತಿದ್ದ ಆರೋಪದಡಿ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ್ದ ಟೆಂಪೋ ಹಾಗೂ ದನವನ್ನು ವಶಪಡಿಸಿಕೊಂಡಿದ್ದಾರೆ. ಕಳತ್ತೂರು ಗ್ರಾಮದ ನಡಿಗುತ್ತು ಎಂಬಲ್ಲಿ ಸೆ.19ರಂದು ಸಂಜೆ ವಸಂತಿ ಸುನೀತಾ ಕ್ವಾಡ್ರಸ್‌ ಅವರು ಮೇಯಲು ಬಿಟ್ಟಿದ್ದ ಐದು ದನಗಳ ಪೈಕಿ ಎರಡು ವರ್ಷದ ಕಪ್ಪು ಬಣ್ಣದ ದನವೊಂದು ಕಾಣೆಯಾಗಿತ್ತು. ಹುಡುಕಾಟ ನಡೆಸಿದಾಗ ಸಮೀಪದಲ್ಲಿದ್ದ ಟೆಂಪೋದಲ್ಲಿ ತಮ್ಮ ದನದೊಂದಿಗೆ ಮತ್ತೊಂದು ದನವನ್ನೂ ಹಿಂಸಾತ್ಮಕವಾಗಿ ಕಟ್ಟಿಹಾಕಿರುವುದು ಕಂಡುಬಂದಿತ್ತು. ಟೆಂಪೋ ನೋಂದಣಿ ಸಂಖ್ಯೆ ಪರಿಶೀಲಿಸಿದಾಗ KA […]

ಮಂಗಳೂರು ವಾಟರ್ ಮೆಟ್ರೋ ಯೋಜನೆಗೆ ವೇಗ: 11 ನಿಲ್ದಾಣ ಫೈನಲ್ !

ಮಂಗಳೂರು: ನಗರದ ಸಾರಿಗೆ ವ್ಯವಸ್ಥೆಗೆ ಹೊಸ ಆಯಾಮ ನೀಡುವ ನಿರೀಕ್ಷೆ ಮೂಡಿಸಿರುವ ಪ್ರಸ್ತಾವಿತ ಮಂಗಳೂರು ವಾಟರ್ ಮೆಟ್ರೋ ಯೋಜನೆ ಮತ್ತಷ್ಟು ವೇಗ ಪಡೆದುಕೊಂಡಿದೆ. ಯೋಜನೆಯಡಿ ಪ್ರಸ್ತಾವಿಸಲಾಗಿದ್ದ 19 ನಿಲ್ದಾಣಗಳ ಪೈಕಿ 11 ನಿಲ್ದಾಣಗಳನ್ನು ಮಂಗಳೂರು ಬಂದರು ಮತ್ತು ಮೀನುಗಾರಿಕಾ ಉಪವಿಭಾಗ ಅಂತಿಮಗೊಳಿಸಿದೆ. ನಗರ ಸಾರಿಗೆ ವ್ಯವಸ್ಥೆಯ ಜತೆಗೆ ಬಂದರು ಹಾಗೂ ಕರಾವಳಿ ಪ್ರದೇಶಗಳ ನಡುವಿನ ಸಂಪರ್ಕವನ್ನು ಸುಧಾರಿಸುವ ಉದ್ದೇಶವನ್ನು ವಾಟರ್ ಮೆಟ್ರೋ ಯೋಜನೆ ಹೊಂದಿದೆ. ಹಳೆ ಮಂಗಳೂರು ಬಂದರು, ಪೋರ್ಟ್ ಫೆರಿ, ಸ್ಯಾಂಡ್‌ಬಾರ್, ತೋಟ ಬೆಂಗ್ರೆ, ಹೊಯ್ಗೆ […]

ಕಾರ್ಕಳ: ಪದವಿಪೂರ್ವ ವಿಭಾಗದ ತ್ರೋಬಾಲ್‍ನಲ್ಲಿ ಕ್ರೈಸ್ಟ್ ಕಿಂಗ್’ನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಪದವಿಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಇವರ ವತಿಯಿಂದ ಸರಕಾರಿ ಪದವಿಪೂರ್ವ ಕಾಲೇಜು ಬೆಳ್ಮಣ್ ಇಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪದವಿಪೂರ್ವ ಬಾಲಕರ ವಿಭಾಗದ ಮತ್ತು ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್‍ಕಿಂಗ್ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ವಿಭಾಗದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ದೀಪ್ತಿ ಶೆಟ್ಟಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾದರೆ, ಬಾಲಕರ ವಿಭಾಗದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಶೇಕ್ ಇಮಾದ್, ಪ್ರಥಮ ವಾಣಿಜ್ಯ ವಿಭಾಗದ ಗಗನ್ ಶೆಟ್ಟಿ ಜಿಲ್ಲಾಮಟ್ಟಕ್ಕೆ […]

ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟಕ್ಕೆ ಆಯ್ಕೆ.

ಕುಂದಾಪುರ: ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ರಶ್ಮಿ 57 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಕುಸ್ತಿ ಪಟು ಆಗಿರುವ ಕೃಷ್ಣ ವಿದ್ಯಾರ್ಥಿನಿಗೆ ತರಬೇತಿ ನೀಡಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿ, ಮುಂದಿನ ಹಂತದ ಸ್ಪರ್ಧೆಗೂ […]

ಮಣಿಪಾಲ: ಸೆ.21ರಿಂದ 26ರವರೆಗೆ ಉಚಿತ ಪ್ರೊಸ್ಟೇಟ್ ಆರೋಗ್ಯ ತಪಾಸಣೆ, ಸಲಹಾ ಶಿಬಿರ

ಮಣಿಪಾಲ: ಪ್ರೊಸ್ಟೇಟ್ ಜಾಗೃತಿ ಮಾಸಾಚರಣೆ ಅಂಗವಾಗಿ ಮಣಿಪಾಲದ ಮುನಿಯಾಲ್ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಶಲ್ಯತಂತ್ರ ವಿಭಾಗದ ವತಿಯಿಂದ ಸೆ. 21ರಿಂದ 26ರವರೆಗೆ ಬೆಳಗ್ಗೆ 9ರಿಂದ ಸಂಜೆ 4.30ರವರೆಗೆ ಉಚಿತ ಪ್ರೊಸ್ಟೇಟ್ ಆರೋಗ್ಯ ತಪಾಸಣೆ ಹಾಗೂ ಸಲಹಾ ಶಿಬಿರವನ್ನು ಆಯೋಜಿಸಲಾಗಿದೆ. ಪುರುಷರಲ್ಲಿ ಕಂಡುಬರುವ ಪದೇಪದೇ ಮೂತ್ರ ವಿಸರ್ಜನೆ, ಮೂತ್ರ ವಿಸರ್ಜನೆಗೆ ತುರ್ತು ಭಾವನೆ, ಮೂತ್ರ ತೊಟ್ಟಿಕ್ಕುವುದು, ಮೂತ್ರದ ಹರಿವು ಕಡಿಮೆಯಾಗುವುದು, ಮೂತ್ರ ವಿಸರ್ಜನೆ ಆರಂಭಿಸಲು ತೊಂದರೆ, ಮೂತ್ರಕೋಶ ಸಂಪೂರ್ಣ ಖಾಲಿಯಾಗದಿರುವ ಭಾವನೆ ಹಾಗೂ ಸೊಂಟ ಮತ್ತು […]