ಉಡುಪಿ: ವಿವಾಹ ನಿಶ್ಚಿತಾರ್ಥ ನಡೆದಿದ್ದ ಯುವತಿ ನೇಣಿಗೆ ಶರಣು
ಉಡುಪಿ: ಒಂದೂವರೆ ತಿಂಗಳ ಹಿಂದೆ ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ನ.17ರಂದು ಮೃತಪಟ್ಟಿದ್ದಾರೆ. ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ ಕೀರ್ತನಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಮನೆಯ ರೂಮ್ ನಲ್ಲಿ ಕುತ್ತಿಗೆಗೆ ಶಾಲು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಬಳಿಕ ಮನೆಯವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ನ. 17ರಂದು ಕೊನೆಯುಸಿರೆಳೆದಿದ್ದಾರೆ. ಕೀರ್ತನಾ ಅವರು […]
ಉಡುಪಿ:ಕೆ.ಎಸ್.ಟಿ.ಎ ವಾರ್ಷಿಕ ಬಹುಮಾನ : ಅರ್ಜಿ ಅಹ್ವಾನ
ಉಡುಪಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಜ್ಞಾನ,ತಂತ್ರಜ್ಞಾನ, ಇಂಜಿನಿಯರಿಂಗ್, ಕೃಷಿ ಮತ್ತು ವೈದ್ಯಕೀಯ (ಸ್ಟೀಮ್) ವಿಷಯಗಳ ಸಂವಹನಕ್ಕೆ ದಿವ್ಯಾಂಗ ವ್ಯಕ್ತಿಯ ಅತ್ಯುತ್ತಮ ಪ್ರಯತ್ನಗಳನ್ನು ಗುರುತಿಸುವ ಉದ್ದೇಶದಿಂದ ಕೆ.ಎಸ್.ಟಿ.ಎ ವಾರ್ಷಿಕ ಬಹುಮಾನ (ದಿವ್ಯಾಂಗ) ಕ್ಕೆ ಅರ್ಹರಿಂದ ಅರ್ಜಿ ಹಾಗೂ ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 2025 ರ ಜನವರಿ 28 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್ www.kstacademy.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಛೇರಿಪ್ರಕಟಣೆ ತಿಳಿಸಿದೆ.
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ ಕೌಂಟರ್: ಎಎನ್ ಎಫ್ ಪೊಲೀಸರ ಕಾರ್ಯ ವೈಖರಿ ಶ್ಲಾಘನೀಯ: ವಿ.ಸುನಿಲ್ ಕುಮಾರ್
ಕಾರ್ಕಳ: ರಾಜ್ಯದಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಹೆಚ್ಚುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯರಿಗೆ ನಗರ ನಕ್ಸಲರ ಮೇಲೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿರುವ ಪ್ರೀತಿಯೇ ಕಾರಣವಾಗಿದೆ ಎಂದು ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ನ ಬಳಿಕ ಕಾರ್ಕಳ ಕ್ಷೇತ್ರದ ಶಾಸಕ ವಿ.ಸುನಿಲ್ ಕುಮಾರ್ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ದೇಶವಿರೋಧಿ ಕೃತ್ಯಗಳ ಬೆಂಬಲಿಸುತ್ತಿದ್ದಾರೆ. ಇದು ಪಶ್ಚಿಮ ಘಟ್ಟದ ಗ್ರಾಮಗಳ ಶಾಂತಿ ಕೆಡಿಸುತ್ತಿದೆ. ಸ್ಥಳೀಯರ ಬೆಂಬಲವಿಲ್ಲದೆ ಅಳಿದು ಹೋಗುವ ಹಂತಕ್ಕೆ ತಲುಪಿದ್ದ ನಕ್ಸಲ್ ಚಟುವಟಿಕೆ ಕಾಂಗ್ರೆಸ್ ಸರಕಾರ […]
71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಂಭ್ರಮ: ಆರ್ಥಿಕತೆಗೆ ಶಕ್ತಿ ಸಹಕಾರಿ ಸಂಘಗಳು – ರಾಘವೇಂದ್ರ ಕುಲಾಲ್
ಸಹಕಾರ ಸಂಘಗಳು ಭಾರತದ ಸಾಮಾಜಿಕ-ಆರ್ಥಿಕ ರಚನೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ, ಸಮಾಜದ ವಿವಿಧ ವರ್ಗಗಳ ನಡುವೆ ಸಹಯೋಗವನ್ನು ಮತ್ತು ಸಬಲೀಕರಣವನ್ನು ಉತ್ತೇಜಿಸುತ್ತವೆ. ಈ ಸಮಾಜಗಳು ನಿಮ್ಮ ಸಮುದಾಯದ ಒಳಗೊಳ್ಳುವಿಕೆ ಮತ್ತು ಆ ಮೂಲಕ ಒಟ್ಟಾರೆ ಯೋಗಕ್ಷೇಮಕ್ಕಾಗಿ ಅಪಾರ ಸಾಮರ್ಥ್ಯವನ್ನು ಹೊಂದಿವೆ. ಇಂದಿನ ನಮ್ಮ ಆರ್ಥಿಕ ವ್ಯವಸ್ಥೆಯಲ್ಲಿ ಸಹಕಾರ ಸಂಘಗಳು ಪ್ರಧಾನ ಪಾತ್ರ ವಹಿಸುತ್ತಿವೆ. ಕಳೆದ ಶತಮಾನದ ಸಣ್ಣ ಪ್ರಮಾಣದಲ್ಲಿ ಪ್ರಾರಂಭಗೊಂಡು ಬೃಹತ್ ಪ್ರಮಾಣದ ಸಂಸ್ಥೆಗಳಾಗಿ ದೇಶಾದ್ಯಂತ ನಮ್ಮ ನಿತ್ಯ ಜೀವನದ ಎಲ್ಲಾ ಸಾರ್ವಜನಿಕರ ಸ್ವಯಂ ಪ್ರೇರಿತ ಚಳುವಳಿಯಾಗಿದ್ದಾಗ್ಯೂ, […]
ಉಡುಪಿ:ನವೆಂಬರ್ 19 ರಿಂದ ಡಿಸೆಂಬರ್ 10 ರ ವರೆಗೆ ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನ – ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ
ಉಡುಪಿ: ನವೆಂಬರ್ 19 ರಿಂದ ಡಿಸೆಂಬರ್ 10 ರ ವರೆಗೆ ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನ ಹಮ್ಮಿಕೊಳ್ಳಲಾಗಿದೆ. ಸದರಿ ದಿನಾಚರಣೆ ಬಯಲು ಬಹಿರ್ದೆಸೆ ಮುಕ್ತ ಸ್ಥಿತಿಯ ಸ್ಥಾನಮಾನವನ್ನು ಉಳಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ವಿಶ್ವ ಶೌಚಾಲಯ ದಿನಾಚರಣೆ ಪ್ರಯುಕ್ತ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ […]