ವಕ್ಫ್ ಬೋರ್ಡ್ ‘ಲ್ಯಾಂಡ್ ಜಿಹಾದ್’ ಖಂಡಿಸಿ ಬಿಜೆಪಿ ಪ್ರತಿಭಟನೆ

ಉಡುಪಿ: ವಕ್ಫ್ ಬೋರ್ಡ್ ‘ಲ್ಯಾಂಡ್ ಜಿಹಾದ್’ ಖಂಡಿಸಿ ಮತ್ತು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತು. ಮಣಿಪಾಲದ ಕಾಯಿನ್ ಸರ್ಕಲ್ ನಿಂದ ಪ್ರತಿಭಟನಾ ಪಾದಯಾತ್ರೆ ನಡೆಸಿದ ನೂರಾರು ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ಅಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು. ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಪೊಲೀಸರ ಬಿಗಿ ಭದ್ರತೆಯ ನಡುವೆಯೇ ಜಿಲ್ಲಾಧಿಕಾರಿ ಕಚೇರಿಗೆ ಪ್ರತಿಭಟನಕಾರರು ನುಗ್ಗಿದರು. ರಾಜ್ಯ ಸರಕಾರದ […]

ಕಟಪಾಡಿಯ ತ್ರಿಶಾ ಕ್ಲಾಸಸ್ ನಲ್ಲಿ ಸಿಎ ಇಂಟರ್ಮೀಡಿಯಟ್ ಮಾಹಿತಿ ಕಾರ್ಯಾಗಾರ

ಕಟಪಾಡಿ:ಸಿಎ, ಸಿ ಎಸ್ ಮುಂತಾದ ವೃತ್ತಿಪರ ಕೋರ್ಸ್ ಗಳಿಗೆ ಗುಣಮಟ್ಟದ ತರಬೇತಿಯನ್ನು ನೀಡುತ್ತಾ‌ ಬಂದಿರುವ ತ್ರಿಶಾಸಂಸ್ಥೆಯ ವತಿಯಿಂದ ಸಿಎ ಇಂಟರ್ಮೀಡಿಯಟ್ ಮಾಹಿತಿ ಕಾರ್ಯಾಗಾರವು ನವೆಂಬರ್ 9 ರಂದು ಪೂರ್ವಾಹ್ನ 10ಗಂಟೆಗೆ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ನಡೆಯಲಿದೆ. ತರಗತಿಯ ವಿಶೇಷತೆಗಳು : ಆಸಕ್ತರು ಉಡುಪಿಯ ಕೋರ್ಟ್ ಮುಂಭಾಗದಲ್ಲಿರುವ ತ್ರಿಶಾ ಕ್ಲಾಸಸ್ ಕಛೇರಿ ಅಥವಾ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿಗೆ ಭೇಟಿ ನೀಡಬಹುದು ಎಂದು ಸಂಸ್ಥೆ ಪ್ರಕಟಣೆ ತಿಳಿಸಿದೆ.

ಉಡುಪಿ :ಗ್ರಾಮ ಪಂಚಾಯತ್‌ಗಳ ಉಪಚುನಾವಣೆ ವೇಳಾಪಟ್ಟಿ ಪ್ರಕಟ

ಉಡುಪಿ : ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಲ್ಲಿ ಸದಸ್ಯರ ರಾಜೀನಾಮೆ, ನಿಧನ ಮುಂತಾದ ಕಾರಣಗಳಿಂದ ಆಕಸ್ಮಿಕವಾಗಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮೂಲಕ ಭರ್ತಿ ಮಾಡಲು ಕುಂದಾಪುರ ತಾಲೂಕಿನ 35-ಅಮಾಸೆಬೈಲು ಗ್ರಾಮ ಪಂಚಾಯತಿಯ 1 ಸ್ಥಾನ, ಬ್ರಹ್ಮಾವರ ತಾಲೂಕಿನ ಕೋಟ ಗ್ರಾಮ ಪಂಚಾಯತಿಯ 1 ಸ್ಥಾನ, ಉಡುಪಿ ತಾಲೂಕಿನ ಬೊಮ್ಮರ ಬೆಟ್ಟು ಗ್ರಾಮ ಪಂಚಾಯತಿಯ 1 ಸ್ಥಾನ, 13-ಕೊಡಿಬೆಟ್ಟು ಗ್ರಾಮ ಪಂಚಾಯತಿಯ 1 ಸ್ಥಾನ, ಕಾರ್ಕಳ ತಾಲೂಕಿನ ಈದು ಗ್ರಾಮ ಪಂಚಾಯತಿಯ 1 sಸ್ಥಾನ, ನಲ್ಲೂರು ಗ್ರಾಮ […]

ಉಡುಪಿ:ಕೆಲಸ ಕಾರ್ಯಗಳಿಗೆ ಕಾರ್ಮಿಕರನ್ನು ನಿಯೋಜಿಸುವ ಮೊದಲು ಅವರ ಸೂಕ್ತ ದಾಖಲೆ ಪಡೆಯಬೇಕು: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಕಾರ್ಮಿಕರ ಸೇವೆಯನ್ನು ಪಡೆಯಲು ಕೆಲಸಗಾರರನ್ನು ನಿಯೋಜಿಸಿಕೊಳ್ಳುವ ಪ್ರತಿಯೊಬ್ಬ ಮಾಲೀಕರು ಅವರ ಗುರುತಿನ ಚೀಟಿ, ಶಾಶ್ವತ ಹಾಗೂ ತಾತ್ಕಲಿಕ ವಾಸ ಸ್ಥಾನದ ವಿವರಗಳನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಈ ವಿವರಗಳನ್ನು ಸಂಬಂಧಿಸಿದ ಸರ್ಕಾರಿ ಕಛೇರಿಗಳಿಗೆ ತಪ್ಪದೇ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಕ್ರಮ ಬಾಂಗ್ಲಾದೇಶೀಯ ವಲಸೆ ಕಾರ್ಮಿಕರಿಗೆ ಹಾಗೂ ನಾಗರೀಕರಿಗೆ ಸಂಬಂಧಿಸಿದಂತೆ ವಿವಿಧ ಸಂಸ್ಥೆಗಳ ಮೂಲಕ ಜಿಲ್ಲೆಯ ಜನರನ್ನು ಜಾಗೃತಗೊಳಿಸುವ ಕುರಿತ ಸಭೆಯಲ್ಲಿ ಮಾತನಾಡುತ್ತಿದ್ದರು. […]

ಕಟಪಾಡಿ:ತ್ರಿಶಾ ಸಂಸ್ಥೆ ಅಟಲ್ ಇನ್‌ಕ್ಯೂಬೇಶನ್ ಸೆಂಟರ್, ನಿಟ್ಟೆ ಯೊಂದಿಗೆ ಒಡಂಬಡಿಕೆ

ಕಟಪಾಡಿ:ವಿದ್ಯಾರ್ಥಿಗಳಿಗೆ ಈಗಿನಿಂದಲೇ ವಾಣಿಜ್ಯೋದ್ಯಮದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ತ್ರಿಶಾ ಸಂಸ್ಥೆ ಅಟಲ್ ಇನ್‌ಕ್ಯೂಬೇಶನ್ ಸೆಂಟರ್, ನಿಟ್ಟೆ ಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು ಈ ಕಾರ್ಯಕ್ರಮವು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ನವೆಂಬರ್ 4 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅಟಲ್ ಇನ್‌ಕ್ಯೂಬೇಶನ್ ಸೆಂಟರ್ (ಎಐಸಿ) ನ ಚೀಫ್ ಎಕ್ಸಿಕ್ಯೂಟಿವ್ ಆಫೀಸರಾದ ಡಾ. ಎ ಪಿ ಆಚಾರ್ ರವರು ಪ್ರಸ್ತುತ ಕಾಲಘಟ್ಟದಲ್ಲಿ ಕೌಶಲ್ಯಗಳನ್ನು ವೃದ್ಧಿಸಿಕೊಂಡು ಹೊಸ ಹೊಸ ಆಲೋಚನೆಯೊಂದಿಗೆ ಉದ್ಯಮಿಯಾಗುವ ಕನಸಿದ್ದವರಿಗೆ ಬೇಡಿಕೆ ಹೆಚ್ಚಿದೆ ಎಂದರು. […]