ನದಿಗೆ ಬಿದ್ದ ಕಾರು: ಚಾಲಕ, 3 ವರ್ಷದ ಮಗು ರಕ್ಷಣೆ

ಉಡುಪಿ: ಕೊಡವೂರು ಚೆನ್ನಂಗಡಿ ಸಮೀಪ ನದಿಗೆ ಕಾರೊಂದು ಬಿದ್ದು, ಅದರಲ್ಲಿದ್ದ ಚಾಲಕ ಹಾಗೂ ಮೂರು ವರ್ಷದ ಮಗುವನ್ನು ಮೀನುಗಾರರೊಬ್ಬರು ಸಾಹಸದಿಂದ ರಕ್ಷಿಸಿದ ಘಟನೆ ನಡೆದಿದೆ. ಕಾರು ನದಿಗೆ ಬಿದ್ದಿರುವುದನ್ನು ಗಮನಿಸಿದ ಮೀನುಗಾರ ಗಣೇಶ್ ಚೆನ್ನಂಗಡಿ ಅವರು, ಕ್ಷಣವೂ ವಿಳಂಬ ಮಾಡದೆ ತಮ್ಮ ಪ್ರಾಣದ ಹಂಗು ತೊರೆದು ನದಿಗೆ ಧುಮುಕಿದರು. ಕಾರಿನೊಳಗೆ ಸಿಲುಕಿದ್ದ ಚಾಲಕ ಹಾಗೂ ಮೂರು ವರ್ಷದ ಮಗುವನ್ನು ಸುರಕ್ಷಿತವಾಗಿ ಹೊರಕ್ಕೆ ಕರೆತರುವಲ್ಲಿ ಅವರು ಯಶಸ್ವಿಯಾದರು. ನೀರಿನ ಸೆಳೆತದ ನಡುವೆಯೂ ಧೈರ್ಯದಿಂದ ಕಾರ್ಯಾಚರಣೆ ನಡೆಸಿ ಇಬ್ಬರ ಜೀವ […]
ಕಡಿಯಾಳಿ ಸಿದ್ಧಿ ವಿನಾಯಕನ 60ನೇ ವರ್ಷದ ವೈಭವದ ವಿಸರ್ಜನಾ ಮೆರವಣಿಗೆ ಇಂದು

ಉಡುಪಿ: ಉಡುಪಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಕಡಿಯಾಳಿ ಕಾತ್ಯಾಯನಿ ಮಂಟಪದಲ್ಲಿ ಪ್ರತಿಷ್ಠಾಪಿಸಲಾಗಿರುವ ಶ್ರೀ ಸಿದ್ಧಿ ವಿನಾಯಕ ದೇವರ 60ನೇ ವರ್ಷದ ವೈಭವದ ಭವ್ಯ ವಿಸರ್ಜನಾ ಮೆರವಣಿಗೆ ಸೆ.20ರಂದು (ಭಾನುವಾರ) ಸಂಜೆ 4 ಗಂಟೆಗೆ ನಡೆಯಲಿದೆ. ಕಡಿಯಾಳಿಯಿಂದ ಆರಂಭವಾಗುವ ಮೆರವಣಿಗೆಯು ಸ್ತಬ್ಧಚಿತ್ರಗಳು ಹಾಗೂ ಮಂಗಳವಾದ್ಯಗಳೊಂದಿಗೆ ಉಡುಪಿಯ ಪ್ರಮುಖ ರಾಜಮಾರ್ಗಗಳಲ್ಲಿ ಸಂಚರಿಸಲಿದೆ. ಕಲ್ಸಂಕ, ರಥಬೀದಿ, ಬಡಗುಪೇಟೆ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಸಾಗಿದ ಬಳಿಕ ಶ್ರೀ ಸಿದ್ಧಿ ವಿನಾಯಕನನ್ನು ರಾತ್ರಿ ಸುಮಾರು 9.30ಕ್ಕೆ ಮಲ್ಪೆ ಸಮುದ್ರ ತೀರಕ್ಕೆ ಕೊಂಡೊಯ್ಯಲಾಗುವುದು. […]
ಜನಸಾಮಾನ್ಯರ ಮನೆ ಬಾಗಿಲಿಗೆ ಸರಕಾರದ ಸೌಲಭ್ಯ: ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್

ಉಡುಪಿ: ನಮ್ಮ ಸರ್ಕಾರ ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡಲು ಸಚಿವರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜನರ ಬಳಿ ಹೋಗಿ ಸೇವೆ ನೀಡಬೇಕು ಎಂಬ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಸಭೆಗಳನ್ನು ಜಾರಿಗೆ ತಂದಿದೆ. ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರದ ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಹೇಳಿದರು. ಅವರು ಇಂದು ಪ್ರಜಾಸೇವೆ ಇಲಾಖೆ ತಾಲೂಕು ಆಡಳಿತ ಕಾಪು ಇವರ ವತಿಯಿಂದ ಕಾಪು ತಾಲೂಕು […]
ಉಡುಪಿಯ ಬಲ್ಲಾಳ್ ಮೊಬೈಲ್ಸ್’ನಲ್ಲಿ ಐಫೋನ್ 18 ಪ್ರೊ, ಪ್ರೊ ಮ್ಯಾಕ್ಸ್ ಬಿಡುಗಡೆ

ಉಡುಪಿ: ನಗರದ ಬಲ್ಲಾಳ್ ಮೊಬೈಲ್ಸ್ನಲ್ಲಿ ಐಫೋನ್ 18 ಪ್ರೊ ಹಾಗೂ ಐಫೋನ್ 18 ಪ್ರೊ ಮ್ಯಾಕ್ಸ್ ಮೊಬೈಲ್ಗಳ ಬಿಡುಗಡೆ ಸಮಾರಂಭ ಶನಿವಾರ ನಡೆಯಿತು. ಸುಷ್ಮಾರಾಜ್ ದಂಪತಿ ನೂತನ ಐಫೋನ್ಗಳನ್ನು ಅಧಿಕೃತವಾಗಿ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು. ಬಿಡುಗಡೆಗೊಂಡ ಮೊದಲ ಐಫೋನ್ 18 ಪ್ರೊ ಮ್ಯಾಕ್ಸ್ ಅನ್ನು ಬಲ್ಲಾಳ್ ಫೈನಾನ್ಸ್ ಪ್ರೈವೇಟ್ ಲಿಮಿಟೆಡ್ನ ಪತಾಂಜಲಿ ಬಲ್ಲಾಳ್ ಅವರಿಗೆ ಮಾರಾಟ ಮಾಡಲಾಯಿತು. ಈ ಸಂದರ್ಭದಲ್ಲಿ ಐಫೋನ್ ಸಂಸ್ಥೆಯ ಮುಖ್ಯಸ್ಥರು, ಬಲ್ಲಾಳ್ ಮೊಬೈಲ್ಸ್ನ ಮುಖ್ಯಸ್ಥ ಸಂದೇಶ ಬಲ್ಲಾಳ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಸೆ.26ರಂದು ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಮಂಗಳೂರು ವಿಭಾಗದ ವತಿಯಿಂದ 2026ನೇ ಸಾಲಿನ ‘ಅಧ್ಯಾಪಕ ಭೂಷಣ ಪ್ರಶಸ್ತಿ’ ಪ್ರದಾನ ಸಮಾರಂಭ ಸೆಪ್ಟೆಂಬರ್ 26ರಂದು ಮಧ್ಯಾಹ್ನ 2ಗಂಟೆಗೆ ಉಡುಪಿಯ ಕಿದಿಯೂರು ಹೋಟೆಲ್ನ ಮಾಧವ ಕೃಷ್ಣ ಸಭಾಭವನದಲ್ಲಿ ನಡೆಯಲಿದೆ. ತ್ರಿಷಾ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳ ಅಧ್ಯಾಪಕರ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿ […]