ಮೀನುಗಾರಿಕಾ ಬಂದರಿಗೆ ಸಿಎಂ ದಿಢೀರ್ ಭೇಟಿ: ವ್ಯಾಪಾರ ಸ್ಥಗಿತಕ್ಕೆ ಅಧಿಕಾರಿಗಳ ವಿರುದ್ಧ ಅಸಮಾಧಾನ, ಬಗೆಬಗೆಯ ಮೀನು ಖರೀದಿಸಿದ ಡಿಕೆಶಿ

ಮಂಗಳೂರು: ಶುಕ್ರವಾರ ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬೆಳಗ್ಗೆ ಮಂಗಳೂರು ಮೀನುಗಾರಿಕಾ ಬಂದರಿಗೆ ದಿಢೀರ್ ಭೇಟಿ ನೀಡಿ ಮೀನುಗಾರರ ಸಮಸ್ಯೆಗಳನ್ನು ಆಲಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರೊಂದಿಗೆ ಬಂದರಿಗೆ ಆಗಮಿಸಿದ ಮುಖ್ಯಮಂತ್ರಿ, ಧಕ್ಕೆ ಪ್ರದೇಶದಲ್ಲಿ ಕಾಲ್ನಡಿಗೆಯಲ್ಲಿ ಸಂಚರಿಸಿ ಮೀನುಗಾರಿಕಾ ಬೋಟ್‌ಗಳು, ಮೀನು ಇಳಿಸುವಿಕೆ ಹಾಗೂ ಮಾರುಕಟ್ಟೆ ಚಟುವಟಿಕೆಗಳನ್ನು ಪರಿಶೀಲಿಸಿದರು. ಮೀನುಗಾರರು, ವ್ಯಾಪಾರಿಗಳೊಂದಿಗೆ ಮಾತುಕತೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು. ಮುಖ್ಯಮಂತ್ರಿಗಳ ಭೇಟಿಯ ಹಿನ್ನೆಲೆಯಲ್ಲಿ […]

ಸೆ. 21 ರಂದು ನೇರ ಸಂದರ್ಶನ

ಉಡುಪಿ: ನಗರದ ಓಮ್ನಿಯಾನ್ ಪ್ರೀಮಿಡಿಯಾ ಪ್ರೈವೇಟ್ ಲಿಮಿಟೆಡ್, ರೀಗಲ್ ಎಂಟ್ರಿ, 3 ನೇ ಮಹಡಿ, ಕರಾವಳಿ ಬೈಪಾಸ್ ಬಳಿ, ಅಂಬಲಪಾಡಿ ಉಡುಪಿ ಇಲ್ಲಿ ಸೆಪ್ಟಂಬರ್ 21 ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. 3ಡಿ / ಪೋಟೋಶಾಪ್ ಮತ್ತು ಅಕೌಂಟಿಂಗ್ ಹುದ್ದೆಗಳಿಗೆ ಪಿ.ಯು.ಸಿ, ಎಂ.ಕಾಮ್ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ […]

ಕಸ್ತೂರಿರಂಗನ್ ವರದಿ: ಜನರ ಅಭಿಪ್ರಾಯವೇ ನನ್ನ ಅಭಿಪ್ರಾಯ — ಸಿಎಂ ಡಿಕೆಶಿ

ಉಡುಪಿ: ‘ನಾನು ಯಾರಿಗೂ ಉತ್ತರ ಕೊಡಲು ಬಂದಿಲ್ಲ. ಜನರ ಬೇಡಿಕೆ ಹಾಗೂ ಭಾವನೆಗಳನ್ನು ಅವರಿಂದಲೇ ತಿಳಿದುಕೊಳ್ಳಲು ಬಂದಿದ್ದೇನೆ. ಜನರ ಅಭಿಪ್ರಾಯವೇ ನನ್ನ ಅಭಿಪ್ರಾಯವಾಗಬೇಕು’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.ಕಸ್ತೂರಿರಂಗನ್ ವರದಿಯಿಂದ ಆತಂಕಕ್ಕೊಳಗಾಗಿರುವ ಪಶ್ಚಿಮ ಘಟ್ಟ ವ್ಯಾಪ್ತಿಯ ಗ್ರಾಮಸ್ಥರು, ಮಲೆಕುಡಿಯರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳ ಅಹವಾಲು ಆಲಿಸಲು ಶುಕ್ರವಾರ ಹೆಬ್ರಿಗೆ ಆಗಮಿಸಿದ್ದ ಅವರು, ಸಾವಿರಾರು ಜನರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ‘ವಿಧಾನಸೌಧದಲ್ಲಿ ಕುಳಿತು ತೀರ್ಮಾನ ಕೈಗೊಳ್ಳಬಹುದಿತ್ತು. ಆದರೆ ಸತ್ಯಾಸತ್ಯತೆ ಹಾಗೂ ವಾಸ್ತವ ಪರಿಸ್ಥಿತಿಯನ್ನು ತಿಳಿದುಕೊಳ್ಳಲು […]

ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ವಿದ್ಯಾ ‌ವಿನಾಯಕ ಮಹೋತ್ಸವ ಸಂಪನ್ನ

6ನೇ ವರ್ಷದ ವಿದ್ಯಾ ‌ವಿನಾಯಕ ಮಹೋತ್ಸವವನ್ನು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಸೆಪ್ಟೆಂಬರ್ 14ರಿಂದ ಸೆಪ್ಟೆಂಬರ್ 16ರವರೆಗೆ ಮೂರು ದಿನಗಳ ಕಾಲ ಭಕ್ತಿ, ಸಂಸ್ಕೃತಿ, ಚಿಂತನೆ ಹಾಗೂ ಸಂಭ್ರಮದೊಂದಿಗೆ ಆಚರಿಸಲಾಯಿತು.ಸೆಪ್ಟೆಂಬರ್ 14ರಂದು ಬೆಳಿಗ್ಗೆ ಗಣಪತಿ ಮೂರ್ತಿ ಪ್ರತಿಷ್ಠಾಪನೆ, ಗಣಹೋಮ ಹಾಗೂ ಭಜನಾ ಕಾರ್ಯಕ್ರಮಗಳ ಮೂಲಕಮಹೋತ್ಸವಕ್ಕೆ ಭಕ್ತಿಪೂರ್ವಕ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಸಂಸ್ಥೆಯ ಸಿಬ್ಬಂದಿ ಶ್ರದ್ಧೆಯಿಂದ ಭಾಗವಹಿಸಿದರು.ಮಹೋತ್ಸವದ ಎರಡನೇ ದಿನ ಪಾದೇಕಲ್ಲು ವಿಷ್ಣು ಭಟ್ ಅವರಿಂದ ‘ಚಿಂತನ–ಮಂಥನ’ ಕಾರ್ಯಕ್ರಮ ನಡೆಯಿತು. ಭಾರತೀಯ ಸಂಸ್ಕೃತಿ, ಮೌಲ್ಯಗಳು, ಯುವಜನತೆ […]

ಹೆಬ್ರಿಗೆ ಬಂದಿಳಿದ ಸಿಎಂ; ಕಸ್ತೂರಿರಂಗನ್ ವರದಿ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ ಸಿಎಂ

ಉಡುಪಿ: ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆ ಮುಗಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ಸಂಜೆ ಹೆಲಿಕಾಪ್ಟರ್ ಮೂಲಕ ಹೆಬ್ರಿಗೆ ಆಗಮಿಸಿದರು. ಹೆಬ್ರಿಯ ಸರ್ಕಾರಿ ಪದವಿ ಕಾಲೇಜು ಮೈದಾನದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಹೆಲಿಪ್ಯಾಡ್‌ ಗೆ ಮುಖ್ಯಮಂತ್ರಿ ಆಗಮಿಸಿದರು. ಬಳಿಕ ಶಾಸಕರು, ಅಧಿಕಾರಿಗಳು, ಕಾಂಗ್ರೆಸ್ ಮುಖಂಡರು ಸಿಎಂ ಅವರನ್ನು ಸ್ವಾಗತಿಸಿದರು. ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಹೆಬ್ರಿಯ ಸರ್ಕಾರಿ ಪದವಿ ಕಾಲೇಜು ಮೈದಾನದಲ್ಲಿ ನಡೆಯಲಿರುವ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ. ಕಸ್ತೂರಿರಂಗನ್ ವರದಿಯಿಂದ ಉಡುಪಿ ಜಿಲ್ಲೆಯ ಗ್ರಾಮೀಣ […]