ಹುಲಿಕುಣಿತಕ್ಕೆ ಮನಸೋತ ಯತ್ನಾಳ್; ತಾಸೆ ಪೆಟ್ಟಿಗೆ ಸ್ಟೆಪ್!

ಉಡುಪಿ: ಬ್ರಹ್ಮಾವರ ಸಾರ್ವಜನಿಕ ಗಣೇಶೋತ್ಸವದ ವಿಸರ್ಜನೆ ಮೆರವಣಿಗೆಯ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಹುಲಿವೇಷದ ಊದುಪೂಜೆ ಕಾರ್ಯಕ್ರಮದಲ್ಲಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಭಾಗವಹಿಸಿ ಹುಲಿಕುಣಿತದ ಸೊಬಗನ್ನು ಸವಿದರು. ವಾರಂಬಳ್ಳಿ ಫ್ರೆಂಡ್ಸ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹುಲಿವೇಷಧಾರಿಗಳ ವಿಶೇಷ ಕುಣಿತವನ್ನು ವೀಕ್ಷಿಸಿದ ಯತ್ನಾಳ್, ಹುಲಿವೇಷದ ತಾಸೆಯ ಪೆಟ್ಟಿಗೆ ಮನಸೋತು ಸ್ವತಃ ಕುಣಿತಕ್ಕೆ ಹೆಜ್ಜೆ ಹಾಕಿದರು. ಹುಲಿವೇಷಧಾರಿಗಳೊಂದಿಗೆ ಕೆಲಕಾಲ ಸ್ಟೆಪ್ ಹಾಕಿ, ಹುಲಿಯಂತೆ ಕುಣಿದು ಸಂಭ್ರಮಿಸಿದರು. ಯತ್ನಾಳ್ ಅವರ ಹುಲಿಕುಣಿತದ ದೃಶ್ಯ ಕಾರ್ಯಕ್ರಮದಲ್ಲಿ ನೆರೆದಿದ್ದವರ ಗಮನ ಸೆಳೆಯಿತು.
ಜಿಲ್ಲಾ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಎಸ್ಎಂಎಸ್ ವಿದ್ಯಾರ್ಥಿಗಳ ಅಮೋಘ ಸಾಧನೆ; 9 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಬ್ರಹ್ಮಾವರ: ಕುಂದಾಪುರದ ಬಂಡಾರ್ಕರ್ಸ್ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಕುಸ್ತಿ ಸ್ಪರ್ಧೆಯಲ್ಲಿ ಬ್ರಹ್ಮಾವರದ ಎಸ್ಎಂಎಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಪ್ರದರ್ಶನ ನೀಡಿ ಗಮನಾರ್ಹ ಸಾಧನೆ ಮಾಡಿದ್ದಾರೆ. ವಿವಿಧ ತೂಕದ ವಿಭಾಗಗಳಲ್ಲಿ ನಡೆದ ಫ್ರೀಸ್ಟೈಲ್ ಹಾಗೂ ಗ್ರೀಕೋ-ರೋಮನ್ ವಿಭಾಗಗಳಲ್ಲಿ SMS ಕಾಲೇಜಿನ ವಿದ್ಯಾರ್ಥಿಗಳು ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕಗಳನ್ನು ಪಡೆದುಕೊಂಡಿದ್ದಾರೆ. ಇವರಲ್ಲಿ 9 ವಿದ್ಯಾರ್ಥಿಗಳು ರಾಜ್ಯಮಟ್ಟದ ಕುಸ್ತಿ ಸ್ಪರ್ಧೆಗೆ ಆಯ್ಕೆಯಾಗಿರುವುದು ಕಾಲೇಜಿನ ಕ್ರೀಡಾ ಸಾಧನೆಗೆ ಮತ್ತೊಂದು ಹೆಮ್ಮೆಯ ಗರಿಯಾಗಿದೆ. ಚಿನ್ನದ ಪದಕ ಪಡೆದವರಲ್ಲಿ […]
ಸಾರ್ವಜನಿಕ ಗಣೇಶೋತ್ಸವ ಮೆರವಣಿಗೆ ಪ್ರಯುಕ್ತ ಮಾರ್ಗ ಬದಲಾವಣೆ

ಉಡುಪಿ: ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ಎದುರು ಸಾರ್ವಜನಿಕ ಗಣೇಶೋತ್ಸವ ಸೆ. 14 ರಿಂದ 18 ರ ವರೆಗೆ ನಡೆಯಲಿದ್ದು, ಸೆ. 18 ರಂದು ಸದ್ರಿ ಗಣೇಶಮೂರ್ತಿಯ ವಿಸರ್ಜನೆಯು ನಡೆಯಲಿರುತ್ತದೆ. ಮೆರವಣಿಗೆಯು 169 ಎ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿ ಬರುವುದರಿಂದ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆ ಇರುವುದರಿಂದ ಸದ್ರಿ ಸಂಚಾರ ಅಡಚಣೆ ನಿಯಂತ್ರಣ ಉದ್ದೇಶದಿಂದ ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ಸಾರ್ವಜನಿಕ ಗಣೇಶೋತ್ಸವ ಮೆರವಣಿಗೆಯ ಪ್ರಯುಕ್ತ ರಾಷ್ಟ್ರೀಯ ಹೆದ್ದಾರಿ 169 (ಎ) ರ ಮಾರ್ಗದಲ್ಲಿ […]
ಜಲಸಂಪನ್ಮೂಲ ಇಲಾಖೆ ಸಚಿವರ ಪ್ರವಾಸ ಕಾರ್ಯಕ್ರಮ

ಉಡುಪಿ: ರಾಜ್ಯ ಸರ್ಕಾರದ ಜಲ ಸಂಪನ್ಮೂಲ ಇಲಾಖೆ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಸೆಪ್ಟಂಬರ್ 18 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 7.45 ಕ್ಕೆ ಕಾರ್ಕಳಕ್ಕೆ ಆಗಮಿಸಿ, ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಸಚಿವರ ಪ್ರವಾಸ ಕಾರ್ಯಕ್ರಮ

ಉಡುಪಿ: ರಾಜ್ಯದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಸೆಪ್ಟಂಬರ್ 18 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಮಧ್ಯಾಹ್ನ 3 ಗಂಟೆಗೆ ಹೆಬ್ರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದ ಹೆಲಿಪ್ಯಾಡ್ಗೆ ಆಗಮಿಸಿ, ನಂತರ ಹೆಬ್ರಿಯ ಸರ್ಕಾರಿ ಪಿ.ಯು ಕಾಲೇಜಿನ ಆವರಣದಲ್ಲಿ ನಡೆಯಲಿರುವ ಕಸ್ತೂರಿರಂಗನ್ ವರದಿಗೆ ಸಂಬಂಧಪಟ್ಟಂತೆ ಏರ್ಪಡಿಸಲಾಗಿರುವ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಭಾಗವಹಿಸಿ, ನಂತರ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.