ಉಡುಪಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಹರಿದ ಕ್ರೈನ್

ಉಡುಪಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕ್ರೈನ್ ಹರಿದ ಘಟನೆ ಉಡುಪಿ ಪೆರಂಪಳ್ಳಿಯ ಹೆರ್ಗ ಸೊಸೈಟಿಯ ಮುಂಭಾಗದಲ್ಲಿ ನಡೆದಿದೆ. ವ್ಯಕ್ತಿಯು ಕ್ರೈನ್ ನ ಚಕ್ರದಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಎದುರಿನಲ್ಲಿ ಬರುತ್ತಿದ್ದ ಕಾರಿಗೆ ಸೈಡ್ ಕೊಡುವ ಭರದಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಚಾಲಕ ಕ್ರೈನ್ ಹರಿಸಿದ್ದಾನೆ. ಬಳಿಕ ಕ್ರೈನ್ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಭಯಾನಕ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಫೆ.21ರಂದು “ಕುದ್ರೋಳಿ ತೀರ್ಥಾಟನೆ” ನಮ್ಮ ನಡಿಗೆ ಶ್ರೀ ಗುರುವಿನೆಡೆಗೆ ಪಾದಯಾತ್ರೆ

ಉಡುಪಿ: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ನೇತೃತ್ವದಲ್ಲಿ ವಿವಿಧ ಬಿಲ್ಲವ ಸಂಘಟನೆಗಳ ಸಹಯೋಗದಲ್ಲಿ “ಕುದ್ರೋಳಿ ತೀರ್ಥಾಟನೆ” ನಮ್ಮ ನಡಿಗೆ ಶ್ರೀ ಗುರುವಿನೆಡೆಗೆ ಪಾದಯಾತ್ರೆಯು ಫೆ. 21ರಂದು ಮಂಗಳೂರಿನಲ್ಲಿ ನಡೆಯಲಿದೆ ಎಂದು ಕ್ಷೇತ್ರದ ಪ್ರತಿನಿಧಿ ಜಯಾನಂದ್ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 9 ಗಂಟೆಗೆ ಸೆಂಟ್ರಲ್ ರೈಲ್ವೇ ನಿಲ್ದಾಣದಿಂದ ಆರಂಭಗೊಳ್ಳುವ ತೀರ್ಥಾಟನೆಯು ನಗರದಲ್ಲಿ ಸುಮಾರು 7 ಕಿ.ಮೀ.ಗಳ ನಡಿಗೆಯ ಮೂಲಕ 11 ಗಂಟೆಗೆ ಕುದ್ರೋಳಿ ಕ್ಷೇತ್ರವನ್ನು ತಲುಪಲಿದೆ. ಗುರು ಪ್ರಾರ್ಥನೆಯೊಂದಿಗೆ ಆರಂಭಗೊಳ್ಳುವ ಈ ತೀರ್ಥಾಟನೆಯು ಕ್ಷೇತ್ರ […]
ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ; ಯುವತಿ ಮೃತ್ಯು.!

ಬೆಂಗಳೂರು: ಯುವತಿ ರಸ್ತೆ ದಾಟುತ್ತಿದ್ದ ವೇಳೆ ಅತೀ ವೇಗವಾಗಿ ಬಂದ ಬುಲೆಟ್ ಬೈಕ್ ಸವಾರನೊಬ್ಬ ಯುವತಿಗೆ ಡಿಕ್ಕಿ ಹೊಡೆದಿದ್ದ ಪರಿಣಾಮ ಯುವತಿಯು ಮೃತಪಟ್ಟಿದ್ದಾರೆ. ಘಟನೆಯು ರಾಜ್ಕುಮಾರ್ ರಸ್ತೆಯ ಹೆಚ್ಡಿಎಫ್ಸಿ ಬ್ಯಾಂಕ್ ಬಳಿ ಫೆ.16 ರಂದು ನಡೆದಿದೆ. ಮೃತಪಟ್ಟ ಯುವತಿಯನ್ನು ಲಗ್ಗೆರೆ ಬಳಿಯ ಕೆಂಪೇಗೌಡ ಲೇಔಟ್ ನಿವಾಸಿ 27 ವರ್ಷದ ಯೋಗೇಶ್ವರಿ ಎಂದು ಗುರುತಿಸಿದೆ. ಯೋಗೇಶ್ವರಿ, ನಿನ್ನೆ ಮಧ್ಯಾಹ್ನ ತಮ್ಮ ಕೆಲಸದ ಸ್ಥಳದ ಸಮೀಪ ಊಟಕ್ಕೆಂದು ರಸ್ತೆ ದಾಟುತ್ತಿದ್ದರು. ಈ ಸಂದರ್ಭದಲ್ಲಿ ಅತಿ ವೇಗವಾಗಿ ಬಂದ ಬೈಕ್ ಸವಾರ […]
ಮಲ್ಪೆ: ನೌಕಾಪಡೆಯ ರಹಸ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನೆ ಪ್ರಕರಣ: ಮತ್ತೋರ್ವ ಆರೋಪಿ ಸೆರೆ.

ಮಲ್ಪೆ: ಮಲ್ಪೆ ಕೊಚ್ಚಿನ್ ಶಿಪ್ಯಾರ್ಡ್ನ ನೌಕರರು ಭಾರತದ ನೌಕಾಸೇನೆಗೆ ಸಂಬಂಧಪಟ್ಟ ವಿವಿಧ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಅನಧಿಕೃತವಾಗಿ ಶೇರ್ ಮಾಡಿ, ಅಕ್ರಮ ಲಾಭ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೇರಿದೆ. ಪಶ್ಚಿಮ ಬಂಗಾಲ ಮೂಲದ ಪ್ರಸ್ತುತ ಕೇರಳ ರಾಜ್ಯದ ಇಡುಕಿ ಜಿಲ್ಲೆಯ ಮರಾಯು ಗ್ರಾಮದ ಆಲಿಫ್ ಇಸ್ಲಾಮ್(21) ಬಂಧಿತ ಆರೋಪಿ. ಈ ಪ್ರಕರಣದಲ್ಲಿ ಈ ಹಿಂದೆ 2025ರ ಡಿ.21ರಂದು ಗುಜರಾತ್ ರಾಜ್ಯದ ಹೀರೇಂದ್ರ […]
ನಟಿ ಉಮಾಶ್ರಿ ಸುರಭಿ ಬಿಂದುಶ್ರೀ ಪ್ರಶಸ್ತಿಗೆ ಆಯ್ಕೆ

ಬೈಂದೂರು: ಸುರಭಿ ಬೈಂದೂರು ಸಾಂಸ್ಕೃತಿಕ, ಸಾಹಿತ್ಯ, ಸೇವಾ ಪ್ರತಿಷ್ಠಾನ ವತಿಯಿಂದ ಫೆ. 19ರಿಂದ 22ರವರೆಗೆ ‘ಸುರಭಿ ಜೈಸಿರಿ 2026’ ಕಾರ್ಯಕ್ರಮ ನಡೆಯಲಿದ್ದು, ಈ ಬಾರಿಯ ಸುರಭಿ ಬಿಂದುಶ್ರೀ ಪ್ರಶಸ್ತಿಗೆ ರಂಗಭೂಮಿ, ಚಲನಚಿತ್ರ ನಟಿ ಉಮಾಶ್ರೀ ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಆನಂದ ಮದ್ದೋಡಿ ತಿಳಿಸಿದರು. ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಶಸ್ತಿಯು ₹25 ಸಾವಿರ ನಗದು, ಚಿನ್ನದ ಪದಕ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. ದಿ.ಹೊಸಾಡು ಸುಬ್ರಾಯ ಶೇರುಗಾರ್ ಸಂಸ್ಮರಣೀಯ ಸಾಂಸ್ಕೃತಿಕೋತ್ಸವ ಪ್ರತಿದಿನ ಸಂಜೆ 6ಕ್ಕೆ ಇಲ್ಲಿನ […]