ಬಂಟಕಲ್ ತಾಂತ್ರಿಕ ಕಾಲೇಜಿನ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

ಉಡುಪಿ: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ಬಂಟಕಲ್‍ನ 2026-27 ನೇ ಸಾಲಿನ ಪ್ರಥಮ ವರ್ಷದ ಇಂಜಿನಿಯರಿಂಗ್ ಶಿಕ್ಷಣಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳ “ಮಾರ್ಗದರ್ಶನ ಕಾರ್ಯಕ್ರಮ”ವು ದಿನಾಂಕ 20 ಸೆಪ್ಟೆಂಬರ್ 2026ರಂದು ವಿದ್ಯಾಲಯದ ಆವರಣದಲ್ಲಿ ಯಶಸ್ವಿಯಾಗಿ ಜರುಗಿತು. ಶ್ರೀ ಸೋದೆ ವಾದಿರಾಜ ಮಠ ಎಜುಕೇಶನ್ ಟ್ರಸ್ಟ್‍ನ ಉಪಾಧ್ಯಕ್ಷರಾದ ಪಿ ಶ್ರೀನಿವಾಸ ತಂತ್ರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಮಾರಂಭದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ, ಇಲ್ಲಿನ ಕುಲಸಚಿವರಾದ ಡಾ. ಪ್ರಸಾದ್ ಬಿ. […]

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ; ಇಬ್ಬರಿಗೆ ಗಾಯ

ಉಡುಪಿ: ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಬಸ್‌ ನಡುವೆ ಅಪಘಾತ ಸಂಭವಿಸಿ, ಇಬ್ಬರು ಗಾಯಗೊಂಡ ಘಟನೆ ಕಾರ್ಕಳ ತಾಲ್ಲೂಕಿನ ಸಾಣೂರು ರಾಮಮಂದಿರ ಡಿವೈಡರ್‌ ಕ್ರಾಸ್‌ ಬಳಿ ಭಾನುವಾರ (ಸೆ.20) ನಡೆದಿದೆ. ಅಪಘಾತದಲ್ಲಿ ರಮಾನಾಥ ರೈ ಅವರು ಅಪಾಯದಿಂದ ಪಾರಾಗಿದ್ದು, ಅವರ ಕಾರು ಚಾಲಕ ಹಾಗೂ ಆಪ್ತ ಸಹಾಯಕ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಕಾರ್ಕಳ–ಮೂಡುಬಿದಿರೆ ಹೆದ್ದಾರಿಯಲ್ಲಿ ಕಾರು ಮತ್ತು ಬಸ್‌ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳ ಮುಂಭಾಗ ಜಖಂಗೊಂಡಿದೆ. […]

ಅಂಚೆ ಅದಾಲತ್

ಉಡುಪಿ: ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಅಕ್ಟೋಬರ್ 7 ರಂದು ಬೆಳಿಗ್ಗೆ 10.30 ಕ್ಕೆ ಮಾಸಿಕ ಅಂಚೆ ಅದಾಲತ್ ನಡೆಯಲಿದ್ದು, ಅಂಚೆ ಗ್ರಾಹಕರು ತಮ್ಮ ದೂರು ಮತ್ತು ಸಲಹೆಗಳಿದ್ದಲ್ಲಿ ಅಕ್ಟೋಬರ್ 5 ರ ಒಳಗಾಗಿ ಇ-ಮೇಲ್ ವಿಳಾಸ [email protected]ಮೂಲಕ ಅಧೀಕ್ಷಕರ ಕಚೇರಿಗೆ ಕಳುಹಿಸಬಹುದಾಗಿದೆ ಅಥವಾ ಅಂಚೆ ಅದಾಲತ್ ನಡೆಯುವ ದಿನದಂದು ಹಾಜರಿದ್ದು ತಮ್ಮ ಸಮಸ್ಯೆಗಳನ್ನು ಸಮಕ್ಷಮ ಚರ್ಚಿಸಿ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಅಂಚೆ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

ವಿವಿಧ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಲಾಗಿರುವ ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವ-ಉದ್ಯೋಗ ಕಾರ್ಯಕ್ರಮಗಳು ಹಾಗೂ ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳು ವೆಬ್‌ಸೈಟ್ https://sevasindhu.karnataka.gov.in ನಲ್ಲಿ ನೇರವಾಗಿ ಅಥವಾ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 17 ಕೊನೆಯ ದಿನ. ಹೆಚ್ಚಿನ […]

ನದಿಗೆ ಬಿದ್ದ ಕಾರು: ಚಾಲಕ, 3 ವರ್ಷದ ಮಗು ರಕ್ಷಣೆ

ಉಡುಪಿ: ಕೊಡವೂರು ಚೆನ್ನಂಗಡಿ ಸಮೀಪ ನದಿಗೆ ಕಾರೊಂದು ಬಿದ್ದು, ಅದರಲ್ಲಿದ್ದ ಚಾಲಕ ಹಾಗೂ ಮೂರು ವರ್ಷದ ಮಗುವನ್ನು ಮೀನುಗಾರರೊಬ್ಬರು ಸಾಹಸದಿಂದ ರಕ್ಷಿಸಿದ ಘಟನೆ ನಡೆದಿದೆ. ಕಾರು ನದಿಗೆ ಬಿದ್ದಿರುವುದನ್ನು ಗಮನಿಸಿದ ಮೀನುಗಾರ ಗಣೇಶ್ ಚೆನ್ನಂಗಡಿ ಅವರು, ಕ್ಷಣವೂ ವಿಳಂಬ ಮಾಡದೆ ತಮ್ಮ ಪ್ರಾಣದ ಹಂಗು ತೊರೆದು ನದಿಗೆ ಧುಮುಕಿದರು. ಕಾರಿನೊಳಗೆ ಸಿಲುಕಿದ್ದ ಚಾಲಕ ಹಾಗೂ ಮೂರು ವರ್ಷದ ಮಗುವನ್ನು ಸುರಕ್ಷಿತವಾಗಿ ಹೊರಕ್ಕೆ ಕರೆತರುವಲ್ಲಿ ಅವರು ಯಶಸ್ವಿಯಾದರು. ನೀರಿನ ಸೆಳೆತದ ನಡುವೆಯೂ ಧೈರ್ಯದಿಂದ ಕಾರ್ಯಾಚರಣೆ ನಡೆಸಿ ಇಬ್ಬರ ಜೀವ […]